ಮೂಡಲಗಿ:ಡಿ,13-ಸಾಮಾಜಿಕ ಹೋರಾಟಗಾರ ಭೀಮಪ್ಪ ಗಡಾದ ಚುನಾವಣೆ ಸಮಯದಲ್ಲಿ ಮತದಾರರಿಗೆ ಆಮಿಷ ಚುನಾವಣೆ ಅಧಿಕಾರಿಗಳಿ ಸಿಎಂ ಎದುರು ದೂರು.
ಇಂದಿನ ಮುಖ್ಯ ಮಂತ್ರಿಗಳಾದ ಸಿದ್ದ ರಾಮಯ್ಯನವರು ಚುನಾವಣೆ ಸಂದರ್ಭದಲ್ಲಿ ಮತದಾರರಿಗೆ ಕುಕ್ಕರ್,ಇಸ್ತ್ರಿ ಪೆಟ್ಟಿಗೆ ಹಂಚಿಕೆ ಮಾಡಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳಿಗೆ ದೂರು ಸಲ್ಲಿಸಲಾಗಿತ್ತು.ಆದರೆ ಅವರು ಇಲ್ಲಿಯ ವರೆಗೂ ಯಾವುದೇ ಕ್ರಮ ತೆಗೆದು ಕೊಳ್ಳದ ಕಾರಣ ಕೇಂದ್ರ ಚುನಾವಣೆ ಆಯೋಗಕ್ಕೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿರುದ್ಧ ದೂರು ಸಲ್ಲಿಸಿದ್ದೇನೆ ಎಂದು ಮಾಹಿತಿ ಹಕ್ಕು ಹೋರಾಟಗಾರ ಭೀಮಪ್ಪ ಗಡಾದ ಹೇಳಿದರು.