Monday, December 23, 2024
Homeಕ್ರೀಡೆಮಾನವನ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಅತ್ಯವಶ್ಯ: ಮಹಾವೀರ ಮ. ಕರೆಣ್ಣವರ

ಮಾನವನ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಅತ್ಯವಶ್ಯ: ಮಹಾವೀರ ಮ. ಕರೆಣ್ಣವರ

ದಾವಣಗೆರೆ, ನ.23 : ಪ್ರಸ್ತುತ ದಿನಮಾನಗಳಲ್ಲಿ ಕ್ರೀಡೆ ಪ್ರತಿಯೊಬ್ಬ ಮನುಷ್ಯನಿಗೂ ಅತ್ಯವಶ್ಯಕವಾಗಿದೆ. ಮನೆಗಳಲ್ಲಿ, ಶಾಲಾ-ಕಾಲೇಜುಗಳಲ್ಲಿ ಹಾಗೂ ಕೆಲಸದ ಸ್ಥಳಗಳಲ್ಲಿ ವಿಕಲಚೇತನರನ್ನು ಸಹ ಎಲ್ಲರಂತೆ ಸಮಾನವಾಗಿ ಕಾಣಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಮಹಾವೀರ ಮ. ಕರೆಣ್ಣವರ ತಿಳಿಸಿದರು.
ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಹಯೋಗದೊಂದಿಗೆ ವಿಶ್ವ ವಿಕಲಚೇತನರ ದಿನಾಚರಣೆ ಪ್ರಯುಕ್ತ ನಗರದ ಮೋತಿ ವೀರಪ್ಪ ಕಾಲೇಜು ಮೈದಾನದಲ್ಲಿ ನಡೆದ ವಿಕಲಚೇತನರ ಕ್ರೀಡಾ ಸ್ಪರ್ಧೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಾನವನ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಪ್ರಮುಖ ಪಾತ್ರ ವಹಿಸಿದ್ದು, ಕ್ರೀಡಾ ಸ್ಪೂರ್ತಿ ಪ್ರತಿಯೊಬ್ಬರಲ್ಲೂ ಇರಬೇಕು ಇಲ್ಲವಾದರೆ ದೇಹ ಉತ್ತಮ ಸ್ಥಿತಿಯಲ್ಲಿ ಕಾರ್ಯ ನಿರ್ವಹಿಸಲು ಸಾಧ್ಯವಿಲ್ಲ. ದೈನಂದಿನ ಚಟುವಟಿಕೆಯಲ್ಲಿ ಕ್ರೀಡೆಯನ್ನು ಜೀವನದ ಒಂದು ಭಾಗವಾಗಿ ರೂಪಿಸಿಕೊಳ್ಳಬೇಕಾಗಿದೆ. ಮನುಷ್ಯನ ದೇಹವು ಸಹ ಯಂತ್ರಗಳಂತೆ ಕೆಲಸ ನಿರ್ವಹಿಸುತ್ತದೆ ಎಂದರು.
ನಮ್ಮ ದೇಹದ ಯಾವ ಅಂಗಕ್ಕೆ ಹೆಚ್ಚು ಕೆಲಸ ಕೊಡುತ್ತೆವೆ, ಅದು ಹೆಚ್ಚು ಕ್ರೀಯಾಶೀಲವಾಗಿರುತ್ತದೆ. ಪ್ರತಿ ದಿನ ಕ್ರೀಡೆಯಲ್ಲಿ ತೊಡಗಿಕೊಳ್ಳುವುದರಿಂದ ಮನುಷ್ಯ ಲವಲವಿಕೆಯಿಂದ ಹಾಗೂ ಕ್ರೀಯಾಶೀಲರಾಗಿರಲು ಸಾಧ್ಯ. ಕ್ರೀಡೆಯಲ್ಲಿ ಸೋಲು-ಗೆಲುವು ಮುಖ್ಯವಲ್ಲ, ಭಾಗವಹಿಸುವುದು ಮುಖ್ಯವಾಗಿರುತ್ತದೆ. ವಿಕಲಚೇತನರೆಂಬ ಕಾರಣಕ್ಕೆ ಅವರನ್ನು ಮನೆಯಿಂದ ಹೊರ ಹಾಕದೆ ಎಲ್ಲರಂತೆ ಸಮಾನವಾಗಿ ಕಾಣಬೇಕು.
ಅಪರ ಜಿಲ್ಲಾಧಿಕಾರಿ ಪಿ.ಎನ್ ಲೊಕೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ವಾಸಂತಿ ಉಪ್ಪಾರ್, ಜಿಲ್ಲಾ ದೈಹಿಕಾ ಶಿಕ್ಷಣಾಧಿಕಾರಿ ಮಂಜುಳ ಎಂ.ಪಿ, ಮೋತಿ ವೀರಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪಂಚಾಕ್ಷರಪ್ಪ ಎಸ್ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

ಜಾಹೀರಾತು

spot_img

Most Popular

Recent Comments