Saturday, December 21, 2024
Homeಸಂಸ್ಕೃತಿಹಳೇಪೇಟೆಯ ಶತಮಾನದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಾವಿತ್ರಿಬಾಯಿ ಫುಲೆ ಜಯಂತಿ.

ಹಳೇಪೇಟೆಯ ಶತಮಾನದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಾವಿತ್ರಿಬಾಯಿ ಫುಲೆ ಜಯಂತಿ.

ದಾವಣಗೆರೆ ಜಿಲ್ಲೆ. ಹಳೇಪೇಟೆ ಶಾಲೆಯಲ್ಲಿ ಸಾವಿತ್ರಿಬಾಯಿ ಫುಲೆ ಜಯಂತಿ. ಹಳೇಪೇಟೆಯ ಶತಮಾನದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದೇಶದ ಪ್ರಪ್ರಥಮ ಮಹಿಳಾ ಶಿಕ್ಷಕಿ ಸಾವಿತ್ರಿ ಬಾಯಿ ಫುಲೆ ಅವರ ಜನ್ಮದಿನಾಚರಣೆ ಆಚರಿಸಲಾಯಿತು, ಈ ಸಂದರ್ಭದಲ್ಲಿ ಮಾತನಾಡಿದ ಶಾಖೆಯ ಶಿಕ್ಷಕಿ ಅನಸೂಯಾ ಆರ್.ಸಿ. ಮಾತನಾಡಿ ಭಾರತದ ದೇಶದ ಪ್ರಪ್ರಥಮ ಮಹಿಳಾ ಶಿಕ್ಷಕಿ ಸಾವಿತ್ರಿ ಬಾಯಿ ಫುಲೆ ಅವರು ದೀನದಲಿತರಿಗೆ ಅಕ್ಷರ ಜ್ಞಾನ ನೀಡುವ ಮೂಲಕ ದೀನದಲಿತರಿಗೆ, ಅನಕ್ಷರಸ್ಥ ಗ್ರಾಮೀಣ ಪ್ರದೇಶದ ಜನರಿಗೆ ಸಾಮಾಜಿಕ ಜಾಗ್ರತೆ ಮೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು, ಸಾಮಾಜಿಕ ಪಿಡುಗು ಗಳಾದ ಜಾತಿ ಪದ್ಧತಿ, ಬಾಲ್ಯವಿವಾಹ ಪದ್ಧತಿ, ಸತಿ ಸಹಗಮನ ಪದ್ದತಿಗಳ ಜನರನ್ನು ಜಾಗೃತಗೊಳಿಸುವ ಮೂಲಕ ಸಾಮಾಜಿಕ ಚಳವಳಿಗಳನ್ನು ರೂಪಿಸಿದರು ಎಂದು ಶಿಕ್ಷಕಿ ಅನಸೂಯಾ ಆರ್.ಸಿ. ತಿಳಿಸಿದರು.

ಶಾಲೆಯ ಏಳನೇ ತರಗತಿ ವಿದ್ಯಾರ್ಥಿ ಚಂದನ್ ಸಿ.ಆರ್. ಸಾವಿತ್ರಿ ಬಾಯಿ ಫುಲೆ ಶಿಕ್ಷಣ ಕ್ರಾಂತಿಯ ಬಗ್ಗೆ ಸಂಕ್ಷಿಪ್ತ ಮಾಹಿತಿ ನೀಡಿದರು, ಈ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿದ್ದ ದಾವಣಗೆರೆ ಜಿಲ್ಲಾ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ(ಎಸ್.ಡಿ.ಎಂ.ಸಿ) ದಾವಣಗೆರೆ ಜಿಲ್ಲಾ ಪತ್ರಿಕಾ ಕಾರ್ಯದರ್ಶಿ ರಮೇಶ್ ಸಿ ದಾಸರ್ ಮಾತನಾಡಿ ಸಾವಿತ್ರಿ ಬಾಯಿ ಫುಲೆ ಅವರು ಶೋಷಣೆಗೆ ಒಳಗಾದ ದೀನದಲಿತರಿಗೆ, ಪುರುಷ ಮತ್ತು ಮಹಿಳೆಯರ, ಮಕ್ಕಳ ಕಲ್ಯಾಣಕ್ಕಾಗಿ, ಶಿಕ್ಷಣಕ್ಕಾಗಿ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಶಿಕ್ಷಣ ಕ್ರಾಂತಿ ಮೂಡಿಸಿದ ಮಹಾತಾಯಿ, ಶಿಕ್ಷಕಿ, ಅಕ್ಷರದವ್ವ ಸಾವಿತ್ರಿ ಬಾಯಿ ಫುಲೆ ಅವರು ಸತಿ ಸಹಗಮನ ಪದ್ದತಿಯನ್ನು ವಿರೋಧ ಮಾಡಿದರು ಮತ್ತು ವಿದುವಾ ವಿವಾಹಗಳಿಗೆ ಪ್ರೋತ್ಸಾಹ ನೀಡುವ ಮೂಲಕ ಸಾಮಾಜಿಕ ಜಾಗ್ರತೆ ಮೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು, ಅವರ ಸಾಮಾಜಿಕ ಜಾಗ್ರತೆ, ಹೋರಾಟ ನಮಗೆ ಸ್ಪೂರ್ತಿ ನೀಡಿದೆ ಎಂದು ರಮೇಶ್ ಸಿ ದಾಸರ್ ಹೇಳಿದರು. ಈ ಸಂದರ್ಭದಲ್ಲಿ ರಮೇಶ್ ಸಿ ದಾಸರ್, ಶಾಲೆಯ ಶಿಕ್ಷಕಿಯರಾದ ನಮಿತಾ ಎಂ.ಎನ್. ಸುಜಾತಾ , ಸಂಪತ್ ಕುಮಾರಿ, ಜಯಶ್ರೀ, ಮಕ್ಕಳು , ಅಡುಗೆ ಸಿಬ್ಬಂದಿ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

ಜಾಹೀರಾತು

spot_img

Most Popular

Recent Comments