ದಾವಣಗೆರೆ:ಲೋಕಸಭೆ-2024,ರಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆಮಾಡಲು ದಿನಗಣನೆ ಶುರುವಾಗಿದೆ. ದಾವಣಗೆರೆ ಲೋಕಸಭಾ ಕ್ಷೇತ್ರದ ವಿಷಯದಲ್ಲಿ ಕಾಂಗ್ರೆಸ್ ಹೈಕಮಾಂಡ್ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಸ್ಪರ್ಧಿಸಲು ಸೂಚಿಸಿದ್ದು ಕಾಂಗ್ರೆಸ್ ವರಿಷ್ಠರ ಈ ಸೂಚನೆಯನ್ನು ಎಸ್.ಎಸ್. ಮಲ್ಲಿಕಾರ್ಜುನ್ ಅವರು ನಿರಾಕರಿಸಿ ತಮ್ಮ ಕುಟುಂಬದವರಿಗೆ ಅವಕಾಶ ಮಾಡಿಕೊಡುವಂತೆ ಮನವಿ ಮಾಡಿದ್ದಾರೆ ಆದರೆ ಈ ಮನವಿಯನ್ನು ಕಾಂಗ್ರೆಸ್ ಹೈಕಮಾಂಡ್ ತಿರಸ್ಕರಿಸಿದೆ ಎಂದು ಕೇಳಿಬರುತ್ತಿದೆ. ಹಾಗಾಗಿ ದಾವಣಗೆರೆ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ಹೊಸಮುಖಕ್ಕೆ ಮಣೆ ಹಾಕುವುದು ಬಹುತೇಕ ಖಚಿತವಾಗಿದ್ದು ಜಿ.ಬಿ.ವಿನಯ್ ಕುಮಾರ್ ಅವರ ಪರ ಹೈಕಮಾಂಡ್ ಹೆಚ್ಚಿನ ಒಲವು ತೋರುತ್ತಿದೆ ಎಂದು ಕಾಂಗ್ರೆಸ್ ನ ಆಂತರಿಕ ಮೂಲಗಳು ತಿಳಿಸುತ್ತಿವೆ.ಎಂದು ಮಾಹಿತಿಗಳು ಲಭ್ಯವಾಗುತ್ತಿವೆ