ಚಿತ್ರದುರ್ಗ: ರಾಜ್ಯದಲ್ಲಿ ಬರಗಾಲ ಆವರಿಸಿದ್ದು, ರೈತರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಬರ ನಿರ್ವಹಣೆಗೆ ಕ್ರಮವಹಿಸಲಾಗಿದ್ದು, ಅದರ ಪ್ರಗತಿಯನ್ನು ಪರಿಶೀಲಿಸಲಾಯಿತು.
ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಡಿ.ಸುಧಾಕರ್ ಅವರ ನೇತೃತ್ವದಲ್ಲಿ ಇಂದು ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಬರ ನಿರ್ವಹಣೆ ಕಾರ್ಯಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡು, ಸ್ಥಿತಿಗತಿ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಶ್ರೀಮತಿ ದಿವ್ಯ ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀ ಧರ್ಮೇಂದ್ರ ಕುಮಾರ್ ಮೀನಾ, ಶಾಸಕರಾದ ಶ್ರೀ ಟಿ.ರಘುಮೂರ್ತಿ, ಶ್ರೀ ಡಾ.ಚಂದ್ರಪ್ಪ, ಶ್ರೀ ಎನ್.ವೈ.ಗೋಪಾಲಕೃಷ್ಣ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.