ಮೂಡಲಗಿ:ನ,27-ಸಮೀಪದ ಬೆಟಗೇರಿ ಗ್ರಾಮದಲ್ಲಿ “ಭಾರತ ಸ್ಕೌಟ್ಸ್ ಮತ್ತು ಗೈಡ್ಸ್” ಬಗ್ಗೆ ವಿದ್ಯಾರ್ಥಿಗಳಿಗೆ/ಮಕ್ಕಳಲ್ಲಿ ಮನವರಿಕೆಯ ಕಾರ್ಯಕ್ರಮ ನಡೆಯಿತು.
ಇಂದಿನ ಯುಗದಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಶಾಲೆಯ ಪ್ರತಿಯೊಬ್ಬ ಶಿಕ್ಷಣ ಪ್ರಯತ್ನಿಸಬೇಕು. ಈ ಪ್ರೌಢ ಶಾಲೆಯಲ್ಲಿ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸಿ,ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕುರಿತು ಮಕ್ಕಳಿಗೆ ಮನವರಿಕೆ ಮಾಡಬೇಕು ಎಂದು ಬೆಳಗಾವಿ ವಿಭಾಗದ ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ ಗಜಾನನ ಮನ್ನಿಕೇರಿ. ಹೇಳಿದರು.
ಬೆಟಗೇರಿ ಗ್ರಾಮ ವಿವಿಡಿ ಸರ್ಕಾರಿ ಪ್ರೌಢ ಶಾಲೆಗೆ ಬೇಟಿ ನೀಡಿ ಶಾಲೆಯ ಮಕ್ಕಳ ಕಲಿಕಾ ಗುಣಮಟ್ಟ ಹಾಗೂ ಶಾಲೆಯ ಸಮಗ್ರ ಪ್ರಗತಿ ಕಿರಿತು ಪರಿಶೀಲಿಸಿದ ಬಳಿಕ ಮಾತನಾಡಿ ಪ್ರೌಢ ಶಾಲೆಯ ಸಮಗ್ರ ಪ್ರಗತಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಇಲ್ಲಿಯ ಪ್ರೌಢ ಶಾಲೆಯ ಮಕ್ಕಳೊಂದಿಗೆ ಕೆಲ ಹೊತ್ತು ಮಕ್ಕಳ ಕಲಿಕಾ ಗುಣಮಟ್ಟ ಪರಿಶೀಲಿಸಿದ ನಂತರ ಶಾಲೆಗೆ ಅವಶ್ಯಕವಾದ ಇನ್ನೂ ಹಲವಾರು ಮೂಲಭೂತ ಸೌಲಭ್ಯಗಳ ಬಗ್ಗೆ ಶಾಲೆಯ ಮುಖ್ಯೋಪಾಧ್ಯಾಯ, ಸಹ ಶಿಕ್ಷಕರ ಜೊತೆ ಚರ್ಚಿಸಿದರು.
ಶಾಲೆಯ ಮುಖ್ಯೋಪಾಧ್ಯಾಯ ರಮೇಶ ಅಳಗುಂಡಿ,ಶಿಕ್ಷಕರು,ವಿದ್ಯಾರ್ಥಿಗಳು ಮತ್ತು ಇನ್ನು ಅನೇಕರು ಶಾಲೆಯ ವಸತಿ ಶಿಕ್ಷಣ ಇಲಾಖೆ ಬೆಳಗಾವಿ ಜೆಡಿ ಗಜಾನನ ಮನ್ನಿಕೇರಿಯವರಿಗೆ ಸತ್ಕರಿಸಿದರು.