ಮೂಡಲಗಿ: ಪಟ್ಟಣದ ಶ್ರೀ ಶಿವಬೋಧರಂಗ ಮಠದ ರಸ್ತೆಯಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಾನದ 30ನೇ ವರ್ಷದ ಶ್ರೀ ಅಯ್ಯಪ್ಪಸ್ವಾಮಿಯ ಮಹಾಪೂಜೆಯ ಉತ್ಸವದ ಮೆರವಣಿಗೆಗೆ ಸೋಮವಾರ ಯಲ್ಲಮ್ಮ ದೇವಸ್ಥಾನದ ಹತ್ತಿರ ಬೈಂದೂರದ ರಾಜು ಶೆಟ್ಟಿ ಗುರುಸ್ವಾಮಿ, ಪಟ್ಟಣದ ಅಯ್ಯಪ್ಪ ಸನ್ನಿಧಾನದ ರವಿ ಗುರುಸ್ವಾಮಿ, ಹಳ್ಳೂರ ಸನ್ನಿಧಾನದ ನಿಂಗಪ್ಪ ಗುರುಸ್ವಾಮಿ, ಕರ್ನಾಟಕ ಕಾರ್ಯಾನಿರತ ಪತ್ರಕರ್ತರ ಸಂಘದ ತಾಲೂಕಾಧ್ಯಕ್ಷ ಕೃಷ್ಣಪ್ಪ ಗಿರೆಣ್ಣವರ, ಪ್ರಧಾನ ಕಾರ್ಯದರ್ಶಿ ಮಲ್ಲು ಬೋಳನವರ, ಬಾಳಯ್ಯ ಹಿರೇಮಠ, ವಿನೋಧ ಎಮ್ಮಿ ಮತ್ತಿತರರು ಸೇರಿದಂತೆ ಶ್ರೀ ಅಯ್ಯಪ್ಪ ಸ್ವಾಮಿಯ ಮೂರ್ತಿಯ ಜಂಬೂ ಸವಾರಿ ಆನೆಯ ಅಂಬಾರಿಗೆ ಪುಷ್ರ್ಪಾಚನೆ ಮಾಡುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.
ಶ್ರೀ ಅಯ್ಯಪ್ಪ ಸ್ವಾಮಿಯ ಮೂರ್ತಿಯ ಜಂಬೂ ಸವಾರಿಯಲ್ಲಿ ತಾಲೂಕಿನ ವಿವಿಧ ಭಾಗಗಳಿಂದ ಆಗಮಿಸಿದ ಕನ್ನಡ ನಾಡು-ನುಡಿ ಸಂಸ್ಕøತಿ ಅನಾವರಣಗೊಳಿಸುವ ಕಲಾತಂಡಗಳು, ಒಂಟೆ ಕುದುರೆ ಮೇರವಣಿಗೆ, ಝಾಂಜಪಥಕ, ಸಾರವಾಡ ಗೊಂಬೆಗಳ ಕುಣಿತ ವಿವಿಧ ವಾದ್ಯ ಮೇಳೆ, ಅಯ್ಯಪ್ಪ ಕನ್ನಿ ಸ್ವಾಮಿಗಳ ಕುಂಭಮೇಳದೊಂದಿಗೆ ಅಯ್ಯಪ್ಪ ಸ್ವಾಮಿಯ ವೈಭವದ ಉತ್ಸವಕಕ್ಕೆ ಮೆರಗು ನೀಡಿದವು. ಮೆರವಣಿಗೆಯು ಪಟ್ಟಣದ ಶ್ರೀ ಶಿವಬೋಧರಂಗ ಮಠ, ಯಲ್ಲಪ್ಪ ದೇವಸ್ಥಾನ, ಸಂಗಪ್ಪನ ವೃತ್ತ, ಕಲ್ಮೇಶ್ವರ ವೃತ್ತ, ಚನ್ನಮ್ಮ ವೃತ್ತ, ಕರೇಮ್ಮಾದೇವಿ ವೃತ್ತಗಳ ಮಾರ್ಗವಾಗಿ ಬಸವೇಶ್ವರ ವೃತ್ತದ ಹತ್ತಿರದ ಬಸವ ಮಂಟಪದಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ಸನ್ನಧಾನಕ್ಕೆ ತಲುಪಿತ್ತು.
ಅಯ್ಯಪ್ಪ ಸ್ವಾಮಿ ಜೂಂಬೂ ಸವಾರಿ ವಿಕ್ಷಣೆಗೆ ಸುತ್ತಮುತ್ತಲಿನ ಗ್ರಾಮಗಳ ಹಾಗೂ ಪಟ್ಟಣದ ಜನರು ತಂಡೋಪ ತಂಡವಾಗಿ ಆಗಮಿಸಿ ಜಂಬೂ ಸವಾರಿ ವೀಕ್ಷಿಸಿದರು. ಮೇರವಣಿಗೆಯಲ್ಲಿ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು, ಮಂಜುನಾಥ ಸೈನಿಕ, ಕರುನಾಡು ಸೈನಿಕ ತರಬೇತಿ ಕೇಂದ್ರದ ಶಿಬಿರಾಥಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಿದರು.
ಬಸವ ಮಂಟಪದಲ್ಲಿ ಸ್ಥಾಪಿಸಿರುವ ಶ್ರೀ ಅಯ್ಯಪ್ಪ ಸ್ವಾಮಿ ಸನ್ನಧಾನದಲ್ಲಿ ಜರುಗಿದ ಪೂಜಾ ಕಾರ್ಯಕ್ರಮದಲ್ಲಿ ಶಿವಬೋಧರಂಗ ಮಠದ ಪೀಠಾಧಿಪತಿಗಳಾದ ದತ್ತಾತ್ರೇಯಬೋಧ ಸ್ವಾಮಿಜಿ, ಶ್ರೀಧರಬೋಧ ಸ್ವಾಮಿಜಿ, ಸುಣಧೋಳಿಯ ಜಡಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಶಿವಾನಂದ ಸ್ವಾಮಿಜಿ, ಭಾಗೋಜಿಕೊಪ್ಪದ ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮಿಜಿ ಸಾನಿದ್ಯವನ್ನು ವಹಿಸಿದರು.
ಬಸವ ಮಂಟಪದಲ್ಲಿ ಸ್ಥಾಪಿಸಿರುವ ಶ್ರೀ ಅಯ್ಯಪ್ಪ ಸ್ವಾಮಿ ಸನ್ನಧಾನದಲ್ಲಿ ಅಯ್ಯಪ್ಪ ಸ್ವಾಮಿ ಮೂರ್ತಿಗೆಯನ್ನು ವಿವಿಧ ಬಗೆಯ ಹೂವುಗಳಿಂದ ಶೃಂಗರಿಸಿ, ಅಯ್ಯಪ್ಪ ಮಾಲಾಧಾರಿಗಳು ಅಯ್ಯಪ್ಪ ಸ್ವಾಮಿಯ ಭಕ್ತಿಗೀತೆಗಳನ್ನು ಹಾಡುವುದರ ಜೊತೆಗೆ ಪಟ್ಟಾಭಿಷಕ ಮಾಡುವುದರ ಜೊತೆಗೆ 18 ಮೆಟ್ಟಿಲುಗಳಿಗೆ ದೀಪ ಬೆಳಗಿಸುವ ಮೂಲಕ ಪೂಜೆ ಸಲ್ಲಿಸಲಾಯಿತು. ತಾಲೂಕಾಡಳಿತ ಅಧಿಕಾರಿಗಳು ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಅಯ್ಯಪ್ಪ ಸ್ವಾಮಿಯ ಮಹಾಪೂಜೆಯಲ್ಲಿ ಭಾಗವಹಿಸಿದರು.