ಮಂಡ್ಯ: ಡಾ.ಬಿ.ಆರ್ ಅಂಬೇಡ್ಕರ್ ಅವರ 67ನೇ ಪರಿನಿಬ್ಬಾಣ ದಿನದ ಅಂಗವಾಗಿ ಜಿಲ್ಲಾಧಿಕಾರಿ ಕಛೇರಿ ಆವರಣದಲ್ಲಿರುವ ಡಾ.ಬಿ.ಆರ್ ಅಂಬೇಡ್ಕರ್ ಅವರ ಪ್ರತಿಮೆಗೆ ಜಿಲ್ಲಾಡಳಿತದ ವತಿಯಿಂದ ಮಾಲಾರ್ಪಣೆ ಮಾಡಲಾಯಿತು.
ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಮಾತನಾಡಿ ಭಾರತ ಸಂವಿಧಾನ ವಿಶ್ವಕ್ಕೆ ಮಾದರಿಯಾಗಿದೆ. ಭಾರತ ದೇಶಕ್ಕೆ ಸಂವಿಧಾನ ನೀಡಿದ ಅಂಬೇಡ್ಕರ್ ಅವರ ಪರಿನಿಬ್ಬಾಣದ ಅಂಗವಾಗಿ ಅಂಬೇಡ್ಕರ್ ಪ್ರತಿಮೆಗೆ ಪುಷ್ಪ ನಮನ ಅರ್ಪಿಸಿ ಗೌರವ ನಮನ ಸಲ್ಲಿಸಿದ್ದೇವೆ ಎಂದರು.
ಅಂಬೇಡ್ಕರ್ ಅವರು ಭಾರತ ದೇಶದ ಜನರಿಗೆ ಸಾಮಾಜಿಕ ನ್ಯಾಯವನ್ನು ದೊರಕಿಸಿ ಕೊಟ್ಟಿದ್ದಾರೆ. ಈ ಮೂಲಕ ಭಾರತದಲ್ಲಿ ಶೋಷಣೆ ಮುಕ್ತವಾಗಿ ಇರುವುದಕ್ಕೆ ಅವಕಾಶ ಮಾಡಿಕೊಟ್ಟು ದೇಶದ ಜನರ ಕಣ್ಣಾಗಿದ್ದಾರೆ ಎಂದರು.
ಅಂಬೇಡ್ಕರ್ ಅವರ ಮೌಲ್ಯ, ಚಿಂತನೆಗಳನ್ನು ಅಳವಡಿಸಿಕೊಂಡು ಅವರ ದಾರಿಯಲ್ಲಿ ನಡೆಯಬೇಕು . ಜೊತೆಗೆ ನಮ್ಮ ಮುಂದಿನ ಪೀಳಿಗೆಗೂ ಕೂಡ ಅವರ ಚಿಂತನೆಯನ್ನು ತಿಳಿಸಿ ಮಾದರಿಯಾಗೋಣ ಎಂದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್, ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಶೇಖ್ ತನ್ವಿರ್ ಆಸೀಫ್ ಅಪರ ಜಿಲ್ಲಾಧಿಕಾರಿ ನಾಗರಾಜ್ ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಸಿದ್ದಲಿಂಗೇಶ್ ಸೇರಿದಂತೆ ಮುಖಂಡರು ಉಪಸ್ಥಿತರಿದ್ದರು.