Monday, December 23, 2024
Homeಆರೋಗ್ಯಸಿಗರೇಟು, ಇತರೆ ತಂಬಾಕು ಉತ್ಪನ್ನಗಳ ನಿಯಂತ್ರಣ ಕಾಯ್ದೆ ಕುರಿತು ತರಬೇತಿ

ಸಿಗರೇಟು, ಇತರೆ ತಂಬಾಕು ಉತ್ಪನ್ನಗಳ ನಿಯಂತ್ರಣ ಕಾಯ್ದೆ ಕುರಿತು ತರಬೇತಿ


ದಾವಣಗೆರೆ; ಫೆ.23 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕು. ಕ ಇಲಾಖೆ, ಶಿಕ್ಷಣ ಇಲಾಖೆ, ನಗರಾಭಿವೃದ್ದಿ ಕೋಶ, ಆಹಾರ ಸುರಕ್ಷತಾ ಗುಣಮಟ್ಟ ಪ್ರಾಧಿಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಹಯೋಗದೊಂದಿಗೆ ಫೆ.23 ರಂದು ನಗರದ ಜಿಲ್ಲಾ ತರಬೇತಿ ಕೇಂದ್ರ, ಜಿಲ್ಲಾ ಆಸ್ಪತ್ರೆಯಲ್ಲಿ ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ ನಿಯಂತ್ರಣ ಕಾಯ್ದೆ-2003ರ ಕುರಿತು ತರಬೇತಿಯನ್ನು ಆಯೋಜಿಸಲಾಗಿತ್ತು.
ತಾಲ್ಲೂಕು ಹಾಗೂ ಗ್ರಾಮ ಮಟ್ಟದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವ ನಿಟ್ಟಿನಲ್ಲಿ ತಾಲ್ಲೂಕು ತಂಬಾಕು ನಿಯಂತ್ರಣ ತನಿಖಾ ತಂಡದವರಾದ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳು, ಆರೋಗ್ಯ ನಿರೀಕ್ಷಣಾಧಿಕಾರಿಗಳು, ಆಹಾರ ಸುರಕ್ಷತಾ ಅಧಿಕಾರಿಗಳು, ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿಗಳು, ಆರೋಗ್ಯ ನಿರೀಕ್ಷಕರುಗಳಿಗೆ ತರಬೇತಿಯನ್ನು ಪಡೆದರು.
ತರಬೇತಿ ಕಾರ್ಯಗಾರದಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳಾದ ಡಾ.ಜಿ.ಡಿ ರಾಘವನ್, ಸಂಪನ್ಮೂಲ ವ್ಯಕ್ತಿಗಳಾಗಿ ಡಾ.ರಾಜೇಶ್ವರಿ ಅಣ್ಣಿಗೇರಿ, ವಿಭಾಗದ ಮುಖ್ಯಸ್ಥರು, ದಂತ ವಿಜ್ಞಾನ ಮಹಾವಿದ್ಯಾಲಯ, ದಾವಣಗೆರೆ, ಮಹಾಂತೇಶ್ ಉಳ್ಳಾಗಡ್ಡಿ, ವಿಭಾಗೀಯ ಸಂಯೋಜಕ, ರಾಜ್ಯ ತಂಬಾಕು ನಿಯಂತ್ರಣ ಘಟಕ, ಡಾ.ಸ್ವಾಮಿ, ಜಿಲ್ಲಾ ಸಲಹೆಗಾರ ಸತೀಶ್ ಕಲಹಾಳ್, ಸಮಾಜ ಕಾರ್ಯಕರ್ತ ದೇವರಾಜ್ ಕೆ.ಪಿ ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

ಜಾಹೀರಾತು

spot_img

Most Popular

Recent Comments