ದಾವಣಗೆರೆ: ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್, ದಾವಣಗೆರೆ ಜಿಲ್ಲಾ ಸಮಿತಿ ವತಿಯಿಂದ ನಗರದ ಅಶೋಕ ರಸ್ತೆಯಲ್ಲಿರುವ ಕಾಂ. ಪಂಪಾಪತಿ ಭವನದಲ್ಲಿ ಅಕ್ಟೋಬರ್ 2 ರ ಬೆಳಿಗ್ಗೆ 11.30ಕ್ಕೆ ದಾವಣಗೆರೆ ಕೆ.ಎಸ್.ಆರ್.ಟಿ.ಸಿ. ನೂತನ ಬಸ್ ನಿಲ್ದಾಣಕ್ಕೆ ಕಾಂ.ಪಂಪಾಪತಿ ಹೆಸರಿಡುವ ಬಗ್ಗೆ ಚಿಂತನ-ಮಂಥನ ಸಭೆ ಆಯೋಜಿಸಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಹೊಸತು ವಾರ ಪತ್ರಿಕೆ ಸಂಪಾದಕ ಡಾ. ಸಿದ್ದನಗೌಡ ಪಾಟೀಲ್ ನೆರವೇರಿಸಿದರೆ, ಎಐಟಿಯುಸಿ ಜಿಲ್ಲಾ ಅಧ್ಯಕ್ಷ ಕೆ.ರಾಘವೇಂದ್ರ ನಾಯರಿ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ, ನಗರವಾಣಿ ಉಪ ಸಂಪಾದಕ ಬಿ.ಎನ್. ಮಲ್ಲೇಶ್, ನಿವೃತ್ತ ಪ್ರಾಂಶುಪಾಲ ಪ್ರೊ.ಎ.ಬಿ. ರಾಮಚಂದ್ರಪ್ಪ, ಸಿಪಿಐ ಜಿಲ್ಲಾ ಖಜಾಂಚಿ ಆನಂದರಾಜ್, ಜಿಲ್ಲಾ ಕಾರ್ಯದರ್ಶಿ ಆವರಗೆರೆ ಚಂದ್ರು, ಚನ್ನಗಿರಿ ಪುರಸಭೆ ಸದಸ್ಯ ಸೈಯದ್ ಗೌಸ್ ಪೀರ್, ಇಪ್ಟಾ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ಷಣ್ಮುಖಸ್ವಾಮಿ, ಜನಶಕ್ತಿ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಸತೀಶ್ ಅರವಿಂದ್, ಶ್ರಿಆಂಜನೇಯ ಕಾಟನ್ ಮಿಲ್ಸ್ ವರ್ಕರ್ ಯೂನಿಯನ್ ಪ್ರಧಾನ ಕಾರ್ಯದರ್ಶಿ ಎಸ್.ಜಯ್ಯಪ್ಪ ಆಗಮಿಸುವರು.
ಕಾರ್ಯಕ್ರಮದಲ್ಲಿ ಕಟ್ಟಡ ಕಾರ್ಮಿಕ ಸಂಘಟನೆಯ ಜಿಲ್ಲಾ ಅಧ್ಯಕ್ಷ ವಿ.ಲಕ್ಷ್ಮಣ, ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕರ ಸಂಘದ ಜಿಲ್ಲಾಧ್ಯಕ್ಷೆ ಎಂ.ಬಿ. ಶಾರದಮ್ಮ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್.ಎಂ.ಮಲ್ಲಮ್ಮ, ಬ್ಯಾಂಕ್ ಎಂಪ್ಲಾಯೀಸ್ ಯೂನಿಯನ್ ಜಿಲ್ಲಾಧ್ಯಕ್ಷ ಬಿ.ಆನಂದಮೂರ್ತಿ, ಎಸ್.ಎಸ್.ಪಿ.ಟ್ರಸ್ಟ್ ಅಧ್ಯಕ್ಷ ಟಿ.ಹೆಚ್. ನಾಗರಾಜ್, ಸಿಪಿಐ ತಾಲ್ಲೂಕು ಕಾರ್ಯದರ್ಶಿ ಆವರಗೆರೆ ವಾಸು, ಎಐಟಿಯುಸಿ ತಾಲ್ಲೂಕು ಅಧ್ಯಕ್ಷ ನರೇಗ ರಂಗನಾಥ, ನೇತ್ರಾವತಿ, ಶಿವಕುಮಾರ್ ಡಿ.ಶೆಟ್ಟರ್, ಸಾಮಿಲ್ ದಾದಾಪೀರ್, ಎ.ತಿಪ್ಪೇಶಿ, ರಾಜು ಕೆರೆನಹಳ್ಳಿ ಆಗಮಿಸಲಿದ್ದಾರೆ ಎಂದು ಎಐಟಿಯುಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆಚ್.ಜಿ, ಉಮೇಶ್ ಆವರಗೆರೆ ತಿಳಿಸಿದ್ದಾರೆ.