ಹಾವೇರಿ.ಜು.10: ಜಿಲ್ಲೆಯ ದೇವಿಹೊಸೂರು ತೋಟಗಾರಿಕಾ ಅಭಿಯಾಂತ್ರಿಕ ಮತ್ತು ಆಹಾರ ತಂತ್ರಜ್ಞಾನ ಮಹಾವಿದ್ಯಾಲಯದ ವಿದ್ಯಾರ್ಥಿನಿ ಕು.ಪ್ರಿಯಂಕಾ ಎಚ್.ಎಲ್. ಇವಳು ನಾಲ್ಕು ವರ್ಷಗಳ ಬಿ.ಟೆಕ್. (ಆಹಾರ ತಂತ್ರಜ್ಞಾನ) ಪದವಿಯ ಮೂರನೇ ಬ್ಯಾಚಿನಲ್ಲಿ ಅತ್ಯಧಿಕ ಅಂಕಗಳನ್ನು ಗಳಿಸಿ ಬಾಗಲಕೋಟೆ ತೋಟಗಾರಿಕಾ ವಿಶ್ವವಿದ್ಯಾಲಯವು ಕೊಡಮಾಡುವ ಚಿನ್ನದ ಪದಕಕ್ಕೆ ಭಾಜನಳಾಗಿದ್ದಾಳೆ.
ಅಲ್ಲದೇ ಪದವಿಯಲ್ಲಿ ವಿವಿಧ ಸಾಂಸ್ಕøತಿಕ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿಯೂ ಸಾಧನೆ ಮಾಡಿ ಉತ್ತಮ ವಿದ್ಯಾರ್ಥಿನಿಯಾಗಿ ಆಯ್ಕೆಯಾಗಿ ಮಹಾವಿದ್ಯಾಲಯದ ಶಿಕ್ಷಕ ಮತ್ತು ಶಿಕ್ಷಕೇತರ ವೃಂದದವರ ಚಿನ್ನದ ಪದಕ ಹಾಗೂ ಬೆಂಗಳೂರಿನ ಮೆ.ಇಂಡಸ್ ಮತ್ತು ಬರ್ಫಿಕಂಪನಿಯವರಿಂದ ಪ್ರಾಯೋಜಿಸಿದ ದಿ.ಸೀತಾ ಭಟ್ ಸ್ಮಾರಕಚಿನ್ನದ ಪದಕಗಳೊಂದಿಗೆ ಒಟ್ಟು ಮೂರು ಚಿನ್ನದ ಪದಕಗಳನ್ನು ಪಡೆದುಕೊಂಡಿದ್ದಾರೆ. ಮಹಾವಿದ್ಯಾಲಯದ ಕಳೆದ ಮೂರೂ ಬ್ಯಾಚಿನಲ್ಲಿ ವಿದ್ಯಾರ್ಥಿನಿಯರೇ ಹೆಚ್ಚಿನ ಅಂಕ ಪಡೆದು ಪದಕಗಳಿಸುತ್ತಿರುವುದು ವಿಶೇಷ.
ವಿಶ್ವವಿದ್ಯಾಲಯದಲ್ಲಿ ಇತ್ತೀಚೆಗೆ ಜರುಗಿದ 12ನೇ ಘಟಿಕೋತ್ಸವದಲ್ಲಿ ವಿದ್ಯಾರ್ಥಿನಿಗೆ ಮಾನ್ಯ ರಾಜ್ಯಪಾಲರು ಈ ಪದಕಗಳನ್ನು ಪ್ರದಾನ ಮಾಡಿದರು. ಈ ವಿದ್ಯಾರ್ಥಿನಿಯನ್ನು ಮಹಾ ವಿದ್ಯಾಲಯದ ಡೀನ್‍ರಾದ ಡಾ.ಲಕ್ಷ್ಮೀನಾರಾಯಣ ಹೆಗಡೆ ಮತ್ತು ಎಲ್ಲಾ ಸಿಬ್ಬಂದಿ ವರ್ಗದವರು ಅಭಿನಂದಿಸಿ ಶುಭ ಕೋರಿದ್ದಾರೆ.
ಕುಮಾರಿ ಪ್ರಿಯಂಕಾ ಸದ್ಯ ಮೈಸೂರಿನ ಸಿ.ಎಫ್.ಟಿ.ಆರ್.ಐ.ನಲ್ಲಿ ಅಂತರ್ರಾಷ್ಟ್ರೀಯ ಮಾನ್ಯತೆ ಪಡೆದ ಮಿಲ್ಲಿಂಗ್‍ಟೆಕ್ನಾಲಜಿಯಲ್ಲಿ ಉನ್ನತ ವ್ಯಾಸಂಗ ಮುಂದುವರಿಸಿದ್ದಾಳೆ.
ತೋಟಗಾರಿಕಾ ಅಭಿಯಾಂತ್ರಿಕ ಮತ್ತು ಆಹಾರ ತಂತ್ರಜ್ಞಾನ ಮಹಾವಿದ್ಯಾಲಯದ ವಿದ್ಯಾರ್ಥಿನಿ ಕು.ಪ್ರಿಯಂಕಾ ಎಚ್.ಎಲ್ .ಗೆ ಮೂರು ಚಿನ್ನದ ಪದಕ
RELATED ARTICLES