ದಾವಣಗೆರೆ; ಫೆ.22 : ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮವು ಮಾರ್ಚ್ 3 ರಿಂದ 6 ರ ವರೆಗೆ ನಡೆಯಲಿದ್ದು ಈ ಅವಧಿಯಲ್ಲಿ ಯಾವುದೇ ಮಕ್ಕಳು ಲಸಿಕೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.
ಅವರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಪೂರ್ವಭಾವಿ ಸಿದ್ದತಾ ಸಭೆ ಅಧ್ಯಕ್ಷತೆ ವಹಿಸಿ ಮಾತಾನಾಡಿದರು. ಅವರು ಪ್ರಸಕ್ತ ಸಾಲಿನ ರಾಷ್ಟ್ರೀಯ ಪಲ್ಸ್ ಪೆÇೀಲಿಯೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಪೋಲಿಯೋ ನಿರ್ಮೂಲನೆಗೆ ಸಾರ್ವತ್ರಿಕ ಲಸಿಕಾಕರಣ ಬಹಳ ಪ್ರಮುಖವಾಗಿರುತ್ತದೆ.
ಮಾ.3 ರಂದು ಜಿಲ್ಲೆಯ ಎಲ್ಲಾ ಲಸಿಕಾ ಬೂತ್‍ಗಳಲ್ಲಿ 5 ವರ್ಷದೊಳಗಿನ ಮಕ್ಕಳಿಗೆ ಪೆÇೀಲಿಯೋ ಲಸಿಕೆಯಯನ್ನು ಹಾಕಲಾಗುವುದು. ಹಾಗೂ ಮಾ.4 ರಿಂದ 6 ರವರೆಗೆ ಮೂರು ದಿನಗಳ ಕಾಲ ಮನೆ ಮನೆಗೆ ಭೇಟಿ ನೀಡಿ ಬೂತ್‍ನಲ್ಲಿ ಬಿಟ್ಟುಹೋದ ಮಕ್ಕಳಿಗೆ ಪೆÇೀಲಿಯೋ ಲಸಿಕೆ ಹಾಕಲಾಗುವುದು. ಲಸಿಕೆ ಹಾಕಿಸಲು ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹೆಚ್ಚು ಕೆಲಸ ನಿರ್ವಹಿಸಬೇಕೆಂದರು.
ಪೋಲಿಯೋ ಲಸಿಕೆ ಹಾಕಲು ನಗರ ಪ್ರದೇಶದಲ್ಲಿ 53764 ಹಾಗೂ ಗ್ರಾಮೀಣ ಭಾಗದಲ್ಲಿ 86372 ಮಕ್ಕಳು ಸೇರಿ 140136 ಮಕ್ಕಳಿಗೆ ಲಸಿಕೆ ಹಾಕಲು ಗುರಿ ಹೊಂದಲಾಗಿದೆ. ಲಸಿಕೆಗಾಗಿ 1121 ಬೂತ್‍ಗಳು, 28 ಕಡೆ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣಗಳು, 16 ಮೊಬೈಲ್ ಬೂತ್‍ಗಳನ್ನು ಸಿದ್ದಪಡಿಸಲಾಗಿದ್ದು 2245 ಲಸಿಕಾ ಕಾರ್ಯಕರ್ತರು ಮತ್ತು 219 ಮೇಲ್ವಿಚಾರಕರನ್ನು ಇದಕ್ಕಾಗಿ ನೇಮಿಸಲಾಗಿದೆ, ತಾಯಂದಿರು ಹಾಗೂ ಪೋಷಕರು ತಮ್ಮ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಬೇಕೆಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ; ಷಣ್ಮುಖಪ್ಪ, ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಡಾ.ರೇಣುಕಾರಾಧ್ಯ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಜಿ.ಡಿ.ರಾಘವನ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಸುರೇಶ್ ಬಾರ್ಕಿ ಮತ್ತು ಎಲ್ಲಾ ತಾಲ್ಲೂಕು ಆರೋಗ್ಯಾಧಿಕಾರಿಗಳು ಉಪಸ್ಥಿತರಿದ್ದರು.