ದಾವಣಗೆರೆ:ಕೇಂದ್ರ ಸರ್ಕಾರದ ನವ ಉದಾರೀಕರಣ ನೀತಿಗಳ ಜಾರಿಯ ವೇಗದಲ್ಲಿ ತನ್ನ ನೀತಿಗಳ ಪರಿಕಲ್ಪನೆಯನ್ನು ಬದಲಾಯಿಸಿ ದೇಶದ ಅಭಿವೃದ್ಧಿಯ ಸಂಕೇತಗಳಾದ ಮಕ್ಕಳು ಮತ್ತು ಮಹಿಳೆಯರಿಗಾಗಿ ಕೊಡುವ ಸವಲತ್ತುಗಳಿಗೆ ೯೦% ರಿಂದ ೬೦% ಪಾಲನ್ನು ಕಡಿತ ಮಾಡಿ ೨೦೨೧ ರ ಬಜೆಟ್‌ನಲ್ಲಿ ೮೫೪೨ ಕೋಟಿ ರೂಗಳನ್ನು ಕಡಿತ ಮಾಡುವ ಮುಖಾಂತರ ಕತ್ತರಿ ಹಾಕುತ್ತಿದೆ, ಇದರಿಂದ ದೇಶದ ೧೧-೧೨ ಕೋಟಿ ಫಲಾನುಭವಿಗಳು ವಂಚಿತರಾಗುತ್ತಿದ್ದಾರೆ.
ದೇಶದ ಬಂಡವಾಳಗಾರರು ಮತ್ತು ಕಾರ್ಪೋರೇಟ್ ಕಂಪನಿಗಳಿಗೆ ೧೪.೫ ಲಕ್ಷ ಕೋಟಿ ಸಾಲ ಮನ್ನ ಮಾಡಿದೆ. ೧೦೦ ಕೋಟಿ ಒಡೆತನವಿರುವ ಶ್ರೀಮಂತರಿಗೆ ೨% ವಿಶೇಷ ತೆರಿಗೆಯನ್ನು ಹಾಕಿದರೆ ೧೩೪ ಲಕ್ಷ ಕೋಟಿ ಸರ್ಕಾರಕ್ಕೆ ಆದಾಯ ಬರುತ್ತದೆ. ಈ ಹಣದಲ್ಲಿ ಭಾರತದ ೧೩೦ ಕೋಟಿ ಜನರಿಗೆ ಗುಣಮಟ್ಟದ ಆಹಾರ, ಆರೋಗ್ಯ ಮತ್ತು ಶಿಕ್ಷಣವನ್ನು ಉಚಿತವಾಗಿ ಮತ್ತು ಸಾರ್ವತ್ರಿಕವಾಗಿ ಕೊಡಬಹುದು ಮತ್ತು ಈ ಯೋಜನೆಗಳನ್ನು ಖಾಯಂ ಮಾಡಬಹುದು.
ಈ ಯೋಜನೆಗಳು ಕೆಲಸ ಮಾಡುವ ೧ ಕೋಟಿ ನೌಕರರಿಗೆ ಕನಿಷ್ಠ ವೇತನ ಕೊಡಲು ಸಾಧ್ಯವಾಗುತ್ತದೆ. ಬಡವರ ಮತ್ತು ಜನ ಸಾಮಾನ್ಯರ ಮೇಲೆ ತೆರಿಗೆ ಹಾಕುವ ಸರ್ಕಾರ ಶ್ರೀಮಂತರ ಮೇಲೆ ತೆರಿಗೆ ಹಾಕಲಿ.
ಹಿಂದು ಮಹಿಳೆಯರ ಬಗ್ಗೆ ಮಾತಾನಾಡುವ ಕೇಂದ್ರ ಪ್ರಭುತ್ವ ಅಂಗನವಾಡಿ ನೌಕರರನ್ನು ೪೫೦೦ರೂ, ಸಹಾಯಕಿಯರಿಗೆ ೨೨೫೦ ರೂ, ಬಿಸಿಯೂಟದವರಿಗೆ ೬೦೦ ರೂ, ಆಶಾ ಕಾರ್ಯಕರ್ತೆರಿಗೆ ೨೦೦೦ರೂ ಕೊಟ್ಟು ದುಡಿಸುವುದು ಸಾಮಾಜಿಕ ನ್ಯಾಯವೇ? ೨೦೧೮ ರಿಂದ ಈ ನೌಕರರಿಗೆ ಒಂದೂ ರೂಪಾಯಿಯನ್ನು ಹೆಚ್ಚಳ ಮಾಡದೆ ಚುನಾವಣೆಗಳು, ಮಾತೃವಂದನಾ, ಪೋಷಣ್ ಟ್ರಾö್ಯಕರ್, ಸರ್ವೆ, ಗೃಹಲಕ್ಷಿö್ಮ ಮುಂತಾದ ಕೆಲಸಗಳನ್ನು ಹೇರಿ ಈ ಮಹಿಳೆಯರನ್ನು ಹಿಂಡಿ ಹಿಪ್ಪೆ ಮಾಡುವುದು, “ಗೌರವಧನ” ಎಂಬ ಪಟ್ಟಕಟ್ಟಿ ಎಲ್ಲ ಸವಲತ್ತುಗಳಿಂದ ವಂಚನೆ ಮಾಡುವುದು ಧರ್ಮವೇ? ೫ ಟ್ರಿಲಿಯನ್ ಆರ್ಥಿಕತೆಯನ್ನು ಸಾಧಿಸಲು ಹೊರಟಿರುವ ಭಾರತ ಹಸಿವಿನ ಸೂಚ್ಯಂಕದಲ್ಲಿ ೧೧೧ನೇ ಸ್ಥಾನ ಏಕೆ? ೧೦೦ ಕ್ಕೆ ೫೦ ರಷ್ಟು ಗರ್ಭಿಣಿ ಬಾಣಂತಿಯರ ರಕ್ತಹೀನತೆ ಏಕೆ? ಇದಾಗ್ಯೂ ೫ ವರ್ಷದ ಮಕ್ಕಳ ಸಾಯುತ್ತಿರುವುದೇಕೆ? ಸರ್ಕಾರ ಈ ಕೂಡಲೇ ಈ ಎಲ್ಲಾ ವಿಷಯಗಳನ್ನು ಗಂಭಿರವಾಗಿ ತೆಗೆದುಕೊಂಡು ಜನಸಾಮಾನ್ಯರಿಗೆ ಮತ್ತು ನೌಕರರಿಗೆ ನ್ಯಾಯ ಒದಗಿಸಲು ಒತ್ತಾಯಿಸಿ ೨೩ ಜನವರಿ ೨೦೨೪ ರಂದು ಸಂಸದರ ಕಛೇರಿ ಚಲೋ ನಡೆಸಲಾಗುತ್ತಿದೆ. ಕೇಂದ್ರ ಸರ್ಕಾರ ಕೂಡಲೇ ಈ ಬೇಡಿಕೆಗಳಿಗಾಗಿ ಸ್ಪಂದಿಸಬೇಕಾಗಿ ವಿನಂತಿಸುತ್ತೇವೆ.
ಕೇಂದ್ರ ಸರ್ಕಾರದ ಮುಂದಿನ ಹಕ್ಕೋತ್ತಾಯಗಳು
ಬೇಡಿಕೆಗಳು
೧. ಆಹಾರ, ಆರೋಗ್ಯ, ಶಿಕ್ಷಣಕ್ಕಾಗಿರುವ ಯೋಜನೆಗಳಾದ IಅಆS, ಒಆಒ, ಓಊಒ, IಅPS, SSಂ, ಒಓಖಇಉ, ಮುಂತಾದ ಯೋಜನೆಗಳನ್ನು ಖಾಯಂ ಮಾಡುವ ಮುಖಾಂತರ ಈ ಹಕ್ಕುಗಳನ್ನು ಸಾರ್ವತ್ರಿಕಗೊಳಿಸಬೇಕು.
೨. ಭಾರತೀಯ ಕಾರ್ಮಿಕ ಸಮ್ಮೇಳನ(Iಐಅ)ಯ ಶಿಫಾರಸ್ಸಿನಂತೆ ಈ ಯೋಜನೆಗಳಲ್ಲಿ ದುಡಿಯುತ್ತಿರುವ ಸಿಬ್ಬಂದಿಗಳು ಸೇರಿದಂತೆ ೧ ಕೋಟಿ ನೌಕರರಿಗೆ ಕನಿಷ್ಠ ವೇತನ, ನಿವೃತ್ತಿ ಸೌಲಭ್ಯಗಳನ್ನು ಕೊಟ್ಟು ನೌಕರರು ಎಂದು ಪರಿಗಣಿಸಬೇಕು.
೩. ೩ ರಿಂದ ೬ ವರ್ಷದೊಳಗಿನ ಮಕ್ಕಳಿಗೆ ಉಚಿತ, ಕಡ್ಡಾಯ ಮತ್ತು ಸಾರ್ವತ್ರಿಕವಾಗಿ ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಅಂಗನವಾಡಿ ಕೇಂದ್ರಗಳಲ್ಲಿಯೇ ಕೊಡಲು ಕಾನೂನು ರೂಪಿಸಬೇಕು. ಓಇP ನಿಲ್ಲಿಸಬೇಕು.
೪. ೪೯ ವರ್ಷಗಳಿಂದ ದುಡಿಯುತ್ತಿರುವ ಅಂಗನವಾಡಿ ನೌಕರರಿಗೆ ೨೧ ವರ್ಷಗಳಿಂದ ದುಡಿಯುವ ಬಿಸಿಯೂಟ ನೌಕರರಿಗೆ, ಆಶಾ ಮತ್ತು ಇತರೆ ಸಿಬ್ಬಂದಿಗಳಿಗೆ. ೩೧ ಸಾವಿರ ಕನಿಷ್ಠ ವೇತನ, ನಿವೃತ್ತಿ ಸೌಲಭ್ಯಗಳನ್ನು ಕನಿಷ್ಟ ೧೦ ಸಾವಿರ ಪಿಂಚಣಿ ಕೊಡಬೇಕು
೫. ಈ ಯೋಜನೆಗಳಲ್ಲಿ ದುಡಿಯುವ ಗುತ್ತಿಗೆ, ಒಳಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರನ್ನು ಖಾಯಂ ಮಾಡಿ, ಸಮಾನ ಕೆಲಸಕ್ಕೆ ಸಮಾನ ವೇತನ ಜಾರಿ ಮಾಡಬೇಕು.
೬. ಹೊಸ ಮೊಬೈಲ್‌ಗಳನ್ನು ಕೊಡಬೇಕು ಮತ್ತು ಮೊಬೈಲ್‌ನಲ್ಲಿ ಮಾಹಿತಿ ಕೊಟ್ಟ ನಂತರ ಪುಸ್ತಕದಲ್ಲಿ ಬರೆಯುವುದನ್ನು ನಿಲ್ಲಿಸಬೇಕು.
೭. ೬ ವರ್ಷದೊಳಗಿನ ಮಕ್ಕಳನ್ನು ಸಂರಕ್ಷಿಸುವ ಕೆಲಸ ಪ್ರಮುಖ ವಾಗಿರುವುದರಿಂದ ಚುನಾವಣೆಗಳು ಮತ್ತು ಇತರೆ ಸರ್ವೆ ಕೆಲಸಗಳಿಗೆ ಬಳಕೆ ಮಾಡಬಾರದು.
೮. ಮಿನಿ ಅಂಗನವಾಡಿ ಕೇಂದ್ರಗಳನ್ನು ಪೂರ್ಣ ಅಂಗನವಾಡಿ ಕೇಂದ್ರಗಳಾಗಿ ಪರಿವರ್ತಿಸಬೇಕು.
೯. ಕಡಿತವಾಗಿರುವ ಅನುದಾನಗಳನ್ನು ವಾಪಸ್ಸು ಕೊಟ್ಟು, ಬೆಲೆಯೇರಿಕೆಯಾಧಾರದಲ್ಲಿ ಪೂರಕ ಪೌಷ್ಠಿಕ ಆಹಾರಕ್ಕೆ ಕೊಡುವ ಹಣವನ್ನು ಹೆಚ್ಚಳ ಮಾಡಬೇಕು.
೧೦. ೨೦೨೨ ಏಪ್ರೀಲ್‌ನಲ್ಲಿ ಸುಪ್ರೀðಂ ಕೋರ್ಟ್ ಕೊಟ್ಟಿರುವ ತೀರ್ಪಿನಂತೆ ಎಲ್ಲಾ ಅಂಗನವಾಡಿ ನೌಕರರನ್ನು ಉದ್ಯೋಗಸ್ಥರೆಂದು ಪರಿಗಣಿಸಿ ಗ್ರಾಜ್ಯುಟಿ ಕಾಯ್ದೆಯನ್ನು ದೇಶದೆಲ್ಲೆಡೆ ಜಾರಿ ಮಾಡಬೇಕು.
೧೧. ವಿದ್ಯುತ್ ರೈಲ್ವೆ ಸೇರಿದಂತೆ ಯಾವುದೇ ಸಾರ್ವಜನಿಕ ವಲಯಗಳ ಖಾಸಗೀಕರಣ ನಿಲ್ಲಬೇಕು.
೧೨. ೨೯ ಕಾರ್ಮಿಕ ಕಾನೂನುಗಳ ಸಂಹಿತೆಗಳಾಗಿ ಮಾಡಿರುವುದನ್ನು ಕೈಬಿಟ್ಟು ಕಾರ್ಮಿಕ ಪರವಾದ ನೀತಿಗಳನ್ನು ಜಾರಿ ಮಾಡಬೇಕು.
೧೩. ದೇಶದ ಎಲ್ಲಾ ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ರಚಿಸಲಾಗಿರುವ ಸಾಮಾಜಿಕ ಭದ್ರತಾ ಮಂಡಳಿಯನ್ನು ಬಲಪಡಿಸಿ ಕೇಂದ್ರ ಸರ್ಕಾರ ವಾರ್ಷಿಕ ನಿವ್ವಳ ಆದಾಯದ ಶೇ ೩ ರಷ್ಟು ಅನುದಾನ ಅಂದರೆ ೩ ಲಕ್ಷ ಕೋಟಿ ಹಣವನ್ನು ಅಸಂಘಟಿತ ಕಾರ್ಮಿಕರ ಕಾರ್ಯಕ್ರಮಗಳಿಗೆ ಘೋಷಿಸಬೇಕು. ಇ-ಶ್ರಮ್ ಯೋಜನೆಯಲ್ಲಿ ಗುರುತಿನ ಚೀಟಿ ಪಡೆದಿರುವ ಎಲ್ಲ ಅಸಂಘಟಿತ ಕಾರ್ಮಿಕರು ಹಾಗೂ ಅವರ ಕುಟುಂಬಗಳ ಸದಸ್ಯರಿಗೆ ಉಚಿತ ಶಿಕ್ಷಣ, ಆರೋಗ್ಯ, ಪಡಿತರ ಹಾಗೂ ವಸತಿ ಯೋಜನೆಯನ್ನು ಜಾರಿಗೊಳಿಸಬೇಕು. ದೇಶದ ಎಲ್ಲ ರಾಜ್ಯಗಳಲ್ಲಿ ಹಾಗೂ ರಾಜ್ಯ ಸರ್ಕಾರಗಳು ತಮ್ಮ ಬಜೆಟ್‌ನಲ್ಲಿ ಅನುದಾನ ಘೋಷಿಸಬೇಕು.
೧೪. ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಿಸಬೇಕು. ಶ್ರೀಮಂತರ ಮೇಲಿನ ತೆರಿಗೆ ಹೆಚ್ಚಿಸಿ ಬಡವರಿಗೆ ಬದುಕಲು ಅವಕಾಶ ನೀಡುವ ನೀತಿಗಳನ್ನು ಜಾರಿಗೆ ತರಬೇಕು.
೧೫. ರಾಜ್ಯದಲ್ಲಿ ಕೆಲಸದ ಅವಧಿಯ ಹೆಚ್ಚಳವನ್ನು ತಂದಿರುವ ಕಾರ್ಖಾನೆ ಕಾಯ್ದೆ ತಿದ್ದುಪಡಿ ಕೈ ಬಿಡಬೇಕು. ಕೆಲಸದ ಅವಧಿ ಹೆಚ್ಚಿಸುವ ಮಹಿಳೆಯರನ್ನು ರಾತ್ರಿಪಾಳಿಯಲ್ಲಿ ದುಡಿಸಿಕೊಳ್ಳಲು ಅವಕಾಶ ನೀಡುವುದು ಸೇರಿದಂತೆ ಎಲ್ಲ ಕಾರ್ಮಿಕ ವಿರೋಧಿ ತಿದ್ದುಪಡಿಗಳನ್ನು ವಾಪಸ್ ಪಡೆಯಬೇಕು.
೧೬. ರೈತ ವಿರೋಧಿ ಕೃಷಿ ಕಾನೂನುಗಳನ್ನು ವಾಪಸ್ ಪಡೆಯಬೇಕು, ಕೃಷಿ ಬೆಳೆಗಳಿಗೆ ಲಾಭದಾಯಕ ಬೆಂಬಲ ಬೆಲೆ ಖಾತರಿಪಡಿಸಬೇಕು. ಎಪಿಎಮ್‌ಸಿ ವ್ಯವಸ್ಥೆಯನ್ನು ಬಲಗೊಳಿಸಬೇಕು. ಗೊಬ್ಬರ ಒಳಗೊಂಡAತೆ ಕೃಷಿ ಇಡುವಳಿಗಳಿಗೆ ಸಬ್ಸಿಡಿ ಕಡಿತಗೊಳಿಸುವ ನೀತಿಗಳನ್ನು ಕೈ ಬಿಡಬೇಕು.
ರಾಜ್ಯ ಸರ್ಕಾರದ ಮುಂದಿನ ಹಕ್ಕೋತ್ತಾಯಗಳು
೧. ಮ.ಮ.ಇ ೧೪ ಐಸಿಡಿ ೨೦೨೩ ಬೆಂಗಳೂರು ೪/೨/೨೦೨೩ ರ ಆದೇಶದ ಪ್ರಕಾರ ನಿವೃತ್ತಿಯಾದ ಅಂಗನವಾಡಿ ನೌಕರರಿಗೆ ಗ್ರಾಜ್ಯುಟಿ ಹಣವನ್ನು ಪಾವತಿಸಬೇಕು.
೨. ೨೦೨೩ ರ ವಿಧಾನ ಸಭೆ ಚುನಾವಣೆಯಲ್ಲಿ ಕೊಟ್ಟ ಕಾಂಗ್ರೇಸ್‌ನ ೬ ಗ್ಯಾರಂಟಿಯಂತೆ ೧೫ ಸಾವಿರಕ್ಕೆ ವೇತನ ಹೆಚ್ಚಳ ಮತ್ತು ೩-೨ ಲಕ್ಷ ರೂಗಳ ನಿವೃತ್ತಿ ಸೌಲಭ್ಯವನ್ನು ಕೂಡಲೇ ಮಾಡಬೇಕು.
೩. ಬಾಕಿಯಿರುವ ೨೧೩೧ ಮಿನಿ ಅಂಗನವಾಡಿ ಕೇಂದ್ರಗಳನ್ನು ೨೦೨೨ ರಲ್ಲಿ ಹೊಸದಾಗಿ ಮಂಜುರಾತಿಯಾಗಿ ೪೫೦೦ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ಣ ಕೇಂದ್ರಗಳನ್ನಾಗಿ ಪರಿವರ್ತಿಸಿ, ಉಳಿದ ಕೇಂದ್ರಗಳನ್ನು ತೆರೆಯಬೇಕು.
೪. ೧೨೦೦ ಮಿನಿ ಅಂಗನವಾಡಿ ಕೇಂದ್ರ ಪೂರ್ಣ ಕೇಂದ್ರಗಳಾಗಿ ಪರಿವರ್ತನೆಯಾದ ನಂತರ ಅಲ್ಲಿಯ ಕಾರ್ಯಕರ್ತೆಯರಿಗೆ ಪೂರ್ಣ ಕಾರ್ಯಕರ್ತೆಯೆಂದು ಸರ್ಕಾರ ಆದೇಶ ಕೂಡಲೇ ನೀಡಬೇಕು.
೫. ೨೦೨೩ ಡಿಸೆಂಬರ್-ಜನವರಿಯಲ್ಲಿ ಅಂಗನವಾಡಿ ಕೇಂದ್ರಗಳಿಗೆ ಸರಬರಾಜು ಆಗುತ್ತಿರುವ ಆಹಾರ ಸಾಮಾಗ್ರಿಗಳಲ್ಲಿರುವ (ರೆಡಿಮೇಡ್) ‘ತಯಾರಿಸಿದ ಆಹಾರ’ ದ ಪದ್ಧತಿಯನ್ನು ಬದಲಾಯಿಸಿ ಗುಣಮಟ್ಟದ ಆಹಾರ ಪದಾರ್ಥಗಳನ್ನು ಸರಬರಾಜು ಮಾಡಬೇಕು.
೬. IಅಆS ಮಾರ್ಗಸೂಚಿಯ ಪ್ರಕಾರ ಪೂರ್ವ ಪ್ರಾಥಮಿಕ ಶಿಕ್ಷಣಕ್ಕೆ ಒತ್ತು ಕೊಡಬೇಕು ಮತ್ತು ಈ ಉದ್ದೇಶದ ಈಡೇರಿಕೆಗಾಗಿ ೩೦-೧-೨೦೨೩ ರಂದು ಪ್ರತಿ ದಿನ ಬೆಳಗ್ಗೆ ೧೦ ರಿಂದ ೧ ಗಂಟೆಯ ತನಕ ಕಡ್ಡಾಯವಾಗಿ ಪೂರ್ವ ಪ್ರಾಥಮಿಕ ಶಿಕ್ಷಣ ಮಾಡಬೇಕೆಂಬ ಆದೇಶವೂ ಇಲಾಖೆಯಿಂದ ಬಂದಿದೆ ಇದನ್ನು ಜಾರಿಗೊಳಿಸಬೇಕು.
೭. ರಾಜ್ಯದಲ್ಲಿ ಸರ್ಕಾರಿ ಶಾಲೆಗಳಲ್ಲಿ ಪ್ರಾರಂಭಿಸಿರುವ ಐಏಉ-Uಏಉ ನಿಲ್ಲಿಸಿ ಅಂಗನವಾಡಿ ಕೇಂದ್ರಗಳಲ್ಲಿಯೇ ಈ ಶಿಕ್ಷಣ ಕೊಡಬೇಕು.
೮. ಪಂಚಾಯತ್ ರಾಜ್ ಇಲಾಖೆ ಪ್ರಾರಂಭಿಸಿರುವ ಕೂಸಿನ ಮನೆಯ ಫಲಾನುಭವಿಗಳು ಅಂಗನವಾಡಿ ಫಲಾನುಭವಿಗಳಾಗಿದ್ದಾರೆ. ೬ ತಿಂಗಳಿAದ ೬ ವರ್ಷದ ಮಕ್ಕಳು ಅಂಗನವಾಡಿ ಫಲಾನುಭವಿಗಳಾಗಿರುವುದರಿಂದ ಅವೈಜ್ಞಾನಿಕ ಕೂಸಿನ ಮನೆಯ ಅಗತ್ಯತೆ ಇಲ್ಲ. ಇದರಿಂದ ಸರ್ಕಾರಕ್ಕೆ ಹೆಚ್ಚುವರಿ ವೆಚ್ಚ ಮತ್ತು ಎರಡು ಕಡೆ ಫಲಾನುಭವಿಗಳಾಗುತ್ತಾರೆ ಆದ್ದರಿಂದ ಕೂಸಿನ ಮನೆ ರದ್ದು ಮಾಡಬೇಕು.
೯. ಅಂಗನವಾಡಿ ಕೇಂದ್ರಗಳಲ್ಲಿ ಪೌಷ್ಠಿಕ ಆಹಾರ, ಪೂರ್ವ ಪ್ರಾಥಮಿಕ ಶಿಕ್ಷಣ ಗರ್ಭಿಣಿ-ಬಾಣಂತಿಯರ ಆರೈಕೆ ಹೊರತು ಪಡಿಸಿ ಉಳಿದ ಕೆಲಸಗಳನ್ನು ನಿರ್ಬಂಧಿಸಬೇಕು.
೧೦. ಅಂಗನವಾಡಿ ಕೇಂದ್ರಗಳಿಗೆ ಮೂಲಭೂತ ಸೌಕರ್ಯಗಳನ್ನು ನೀಡಬೇಕು.
೧೧. ಖಾಲಿ ಹುದ್ದೆಗಳಿಗೆ ೩ ತಿಂಗಳೊಳಗೆ ನೇಮಕಾತಿಯಾಗಬೇಕು ಇಲ್ಲದಿದ್ದರೆ ಹೆಚ್ಚುವರಿ ವೇತನ ಕೊಡಬೇಕು.
೧೨. ಸಹಾಯಕಿ ಇಲ್ಲದ ಅಂಗನವಾಡಿ ಕೇಂದ್ರಗಳಲ್ಲಿ ಖಿಚಿಞe ಊome ಕೊಡಬೇಕು. ಇಲ್ಲದಿದ್ದರೆ ತಾತ್ಕಲಿಕ ಸಹಾಯಕಿಯನ್ನು ನೇಮಾಕಾತಿ ಮಾಡಿಕೊಳ್ಳುವ ಅಧಿಕಾರ ಕಾರ್ಯಕರ್ತೆಗೆ ಕೊಡಬೇಕು.
೧೩. ಮಿನಿ ಅಂಗನವಾಡಿ ಕೇಂದ್ರಗಳನ್ನು ಪೂರ್ಣ ಕೇಂದ್ರಗಳನ್ನಾಗಿ ಪರಿವರ್ತಿಸುವ ತನಕ ಸಹಾಯಕಿಯನ್ನು ಕೊಡಬೇಕು ಮತ್ತು ಪೂರ್ಣ ಕಾರ್ಯಕರ್ತೆಗೆ ಕೊಡುವಷ್ಟು ಗೌರವಧನ ಹೆಚ್ಚಿಸಬೇಕು.
೧೪. ಮುಂಗಡವಾಗಿ ಕರೆನ್ಸಿ ಹಣ, ಕೋಳಿಮೊಟ್ಟೆ, ಬಾಡಿಗೆ, ಗ್ಯಾಸ್, ತರಕಾರಿ, ಕಾಂಟೆಜಿನ್ಸಿ ಬಿಲ್‌ಗಳನ್ನು ಹಾಕದೇ ಫಲಿತಾಂಶ ಕೇಳಬಾರದು. ಎಂದು ಹಲವು ಬೇಡಿಕೆಗಳ ಒತ್ತಾಯಿಸಿದರು.