ದಾವಣಗೆರೆ:ಕರ್ನಾಟಕದ ಜನತೆಯಾದ ನಾವು ನಮ್ಮ ರಾಜ್ಯದ ದುಡಿಯುವ ಜನರ ಬದುಕನ್ನು ಸಂರಕ್ಷಿಸಲು ಈ ಕೆಳಕಂಡ ಬೇಡಿಕೆಗಳನ್ನು ತಮ್ಮ ಮುಂದೆ ಮಂಡಿಸುತ್ತಿದ್ದೇವೆ. ಇವುಗಳು ರಾಜ್ಯದ ಕೋಟ್ಯಾಂತರ ಶ್ರಮಜೀವಿಗಳ ಜೀವನ ಮತ್ತು ಜೀವನಾಧಾರ ಉತ್ತಮಪಡಿಸಲು ಸಹಾಯಕವಾಗಲಿವೆ. ಆದ್ದರಿಂದ ತಾವುಗಳು ದುಡಿಯುವ ಜನರ ಘನತೆಯ ಬದುಕನ್ನು ಖಾತ್ರಿಗೊಳಿಸಲು ಕೂಡಲೇ ಕೆಳಕಂಡ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸುತ್ತೇವೆ.
-: ಬೇಡಿಕೆಗಳು :-
೧. ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಿಸಬೇಕು. ಶ್ರೀಮಂತರ ಮೇಲಿನ ತೆರಿಗೆ ಹೆಚ್ಚಿಸಿ ಬಡವರ ಪರವಾದ ನೀತಿಗಳನ್ನು ಜಾರಿಗೆ ತರಬೇಕು.
೨. ಕನಿಷ್ಟ ವೇತನವನ್ನು ಅಕುಶಲ ಕಾರ್ಮಿಕರಿಗೆ ರೂ ೩೧,೦೦೦/- ಹಾಗು ನಂತರದ ಹೆಚ್ಚಿನ ಕೌಶಲ್ಯದ ಪ್ರತಿ ಹಂತಕ್ಕೆ ಶೇ ೧೫% ಹೆಚ್ಚಳದೊಂದಿಗೆ ನಿಗದಿಪಡಿಸಬೇಕು. ಗ್ರಾಹಕ ಬೆಲೆ ಸೂಚ್ಯಾಂಕದ ಪ್ರತಿ ಅಂಶದ ಹೆಚ್ಚಳಕ್ಕೆ ಪ್ರತಿ ದಿನಕ್ಕೆ ೬ ಪೈಸೆಗಳ ತುಟ್ಟಿಭತ್ಯೆ ನಿಗದಿಪಡಿಸಬೇಕು. ಬೆಲೆ ಸೂಚ್ಯಾಂಕವನ್ನು ಪ್ರಾಮಾಣಿಕವಾಗಿ ಪ್ರಕಟಿಸಬೇಕು. ಸರ್ವೋಚ್ಚ ನ್ಯಾಯಾಲಯದ ತೀರ್ಪಿನನ್ವಯ ವೈಜ್ಞಾನಿಕ ರೀತಿಯಲ್ಲಿ ಕನಿಷ್ಟ ವೇತನವನ್ನು ನಿಗದಿಪಡಿಸಿ ಸಮರ್ಪಕವಾಗಿ ಜಾರಿಗೊಳಿಸಬೇಕು.
೩. ದೇಶದ ಎಲ್ಲಾ ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ರಚಿಸಲಾಗಿರುವ ಸಾಮಾಜಿಕ ಭದ್ರತಾ ಮಂಡಳಿಯನ್ನು ಬಲಪಡಿಸಲು ಕೇಂದ್ರ ಸರ್ಕಾರ ವಾರ್ಷಿಕ ನಿವ್ವಳ ಆದಾಯದ ಶೇ.೩ ರಷ್ಟು ಅನುದಾನ ಅಂದರೆ ೩ ಲಕ್ಷ ಕೋಟಿ ಹಣವನ್ನು ಅಸಂಘಟಿತ ಕಾರ್ಮಿಕರ ಕಾರ್ಯಕ್ರಮಗಳಿಗೆ ಘೋಷಿಸಬೇಕು. ಇ-ಶ್ರಮ್ ಯೋಜನೆಯಲ್ಲಿ ಗುರುತಿನ ಚೀಟಿ ಪಡೆದಿರುವ ಎಲ್ಲಾ ಅಸಂಘಟಿತ ಕಾರ್ಮಿಕರು ಹಾಗೂ ಅವರ ಕುಟುಂಬದ ಸದಸ್ಯರಿಗೆ ಉಚಿತ ಶಿಕ್ಷಣ, ಆರೋಗ್ಯ, ಪಡಿತರ ಹಾಗೂ ವಸತಿ ಯೋಜನೆಯನ್ನು ಜಾರಿಗೊಳಿಸಬೇಕು.
೪. ೨೦೨೪ ವರ್ಷದಿಂದಲೇ ಆದ್ಯತೆ ಮೇರೆಗೆ ಹಮಾಲಿ ಕಾರ್ಮಿಕರು, ಆಟೋ, ಟ್ಯಾಕ್ಸಿ ಚಾಲಕರು, ಮನೆ ಕೆಲಸಗಾರರು, ಗಿಗ್, ಬೀದಿಬದಿ ವ್ಯಾಪಾರಿಗಳು ಹಾಗೂ ದ್ವಿಚಕ್ರವಾಹನ ಮೆಕಾನಿಕ್‌ಗಳು ಹಾಗೂ ಟೈರ‍್ಸ್ ಮುಂತಾದ ಅಸಂಘಟಿತ ಕಾರ್ಮಿಕರಿಗೆ ಭವಿಷ್ಯನಿಧಿ ಜಾರಿಗೊಳಿಸಬೇಕು. ವಾಣಿಜ್ಯ ವಾಹನಗಳ ಚಾಲಕರು ಹಾಗು ಸಹಾಯಕರಿಗೆ ಪ್ರತ್ಯೇಕ ಕಲ್ಯಾಣ ಮಂಡಳಿಯನ್ನು ರಚಿಸಿ ವಿವಿಧ ಸೌಲಭ್ಯಗಳನ್ನು ಜಾರಿಗೊಳಿಸಬೇಕು.
೫. ವಿವಿಧ ಇಲಾಖೆಗಳ ಅಡಿಯಲ್ಲಿ ಕೆಲಸ ಮಾಡುತ್ತಿರುವ ಅಸಂಘಟಿತ ಕಾರ್ಮಿಕರಿಗೆ ವಿವಿಧ ಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸಲು ವಿವಿಧ ನಿಗಮ ಇಲಾಖೆಗಳಲ್ಲಿ ಇರುವ ಇಲಾಖಾ ಅನುದಾನಗಳನ್ನು ಬಳಸಿಕೊಂಡು ಎಪಿಎಂಸಿ ಹಮಾಲಿ ಕಾರ್ಮಿಕರಿಗಾಗಿ ಜಾರಿ ಮಾಡಿರುವ ‘ಕಾಯಕ ನಿಧಿ’ ಯೋಜನೆಯ ಮಾದರಿಗಳಂತೆ ಆಯಾ ಇಲಾಖೆ ಮೂಲಕ ಜಾರಿಗೊಳಿಸಲು ಕ್ರಮವಹಿಸಬೇಕು.
೬. ಕೇಂದ್ರ ಹಾಗೂ ರಾಜ್ಯ ಸರಕಾರಗಳು ಜಾರಿ ಮಾಡುತ್ತಿರುವ ವಿವಿಧ ವಸತಿ ಯೋಜನೆಗಳನ್ನು ಬಳಸಿಕೊಂಡು ರಾಜ್ಯದಲ್ಲಿರುವ ಎಲ್ಲಾ ಅಸಂಘಟಿತ ಕಾರ್ಮಿಕರಿಗೂ ಒಂದು ನಿರ್ಧಿಷ್ಟ ಕಾಲಮಿತಿಯೊಳಗೆ ವಸತಿ ಯೋಜನೆಯನ್ನು ಜಾರಿಗೊಳಿಸಬೇಕು.
೭. ಕೇಂದ್ರ ಸರ್ಕಾರವು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಕಾನೂನು-೧೯೯೬ ಹಾಗೂ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸೆಸ್ ಕಾನೂನು-೧೯೯೬ಗಳನ್ನು ಸಂರಕ್ಷಿಸಬೇಕು. ಕಲ್ಯಾಣ ಮಂಡಳಿಗಳಲ್ಲಿ ಇರುವ ನಿಧಿಯನ್ನು ಕಟ್ಟಡ ಕಾರ್ಮಿಕ ಸೌಲಭ್ಯಗಳಿಗೆ ಮಾತ್ರ ಬಳಸಬೇಕು. ಮಂಡಳಿ ಬಾಕಿ ಇರುವ ಸೆಸ್ ಕಡ್ಡಾಯವಾಗಿ ಸಂಗ್ರಹಿಸಬೇಕು ಮತ್ತು ಇತರೆ ಉದ್ದೇಶಗಳಿಗೆ ನಿಧಿ ದುರ್ಬಳಕೆ ನಿಲ್ಲಿಸಬೇಕು.
೮. ಕರ್ನಾಟಕ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿಯಿAದ ಫಲಾನುಭವಿಗಳ ಮಕ್ಕಳಿಗೆ ನೀಡುತ್ತಿರುವ ಶೈಕ್ಷಣಿಕ ಧನ ಸಹಾಯ ಕಡಿತ ಆದೇಶ ಹಿಂಪಡೆದು ಹಿಂದಿನAತೆ ಧನ ಸಹಾಯ ಮುಂದುವರೆಸಬೇಕು. ಬಾಕಿಯಿರುವ ಪಿಂಚಣಿ, ಮದುವೆ, ಶೈಕ್ಷಣಿಕ, ವೈದ್ಯಕೀಯ ಮೊದಲಾದ ಎಲ್ಲಾ ಅರ್ಜಿಗಳನ್ನು ಇತ್ಯರ್ಥಪಡಿಸಬೇಕು. ಹಾಗೂ ಎಲ್ಲ ಸೌಲಭ್ಯಗಳಿಗೂ ವಯಸ್ಸಿನ ಮಿತಿಯನ್ನು ರದ್ದುಗೊಳಿಸಬೇಕು ಹಾಗೂ ಮನೆ ನಿರ್ಮಾಣಕ್ಕಾಗಿ ಸಹಾಯಧನ ನೀಡಬೇಕು.
೯. ವಿಮೆ ಏಜೆಂಟರನ್ನು ಅಸಂಘಟಿತ ಕಾರ್ಮಿಕರೆಂದು ಪರಿಗಣಿಸಿ ಕಲ್ಯಾಣ ನಿಧಿ, ಪಿಂಚಣಿ ಯೋಜನೆಗಳನ್ನು ಜಾರಿಮಾಡಬೇಕು.
೧೦. ಬೀಡಿಕಾರ್ಮಿಕರಿಗೆ ಪರ್ಯಾಯ ಉದ್ಯೋಗ, ಪರಿಹಾರ ಯೋಜನೆ ರೂಪಿಸಬೇಕು. ವಿದ್ಯಾರ್ಥಿ ವೇತನ ಹಾಗು ಇತರೆ ಕಲ್ಯಾಣ ಯೋಜನೆಗಳ ಸಮರ್ಪಕ ಜಾರಿಗೆ ಅನುವಾಗುವಂತೆ ಕೇಂದ್ರ ಸರ್ಕಾರವು ಜಿಎಸ್‌ಟಿಯಿಂದ ಕಲ್ಯಾಣ ನಿಧಿಗೆ ಪಾಲು ನೀಡಬೇಕು.
೧೧. ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ವಾರ್ಷಿಕ ೨೦೦ ದಿನಗಳು ಹಾಗು ದಿನಕ್ಕೆ ರೂ ೭೦೦/- ಕೂಲಿಯನ್ನು ನಿಗದಿಪಡಿಸಬೇಕು. ನಗರ ಪ್ರದೇಶಕ್ಕು ಉದ್ಯೋಗ ಖಾತರಿ ಯೋಜನೆಯನ್ನು ವಿಸ್ತರಿಸಬೇಕು.
೧೨. ರೈಲ್ವೆ, ವಿದ್ಯುತ್ ಸೇರಿದಂತೆ ಎಲ್ಲಾ ಸಾರ್ವಜನಿಕ ಕ್ಷೇತ್ರಗಳ ಎಲ್ಲಾ ಸ್ವರೂಪದ ಖಾಸಗೀಕರಣವನ್ನು ಕೈಬಿಡಬೇಕು. ಸಾರ್ವಜನಿಕ ರಂಗದ ಕೈಗಾರಿಕೆ ಹಾಗು ಸೇವೆಗಳನ್ನು ಬಲಪಡಿಸಬೇಕು. ಶಿಕ್ಷಣವನ್ನು ದುಬಾರಿಗೊಳಿಸುವ ಹಾಗು ಅವೈಜ್ಞಾನಿಕ ಹೊಸ ಶಿಕ್ಷಣ ನೀತಿಯನ್ನು ಜಾರಿಗೊಳಿಸಬಾರದು.
೧೩. ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ವಾಪಸ್ಸು ಪಡೆಯಬೇಕು. ಕೃಷಿ ಬೆಳೆಗಳಿಗೆ ಲಾಭದಾಯಕ ಬೆಂಬಲ ಬೆಲೆ ಖಾತರಿಪಡಿಸಬೇಕು. ಎಪಿಎಂಸಿ ವ್ಯವಸ್ಥೆಯನ್ನು ಬಲಗೊಳಿಸಬೇಕು. ರಸಗೊಬ್ಬರ ಒಳಗೊಂಡAತೆ ಕೃಷಿ ಇಡುವಳಿಗಳಿಗೆ ಸಬ್ಸಿಡಿ ಕಡಿತಗೊಳಿಸುವ ನೀತಿಗಳನ್ನು ಕೈಬಿಡಬೇಕು.
೧೪. ದೇಶದ ಐಕ್ಯತೆಯನ್ನು ಛಿದ್ರಗೊಳಿಸುವ, ಸೌಹಾರ್ದತೆಯನ್ನು ಹಾಳುಮಾಡುವ ಕೃತ್ಯಗಳನ್ನು ಹಾಗು ಶಕ್ತಿಗಳನ್ನು ನಿಗ್ರಹಿಸಬೇಕು. ಸಂವಿಧಾನದ ಧರ್ಮನಿರಪೇಕ್ಷಿತ ಮೌಲ್ಯಗಳನ್ನು ಸಂರಕ್ಷಿಸಬೇಕು.