Saturday, December 21, 2024
Homeಸಂಸ್ಕೃತಿಡಾ.ಫ.ಗು. ಹಳಕಟ್ಟಿಯವರ ತ್ಯಾಗ, ಸಾಹಿತ್ಯ ಲೋಕಕ್ಕೆ ಅವಿಸ್ಮರಣೀಯವಾದುದು: ಶಿವಾನಂದ ಕಾಪಶಿ

ಡಾ.ಫ.ಗು. ಹಳಕಟ್ಟಿಯವರ ತ್ಯಾಗ, ಸಾಹಿತ್ಯ ಲೋಕಕ್ಕೆ ಅವಿಸ್ಮರಣೀಯವಾದುದು: ಶಿವಾನಂದ ಕಾಪಶಿ

ದಾವಣಗೆರೆ; ಜುಲೈ.೦೩: ವಿಶ್ವ ಸಾಹಿತ್ಯಕ್ಕೆ ಅಮೂಲ್ಯ ಕೊಡುಗೆ ನೀಡಿರುವ ಕನ್ನಡ ಸಾಹಿತ್ಯವನ್ನು ಸಂಗ್ರಹಿಸಿ, ಸಂರಕ್ಷಿಸಿ ಜನತೆಗೆ ಪರಿಚಯಿಸಿದ ಡಾ.ಫ.ಗು. ಹಳಕಟ್ಟಿಯವರ ತ್ಯಾಗ, ಸಾಹಿತ್ಯ ಲೋಕಕ್ಕೆ ಅವಿಸ್ಮರಣೀಯವಾದುದು ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ತಿಳಿಸಿದರು.
 ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸೃತಿ ಇಲಾಖೆ, ಮಹಾನಗರ ಪಾಲಿಕೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಜಿಲ್ಲಾ ಹಡಪದ ಅಪ್ಪಣ ಸಮಾಜ ಇವರ ಸಹಯೋಗದೊಂದಿಗೆ ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಜರುಗಿದ ಡಾ,ಫ.ಗು ಹಳಕಟ್ಟಿಯವರ ಜನ್ಮದಿನದ ಅಂಗವಾಗಿ ಏರ್ಪಡಿಸಲಾದ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಹಾಗೂ ಶ್ರೀ ಹಡಪದ ಅಣ್ಣಪ್ಪ ಜಯಂತಿಯನ್ನು ಉದ್ಘಟಿಸಿ ಅವರು ಮಾತನಾಡಿದರು.
ಡಾ.ಫ.ಗು. ಹಳಕಟ್ಟಿಯವರು ತಮ್ಮ ಅಮೂಲ್ಯವಾದ ವಚನ ಬಂಡಾರವನ್ನು ಕನ್ನಡ ನಾಡಿಗೆ ನೀಡಿ ಉಪಕರಿಸಿದ್ದಾರೆ, 12ನೇ ಶತಮಾನದ ವಚನ ಗ್ರಂಥಗಳನ್ನು ಸಂಗ್ರಹಿಸಿ ಪ್ರಕಟಿಸದಿದ್ದರೆ, ವಚನ ಸಾಹಿತ್ಯದ ಸಾರವನ್ನು ತಿಳಿಯಲು ಸಾಧ್ಯವಾಗುತ್ತಿರಲಿಲ್ಲ. ಇಡೀ ವೈಯಕ್ತಿಕ ಜೀವನದ ಆಸೆ, ಆಕಾಂಕ್ಷೆಗಳನ್ನು ತೊರೆದು ಸಾಮಾಜಿಕ ಹಿತಕ್ಕಾಗಿ ವಚನ ಸಾಹಿತ್ಯವನ್ನು ಉಳಿಸಿ ಬೆಳೆಸಿದವರು, ಕನ್ನಡ ಸಾಹಿತ್ಯ ಸಮೃದ್ಧವಾಗಬೇಕಾದರೆ ನೈತಿಕ ನೆಲೆಗಟ್ಟಿನ ವಚನಗಳು ತಮ್ಮದೇ ಆದ ಪ್ರಾಮುಖ್ಯತೆಯನ್ನು ಪಡೆದಿವೆ ಎಂದರು.
 ಹಡಪದ ಹಪ್ಪಣ್ಣನವರು ಜಾತಿ, ಧರ್ಮ, ವರ್ಣ ಹಾಗೂ ವರ್ಗರಹಿತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ್ದಾರೆ, ಇವರ ವಚನಗಳು ಬಸವಣ್ಣನವರ ಮೇಲಿನ ಗೌರವ ಭಕ್ತಿಯನ್ನು ವ್ಯಕ್ತಪಡಿಸುತ್ತದೆ. ಹಾಗೂ ಬಸವಣ್ಣನವರು ಹಪ್ಪಣ್ಣನನ್ನು ಆಪ್ತ ಕಾರ್ಯದರ್ಶಿಯಾಗಿ ಮಾಡಿಕೊಂಡಿದ್ದರು, ಇವರ 354 ವಚನಗಳನ್ನು ಕಾಣಬಹುದು ಎಂದರು.
 ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ವಾಮದೇವಪ್ಪ ಮಾತನಾಡಿ ಕನ್ನಡ ಸಾಹಿತ್ಯದಲ್ಲಿ ವಚನಗಳನ್ನು ಸಂಗ್ರಹಿಸಿದ ಕೀರ್ತಿ ಹಳಕಟ್ಟಿಯವರಿಗೆ ಸಲ್ಲುತ್ತದೆ ಹಾಗೂ ಹಡಪದ ಹಪ್ಪಣ್ಣನವರು ತಮ್ಮ ವಚನ ಸಾಹಿತ್ಯದಲ್ಲಿ ಜೀವನದ ನೈತಿಕ ನೆಲೆಗಟ್ಟಿನ ವಿಚಾರಗಳನ್ನು ತಿಳಿಸಿದ್ದಾರೆ ಎಂದರು.
ಹೊನ್ನಾಳಿಯ ಅಭಿನಯತ್ರಿ ಕಲಾ ತಂಡದ ವತಿಯಿಂದ ನೃತ್ಯ ಪ್ರದರ್ಶಿಸಲಾಯಿತು.
 ಹೆಚ್ಚುವರಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ರಾಮಗೊಂಡ ಬಸರ್ಗಿ, ಜಿಲ್ಲಾ ಪಂಚಾಯತ್ ಉಪ ನಿರ್ದೇಶಕರಾದ ಶಾರದ, ದೂಡ ಆಯುಕ್ತರಾದ ಬಸವನಗೌಡ, ಜಿಲ್ಲಾ ಹಡಪದ ಅಪ್ಪಣ್ಣ ಸಮಾಜದ ಅಧ್ಯಕ್ಷರಾದ ಶಶಿಧರ್ ಬಸಾಪುರ, ಶಿವಾನಂದ ಗುರೂಜಿ, ಎನ್.ಜಿ ಶಿವಕುಮಾರ್, ದಿಳ್ಳೆಪ್ಪ, ಮಲ್ಲಿಕಾರ್ಜುನ್ ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದ್ದರು.
RELATED ARTICLES

LEAVE A REPLY

Please enter your comment!
Please enter your name here

- Advertisment -

ಜಾಹೀರಾತು

spot_img

Most Popular

Recent Comments