Tuesday, December 24, 2024
Homeಸಂಸ್ಕೃತಿನ.11 ರಂದು ವೀರರಾಣಿ ಒನಕೆ ಓಬವ್ವ ಜಯಂತಿ ಅರ್ಥಪೂರ್ಣ ಆಚರಣೆ ಸಿದ್ದತಾ ಸಭೆ

ನ.11 ರಂದು ವೀರರಾಣಿ ಒನಕೆ ಓಬವ್ವ ಜಯಂತಿ ಅರ್ಥಪೂರ್ಣ ಆಚರಣೆ ಸಿದ್ದತಾ ಸಭೆ


ಹಾವೇರಿ:ನ.06: ಜಿಲ್ಲಾಡಳಿತದಿಂದ ಜಿಲ್ಲಾ ಮಟ್ಟದಲ್ಲಿ ವೀರರಾಣಿ ಒನಕೆ ಓಬವ್ವ ಜಯಂತಿ ಕಾರ್ಯಕ್ರಮ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜರುಗಿದ ವೀರರಾಣಿ ಒನಕೆ ಓಬವ್ವ ಜಯಂತಿ ಪೂರ್ವ ಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಯಂತಿ ಕಾರ್ಯಕ್ರಮದಲ್ಲಿ ಸಮುದಾಯದ ಎಲ್ಲ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.
ನಗರದ ಪುರಸಿದ್ದೇಶ್ವರ ದೇವಸ್ಥಾನದಿಂದ ಬೆಳಿಗ್ಗೆ 9-30 ಗಂಟೆಗೆ ವೀರರಾಣಿ ಒನಕೆ ಓಬವ್ವ ಭಾವಚಿತ್ರ ಮೆರವಣಿಗೆ, ಬೆಳಿಗ್ಗೆ 11 ನಗರದ ತಾಲೂಕು ಪಂಚಾಯತ್ ಸಭಾಂಗಣಲ್ಲಿ ವೇದಿಕೆ ಕಾರ್ಯಕ್ರಮ ಆಯೋಜಿಸಲು ಸಭೆಯಲ್ಲಿ ಚರ್ಚಿಸಿ ತೀರ್ಮಾನಿಸಲಾಯಿತು.
ವೀರರಾಣಿ ಒನಕೆ ಓಬವ್ವ ಭಾವಚಿತ್ರದ ಮೆರವಣಿಗೆ, ಕಲಾತಂಡಗಳ ಆಯ್ಕೆ, ಆಮಂತ್ರಣ ಪತ್ರಿಕೆ, ಕಾರ್ಯಕ್ರಮದ ವೇದಿಕೆ, ಆಸನ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಆಯೋಜಿಸಲು ತಿಳಿಸಿದರು.
ಸಭೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಉಮೇಶಪ್ಪ, ಪ್ರಾದೇಶಿಕ ಸಾರಿಗೆ ಅಧಿಕಾರಿ ವಸೀಂಬಾಬಾ ಮುದ್ದೇಬಿಹಾಳ, ನಗರಸಭೆ ಪೌರಾಯುಕ್ತ ಪರಶುರಾಮ ಚಲವಾದಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಆರ್.ವಿ.ಚಿನ್ನಿಕಟ್ಟಿ, ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸಮಾಜ ಮುಖಂಡರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

ಜಾಹೀರಾತು

spot_img

Most Popular

Recent Comments