Saturday, December 21, 2024
Homeರಾಜ್ಯಆದ್ಧೂರಿ ಸ್ವಾತಂತ್ರ‍್ಯ ದಿನಾಚರಣೆಗೆ ಬೆಂಗಳೂರು ಸಿದ್ಧ: ತುಷಾರ್ ಗಿರಿನಾಥ್

ಆದ್ಧೂರಿ ಸ್ವಾತಂತ್ರ‍್ಯ ದಿನಾಚರಣೆಗೆ ಬೆಂಗಳೂರು ಸಿದ್ಧ: ತುಷಾರ್ ಗಿರಿನಾಥ್


ಬೆಂಗಳೂರು ನಗರ ಜಿಲ್ಲೆ, ಆಗಸ್ಟ್ ೧೩ (ರ‍್ನಾಟಕ ವರ‍್ತೆ): ಸ್ವಾತಂತ್ರ‍್ಯ ದಿನಾಚರಣೆಯ ರಾಜ್ಯಮಟ್ಟದ ಸಮಾರಂಭಕ್ಕೆ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನ ಸಜ್ಜಾಗಿದ್ದು ಸ್ವಾತಂತ್ರ‍್ಯೋತ್ಸವ ದಿನಾಚರಣೆಗೆ ಸಕಲ ಸಿದ್ಧೆತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಹೇಳಿದರು
ಅವರು ಇಂದು ನಗರದ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸ್ವಾತಂತ್ರ‍್ಯ ದಿನಾಚರಣೆಯ ರಾಜ್ಯಮಟ್ಟದ ಸಮಾರಂಭದ ಸಿದ್ಧತೆಗಳ ಕುರಿತು ಕರೆದಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ಆಗಸ್ಟ್ ೧೫ ರಂದು ಬೆಳಗ್ಗೆ ೮.೫೮ ಕ್ಕೆ ಮಾನ್ಯ ಮುಖ್ಯಮಂತ್ರಿಗಳು ಮೈದಾನದಕ್ಕೆ ಆಗಮಿಸಲಿದ್ದು, ೯.೦೦ ಗಂಟೆಗೆ ರಾಷ್ಟ್ರ ಧ್ವಜಾರೋಹಣ ಮಾಡಲಿದ್ದಾರೆ. ಧ್ವಜಾರೋಣದ ನಂತರ ಮಾನ್ಯ ಮುಖ್ಯಮಂತ್ರಿಗಳ ತೆರೆದ ಜೀಪಿನಲ್ಲಿ ಪೆರೇಡ್ ಪರಿವೀಕ್ಷಣೆ ಮತ್ತು ಗೌರವ ರಕ್ಷೆ ಸ್ವೀಕರಿಸಿ ನಾಡಿನ ಜನತೆಗೆ ಸ್ವಾತಂತ್ರ‍್ಯೋತ್ಸವದ ಸಂದೇಶವನ್ನು ನೀಡಲಿದ್ದಾರೆ ಎಂದು ತಿಳಿಸಿದರು.
ಪಂಥಸಂಚಲನದಲ್ಲಿ ಕೆ.ಎಸ್.ಆರ್.ಪಿ, ಸಿ.ಆರ್.ಪಿ.ಎಫ್, ಬಿ.ಎಸ್.ಎಫ್, ಸಿ.ಎ.ಆರ್, ಕೆ.ಎಸ್.ಐ.ಎಸ್,ಎಫ್, ಟ್ರಾಫಿಕ್ ಪೊಲೀಸ್, ಮಹಿಳಾ ಪೊಲೀಸ್, ಹೋಂ ಗಾರ್ಡ್ಸ್, ಟ್ರಾಫಿಕ್ ವರ‍್ಡನ್, ಅಗ್ನಿಶಾಮಕ ದಳ ಸಿಬ್ಬಂದಿ, ಡಾಗ್ ಸ್ಕ್ವಾಡ್ ಮತ್ತು ಬ್ಯಾಂಡ್ ನ ಹಾಗೂ ವಿವಿಧ ಶಾಲೆಗಳ ಮಕ್ಕಳನ್ನೋಳಗೊಂಡಂತೆ ಕವಾಯತು ಸೇರಿ ಒಟ್ಟು ೩೮ ತುಕಡಿಗಳಲ್ಲಿ ಸುಮಾರು ೧,೩೫೦ ಮಂದಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಪದ ದೇವರಾಜ್ ಅವರ ತಂಡದಿಂದ ನಾಡಗೀತೆ ಮತ್ತು ರೈತ ಗೀತೆಯೊಂದಿಗೆ ಕರ‍್ಯಕ್ರಮ ಆರಂಭವಾಗಲಿದೆ. ಬೆಂಗಳೂರು ದಕ್ಷಿಣ ವಲಯದ ಜೆ.ಪಿ.ನಗರದ ರ‍್ನಾಟಕ ಪಬ್ಲಿಕ್ ಶಾಲೆಯ ೭೫೦ ಮಕ್ಕಳು “ವೀರ ನಮನ” ನೃತ್ಯ ಪ್ರರ‍್ಶಿಸಲಿದ್ದಾರೆ.
ಬೆಂಗಳೂರು ಉತ್ತರ ವಲಯದ ಹೇರೋಹಳ್ಳಿಯ ಬಿ.ಬಿ.ಎಂ.ಪಿ ಸಂಯುಕ್ತ ಪದವಿ ಪರ‍್ವ ಕಾಲೇಜಿನ ೭೦೦ ಮಕ್ಕಳಿಂದ ‘ವೀರ ಭೂಮಿ ವಿಧುರಾಶ್ವತ್ಥ ಧ್ವಜ ಸತ್ಯಾಗ್ರಹ’ ಹಾಗೂ ಬೆಳಗಾವಿ ಜಿಲ್ಲೆಯ ಬೈಲಹೊಂಗಲದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ೫೦ ಮಕ್ಕಳಿಂದ ‘ರೋಪ್ ಸ್ಕಿಪಿಂಗ್’ ಕರ‍್ಯಕ್ರಮಗಳನ್ನು ನಡೆಸಿಕೊಳ್ಳಲಿದ್ದಾರೆ ಹಾಗೂ ಎಂ.ಇ. ಜಿ ಸೆಂಟರ್ ತಂಡದವರು “ಕಲಾರಿಪಯಟ್ಟು”, ಎ.ಎಸ್.ಸಿ ತಂಡದವರಿಂದ “ಟೆಂಟ್ ಪೆಗ್ಗಿಂಗ್” ಹಾಗೂ ಎ.ಎಸ್.ಸಿ ತಂಡ ಇವರಿಂದ “ಮೊಟರ್ ಸೈಕಲ್” ಸಹಾಸ ಪ್ರರ‍್ಶನವನ್ನು ಮಾಡಲಿದ್ದಾರೆ ಎಂದು ಮಾಹಿತಿ ನೀಡಿದರು.
ಸ್ವಾತಂತ್ರ‍್ಯ ದಿನಾಚರಣೆಯ ಕರ‍್ಯಕ್ರಮದ ವೀಕ್ಷಿಸಲು ಆಗಮಿಸುವ ಅತಿಗಣ್ಯ, ಗಣ್ಯ, ಇತರೆ ಸರ‍್ವಜನಿಕರಿಗೆ ಪ್ರತ್ಯೋಕ ಆಸನದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಯಾವುದೇ ಆಕಸ್ಕಿಕ ವಿಪತ್ತು ಸಂಭವಿಸಿದಲ್ಲಿ ಅಗತ್ಯವಿರುವಷ್ಟು ಆಂಬುಲೆನ್ಸ್, ವೈದ್ಯಕೀಯ ಹಾಗೂ ವೈದ್ಯಕೀಯೇತರ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಹಾಗೂ ನಗರದ ಹಲವು ಆಸ್ಪತ್ರೆಗಳನ್ನು ಗುರುತಿಸಿ ಸಾಕಷ್ಟು ಸಂಖ್ಯೆಯಲ್ಲಿ ಹಾಸಿಗೆಗಳನ್ನು ಕಾಯ್ದಿರಿಸಲಾಗಿದೆ ಎಂದರು.
ಬೆಂಗಳೂರು ನಗರದ ಪೊಲೀಸ್ ಆಯುಕ್ತರಾದ ಬಿ.ದಯಾನಂದ ಮಾತನಾಡಿ ಸ್ವತಂತ್ರ‍್ಯ ದಿನಾಚರಣೆಗಾಗಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ ಸುಮಾರು ೧,೦೦೦ ಕ್ಕು ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಭದ್ರತೆ ಕರ‍್ಯಕ್ಕೆ ನಿಯೋಜಿಸಲಾಗಿದೆ. ಬೆಂಗಳೂರು ನಗರದ ಎಲ್ಲಾ ವಿಭಾಗಗಳಿಂದ ೯ ಡಿ.ಸಿ.ಪಿ, ೧೫ ಎ.ಸಿ.ಪಿ, ೪೩ ಪಿ.ಐ, ೧೧೦ ಪಿಎಸ್ ಐ/ ಮ.ಪಿಎಸ್ ಐ, ೭೨ ಎ.ಎಸ್.ಐ, ೫೫೪ ಹೆಚ್.ಸಿ/ಪಿ.ಸಿ ಮತ್ತು ೭೦ ಮಹಿಳಾ ಸಿಬ್ಬಂದಿಗಳೊಂದಿಗೆ ೧೫೭ ಸಾದಾ ಉಡುಪಿನ ಅಧಿಕಾರಿ ಮತ್ತು ಸಿಬ್ಬಂದಿಗಳು ಮತ್ತು ೫೬ ಕ್ಯಾಮರಾ ಸಿಬ್ಬಂದಿಗಳನ್ನು ಬಂದೋಬಸ್ತ್ ರ‍್ತವ್ಯಕ್ಕೆ ನಿಯೋಜಿಸಲಾಗಿದೆ ಎಂದು ತಿಳಿಸಿದರು.
ಮೈದಾನದ ಬಂದೋಬಸ್ತ್ ರ‍್ತವ್ಯಕ್ಕಾಗಿ ೧೦ ಕೆ.ಎಸ್.ಆರ್.ಪಿ ಸಿ.ಎ.ಆರ್ ತುಕಡಿಗಳು, ೨ ಅಗ್ನಿ ಶಾಮಕ ವಾಹನಗಳು, ೨ ಅಂಬುಲೆನ್ಸ್, ೪ ಖಾಲಿ ವಾಹನಗಳು, ೧ ಕ್ಷಿಪ್ರ ಕರ‍್ಯಾಚರಣೆ ಪಡೆ (ಕ್ಯೂ,ಆರ್.ಟಿ), ೧ ಡಿ ಸ್ವಾಟ್, ೧ ಆರ್.ಐ.ವಿಗಳನ್ನು ಭದ್ರತ ವ್ಯವಸ್ಥೆಗೆ ನಿಯೋಜಿಸಲಾಗಿದೆ ಎಂದರಲ್ಲದೆ ಒಂದು ಗರುಡ ಫರ‍್ಸ್ ಅನ್ನು ಕಾಯ್ದಿರಿಸಲಾಗಿದೆ.
ಮೈದಾನದ ಸುತ್ತ ಭದ್ರತೆ ಮತ್ತು ಸುರಕ್ಷತೆಗಾಗಿ ೧೦೦ ಸಿಸಿ ಕ್ಯಾಮೆರಾ ವ್ಯವಸ್ಥೆ ಹಾಗೂ ೩ ಬ್ಯಾಗೇಜ್ ಸ್ಕ್ಯಾನರ್ , ೨೦ ಡಿ.ಎಫ್.ಎಂ.ಡಿ ಮತ್ತು ೪೦ ಹೆಚ್. ಹೆಚ್.ಎಂ.ಡಿ ಗಳನ್ನು ಅಳವಡಿಸಲಾಗಿದೆ ಮತ್ತು ವ್ಯವಸ್ಥಿತ ಸಂಚಾರ ನಿಯಂತ್ರಣ ವ್ಯವಸ್ಥೆಗಳನ್ನು ಮಾಡಲಾಗಿದೆ. ಆಕಸ್ಕಿಕ ಬೆಂಕಿ ಅವಘಡಗಳನ್ನು ನಿಭಾಯಿಸಲು ಅಗ್ನಿ ಶಾಮಕ ವಾಹನಗಳೊಂದಿಗೆ ಸಾಕಷ್ಟು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಕರ‍್ಯಕ್ರಮಕ್ಕೆ ಆಗಮಿಸುವ ಪ್ರತಿಯೊಬ್ಬರು ಪಾಸು ಮತ್ತು ಗುರುತಿನ ಚೀಟಿಯನ್ನು ಹೊಂದಿರಬೇಕು. ರ‍್ಸ್ ಮತ್ತು ಮೊಬೈಲ್ ಹೊರೆತುಪಡಿಸಿ ಬೇರೆ ಯಾವುದೇ ವಸ್ತುಗಳನ್ನು ಕರ‍್ಯಕ್ರಮಕ್ಕೆ ತರದಂತೆ ನಿಷೇಧಿಸಲಾಗಿದೆ. ಕರ‍್ಯಕ್ರಮಕ್ಕೆ ಆಗಮಿಸುವ ಜನರು ಪೊಲೀಸರ ಭದ್ರತ ತಪಾಸಣೆಗೆ ಸಹಕರಿಸಬೇಕೆಂದು ಮನವಿ ಮಾಡಿದರು.
ಸಭೆಯಲ್ಲಿ ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿ ಕೆ.ಎ.ದಯಾನಂದ, ಬೆಂಗಳೂರು ಕೇಂದ್ರ ವಿಭಾಗದ ಡಿ.ಸಿ.ಪಿ. ಆರ್. ಶ್ರೀನಿವಾಸ್ ಗೌಡ, ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತರಾದ ಎಂ.ಎನ್. ಅನುಚೇತ್ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

ಜಾಹೀರಾತು

spot_img

Most Popular

Recent Comments