ದಾವಣಗೆರೆ,ಫೆಬ್ರವರಿ.01: ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಫೆಬ್ರವರಿ 3 ರಂದು ಬೆಳಗ್ಗೆ 10.30 ಕ್ಕೆ ಹೆಲಿಕ್ಯಾಪ್ಟರ್ ಮೂಲಕ ದಾವಣಗೆರೆ ಎಂ.ಬಿ.ಎ ಮೈದಾನಕ್ಕೆ ಆಗಮಿಸುವರು.
ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಕಲ್ಯಾಣ ಮಂಟಪದಲ್ಲಿ ನಡೆಯುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 38 ನೇ ರಾಜ್ಯ ಮಟ್ಟದ ಸಮ್ಮೇಳನದಲ್ಲಿ ಭಾಗವಹಿಸುವರು. ಮಧ್ಯಾಹ್ನ 3 ಗಂಟೆಗೆ ಹೊನ್ನಾಳಿ ತಾ; ಹೆಚ್.ಕಡದಕಟ್ಟೆ ಗ್ರಾಮದ ಹೆಲಿಪ್ಯಾಡ್‍ಗೆ ಆಗಮಿಸಿ ಹೊನ್ನಾಳಿಯಲ್ಲಿ ತಾಲ್ಲೂಕು ಕುರುಬರ ಸಂಘದಿಂದ ಆಯೋಜಿಸಿರುವ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ, ದಾಸಶ್ರೇಷ್ಟ ಶ್ರೀ ಭಕ್ತ ಕನಕದಾಸರ ಕಂಚಿನ ಪ್ರತಿಮೆಯ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂ.4.30 ಕ್ಕೆ ಹೆಲಿಕ್ಯಾಪ್ಟರ್ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು.