ದಾವಣಗೆರೆ:ನಗರದ ಕಮ್ಮವಾರಿ ಸಂಘದಿಂದ ವೈಕುಂಠ ಏಕಾದಶಿ ಪ್ರಯುಕ್ತ ದಿ: 23ರ ಶನಿವಾರ ಬೆಳಿಗ್ಗೆ 7 ಗಂಟೆಯಿಂದ ಸಾಮೂಹಿಕ ಶ್ರೀ ರಮಾಸಹಿತ ಸತ್ಯನಾರಾಯಣ ಸ್ವಾಮಿ ವ್ರತ, ಎಸ್.ಎಸ್.ಕೇರ್ ಟ್ರಸ್ಟ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಪ್ರತಿಭಾ ಪುರಸ್ಕಾರವನ್ನು ನಗರದ ಪಿ.ಬಿ.ರಸ್ತೆಯ ಕಾಕತೀಯ ನಗರದಲ್ಲಿರುವ ಕಮ್ಮವಾರಿ ಸಮುದಾಯ ಭವನದಲ್ಲಿ ನಡೆಯಲಿದೆ.
ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಅರೋಗ್ಯ ಜಾಗೃತಿ ಸಮಾಲೋಚನೆಯ ಉದ್ಘಾಟನೆಯನ್ನು ಎಸ್.ಎಸ್.ಕೇರ್ ಟ್ರಸ್ಟ್ ನ ಟ್ರಸ್ಟಿಗಳು ಹಾಗೂ ಬಾಪೂಜಿ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಸದಸ್ಯೆ ಶ್ರೀಮತಿ ಪ್ರಭಾ ಮಲ್ಲಿಕಾರ್ಜುನ್ ನೆರವೇರಿಸಲಿದ್ದಾರೆ.
ಸಮಾಜ ಬಾಂಧವರು ಇದರ ಸದುಪಯೋಗ ಪಡೆಯಬೇಕು ಹಾಗೂ ಪೂಜೆಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸ್ವಾಮಿ ಕೃಪೆಗೆ ಪಾತ್ರರಾಗಲು ಸಂಘದವರು ಕೋರಿದ್ದಾರೆ.