ದಾವಣಗೆರೆ: ಗ್ರಾಮೀಣ ಕ್ರೀಡೆಗಳು ನಶಿಸುತ್ತಿರುವ ಇಂದಿನ ದಿನಗಳಲ್ಲಿ ಸರ್ಕಾರ ಜುಡೋ ಕ್ರೀಡೆಗೆ ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯ ಎಂದು ದಾವಣಗೆರೆ ಟೈಮ್ಸ್ ಕನ್ಬಡ ದಿನ ಪತ್ರಿಕೆ ಸಂಪಾದಕ ಜೆ.ಎಸ್.ವೀರೇಶ್ ಹೇಳಿದರು.
ನಗರದ ಸರ್ಕಾರಿ ಪ್ರಥಮ ದರ್ಜೆ ಮತ್ತು ಸ್ನಾತಕೋತ್ತರ ಕೇಂದ್ರದಲ್ಲಿ ಗುರುವಾರ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ, ದಾವಣಗೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ದಾವಣಗೆರೆ ವಿಶ್ವವಿದ್ಯಾನಿಲಯ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕರ ಸಂಘದ ಆಶ್ರಯದಲ್ಲಿ ೨೦೨೩-೨೪ನೇ ಸಾಲಿನ ದಾವಣಗೆರೆ ವಿಶ್ವವಿದ್ಯಾನಿಲಯ ಮಟ್ಟದ ಅಂತರಕಾಲೇಜು, ಪುರುಷರ ಮತ್ತು ಮಹಿಳೆಯರ ಜುಡೋ ಸ್ಪರ್ಧೆ ಹಾಗೂ ದಾವಣಗೆರೆ ವಿಶ್ವವಿದ್ಯಾನಿಲಯ ಜುಡೋ ಪಟುಗಳ ಆಯ್ಕೆ ಪ್ರಕ್ರಿಯೆ ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು,
ಯುವ ವಿದ್ಯಾರ್ಥಿಗಳು ತಮ್ಮ ದೇಹ ಸದೃಢಗೊಳಿಸಿಕೊಳ್ಳುವ ಜೊತೆಗೆ ಆತ್ಮಸ್ಥೈರ್ಯ ಹೆಚ್ಚಿಸಿಕೊಳ್ಳಲು ಕ್ರೀಡೆಗಳು ಸಹಕಾರಿಯಾಗಿವೆ.
ಹಿಂದೆ ಕಬಡ್ಡಿ, ಖೋಖೋ, ವಾಲಿವಾಲ್, ಫುಟ್ಬಾಲ್ ಸೇರಿದಂತೆ ಗ್ರಾಮೀಣ ಕ್ರೀಡೆಗಳ ಮೂಲಕ ಕ್ರೀಡಾಪಟುಗಳು ರಾಜ್ಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪದಕಗಳನ್ನು ಪಡೆದು ದೇಶ ಮತ್ತು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಅದೇ ರೀತಿ ನೀವು ಕೂಡ ರಾಜ್ಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಜುಡೋ ಸ್ಪರ್ಧೆಯಲ್ಲಿ ಭಾಗವಹಿಸಿ ಪದಕಗಳನ್ನು ಪಡೆಯುವ ಮೂಲಕ ಜಿಲ್ಲೆಗೆ ಮತ್ತು ಕಾಲೇಜಿಗೆ ಕೀರ್ತಿ ತರಬೇಕೆಂದು ಸಲಹೆ ನೀಡಿದರು.
ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಮೊಬೈಲ್ ಮತ್ತು ದುಶ್ಚಾಟಗಳ ದಾಸರಾಗಿ ತಮ್ಮ ಬದುಕನ್ನೇ ನಾಶ ಮಾಡಿಕೊಳ್ಳುತ್ತಿದ್ದಾರೆ. ಯುವಕರು ಇಂತಹ ಕ್ರೀಡೆಗಳಲ್ಲಿ ಭಾಗವಹಿಸುವ ಜೊತಗೆ ಸದೃಢ ಆರೋಗ್ಯ ಕಾಪಾಡಿಕೊಂಡು, ಉನ್ನತ ಹುದ್ದೆಯನ್ನು ಪಡೆದು ತಂದೆ, ತಾಯಿಗಳನ್ನು ನೋಡಿಕೊಳ್ಳಬೇಕೆಂದು ಕಿವಿಮಾತು ಹೇಳಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಭಾರಿ ಪ್ರಾಂಶುಪಾಲ ಕೊಟ್ರಪ್ಪ, ಜುಡೋ ಕ್ರೀಡೆ ಜಪಾನ್ ಮೂಲದ ಕ್ರೀಡೆಯಾಗಿದೆ. ಈ ಕ್ರೀಡೆಯಿಂದ ವಿದ್ಯಾರ್ಥಿಗಳ ದೇಹ ಬಲಿಷ್ಠಗೊಳ್ಳುವ ಜೊತೆಗೆ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು. ಹೀಗಾಗಿ ಜುಡೋ ಕ್ರೀಡೆಯಲ್ಲಿ ಹೆಚ್ಚು ಹೆಚ್ಚು ಭಾಗವಹಿಸಬೇಕೆಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ
ದಾವಣಗೆರೆ ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ವಿಭಾಗದ ಪ್ರಭಾರಿ ನಿರ್ದೇಶಕರಾದ ಪ್ರೊ. ವೆಂಕಟೇಶ್, ಕ್ರೀಡಾಧಿಕಾರಿ ಡಾ. ಬಿ.ಎಚ್.ವೀರಪ್ಪ, ದಾವಣಗೆರೆ ವಿಶ್ವವಿದ್ಯಾನಿಲಯ, ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಬಸವರಾಜ ತಹಸೀಲ್ದಾರ್ , ಸಂಯುಕ್ತ ಕರ್ನಾಟಕ ಉಪಸಂಪಾದ ಎ.ಎನ್.ನಿಂಗಪ್ಪ, ಸಹಾಯಕ ಪ್ರಾಧ್ಯಾಪಕ ಪ್ರೊ. ಎಸ್.ವೆಂಕಟೇಶ್ ಬಾಬು, ವಾಣಿಜ್ಯಶಾಸ್ತ್ರ, ಸಹಾಯಕ ಪ್ರಾಧ್ಯಾಪಕ ಪ್ರೊ. ಶಂಭುಲಿಂಗಪ್ಪ ನಲ್ಲನವರ್, ಪರಿಸರವಿಜ್ಞಾನ, ಆಂಗ್ಲಭಾಷಾ ಸಹಾಯಕ ಪ್ರಾದ್ಯಾಪಕ ಪ್ರೊ. ಮಂಜುನಾಥ.ಜಿ ಸೇರಿದಂತೆ ಇನ್ನಿತರರಿದ್ದರು.