ಅಸ್ಪ್ರಶ್ಯತೆ, ಅಂಧ ಶ್ರದ್ಧೆ ಮತ್ತು ಪುರೋಹಿತಶಾಹಿ ಡಾಂಭಿಕತನವನ್ನು ತೊಲಗಿಸಿ ಹಿಂದೂ ಧರ್ಮದ ಸುಧಾರಣೆಗೆ ನಿರಂತರ ಪ್ರಯತ್ನ ಮಾಡಿದ ಸ್ವಾಮಿ ವಿವೇಕಾನಂದರನ್ನು ಅವರ ಹುಟ್ಟುಹಬ್ಬದ ದಿನ ಗೌರವದಿಂದ ನೆನೆಯೋಣ.
ಬಡತನ ಮತ್ತು ಅನಾರೋಗ್ಯದಿಂದ ಕುಂದದೆ
ಕಠಿಣ ಪರಿಶ್ರಮ ಮತ್ತು ಆತ್ಮವಿಶ್ವಾಸದ ಮೂಲಕ ಕಿರಿ ವಯಸ್ಸಿನಲ್ಲಿಯೇ ವಿಶ್ವವೇ ತಲೆಬಾಗುವಂತಹ ಆಧ್ಯಾತ್ಮಿಕ ಗುರುವಾಗಿ ಬೆಳೆದು ನಿಂತ ಸ್ವಾಮಿ ವಿವೇಕಾನಂದರ ಬದುಕು ಮತ್ತು ಬರಹ ಯುವ ಸಮುದಾಯಕ್ಕೆ ಸದಾ ಸ್ಪೂರ್ತಿ.
ನಾಡಿನ ಸಮಸ್ತ ಯುವಕ-ಯುವತಿಯರಿಗೆ ರಾಷ್ಟ್ರೀಯ ಯುವದಿನದ ಶುಭಾಶಯಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ.