ಯಾದಗಿರಿ: ಜಿಲ್ಲೆಯ ಪದವಿಪೂರ್ವ ಕಾಲೇಜಗಳಲ್ಲಿ ಹೆಚ್ಚಿನ ಶುಲ್ಕ ವಸೂಲಿ ಆರೋಪ ಜಿಲ್ಲೆಯಾದ್ಯಂತ ಪದವಿ ಪೂರ್ವ ಕಾಲೇಜುಗಳಲ್ಲಿ ಕೇಳಿ ಬರುತ್ತಿದ್ದು ಸರ್ಕಾರ ನಿಗಧಿ ಪಡಿಸಿದ್ದಕ್ಕಿಂತ ಹೆಚ್ಚು ಶುಲ್ಕವನ್ನು ವಸೂಲಿ ಮಾಡುತ್ತಿರುವುದಾಗಿ ಮತ್ತು ಸಮವಸ್ತ್ರ ಖರೀದಿಗಾಗಿ ವಿದ್ಯಾರ್ಥಿಗಳಿಂದ ಅಧಿಕ ಹಣ ಪಡೆದು ಕಳಪೆ ಗುಣಮಟ್ಟದ ಬಟ್ಟೆಗಳನ್ನು ಮಾರಾಟ ಮಾಡುತ್ತಿದ್ದಾರೆ ಎಂದು ಈ ಕಛೇರಿಗೆ ದೂರು ಸಲ್ಲಿಸಿರುತ್ತಾರೆ. ಮುಂದುವರೆದು ಜಿಲ್ಲೆಯ ಎಲ್ಲಾ ಕಾಲೇಜುಗಳಲ್ಲಿ ಸರ್ಕಾರ ನಿಗದಿಪಡಿಸಿದ ಶುಲ್ಕಗಳ ಮಾಹಿತಿಯನ್ನು ಸೂಚನಾ ಫಲಕದಲ್ಲಿ ಪ್ರಕಟಿಸಲು ಕೋರಿರುತ್ತಾರೆ.
ಪ್ರಯುಕ್ತ ಜಿಲ್ಲೆಯ ಎಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರುಗಳು ಸರ್ಕಾರ ನಿಗಧಿಪಡಿಸಿರುವ ಶುಲ್ಕದ ವಿವರಗಳನ್ನು ಸೂಚನಾ ಫಲಕದಲ್ಲಿ ಪ್ರಕಟಿಸುವುದು ಮತ್ತು ಅದರಂತೆ ವಿದ್ಯಾರ್ಥಿಗಳಿಂದ ಶುಲ್ಕಗಳನ್ನು ಪಡೆಯಲು ಈ ಮೂಲಕ ತಿಳಿಸಲಾಗಿದೆ. ಒಂದು ವೇಳೆ ನಿಯಮ ಮೀರಿ ವಿದ್ಯಾರ್ಥಿಗಳಿಂದ ಅಧಿಕ ಶುಲ್ಕ ವಸೂಲು ಮಾಡಿರುವುದು ಮತ್ತು ವಿದ್ಯಾರ್ಥಿಗಳಿಂದ ಸಮವಸ್ತ್ರ ಖರೀದಿಗಾಗಿ ಹಣ ವಸೂಲು ಮಾಡುವುದು ಕಂಡಬಂದಲ್ಲಿ ಮುಂದಾಗುವ ಪರಿಣಾಮಗಳಿಗೆ ತಾವೇ ಹೊಣೆಗಾರರಾಗುತ್ತೀರಿ. ಭೀಮಣ್ಣ ಶಖಾಪುರ ರಾಜ್ಯ ಪ್ರಧಾನ ಕಾರ್ಯದರ್ಶಿ, ನಮ್ಮ ಕರ್ನಾಟಕ ಸೇನೆ ರವರು ಎಚ್ಚರಿಸಿದ್ದಾರೆ.