ವಿಜಯಪುರ:ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಕಟ್ಟಾ ಬೆಂಬಲಿಗರಾಗಿರುವ ಮಲ್ಲಿಕಾರ್ಜುನ ಲೋಣಿ, ಜಿಲ್ಲೆಯಲ್ಲಿ ಅಹಿಂದ ಸಂಘಟನೆಯ ಮುಂಚೂಣಿ ನಾಯಕರಾಗಿದ್ದವರು. ಸಿದ್ಧರಾಮಯ್ಯ ಜೊತೆಯಲ್ಲೇ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು.
ಮೂಲತಃ ವಿಜಾಪುರ ತಾಲೂಕಿನ ನಾಗಠಾಣ ಗ್ರಾಮದ ಸುಸಂಸ್ಕೃತ ಕುಟುಂದಿಂದ ಬಂದಿರುವ ಅವರು, ಜಿಲ್ಲಾ ಪಂಚಾಯತ ಸದಸ್ಯರಾಗಿ, ಉಪಾಧ್ಯಕ್ಷರಾಗಿ ರಾಜಕೀಯದಲ್ಲಿ ನೆಲೆ ಕಂಡುಕೊಂಡವರು. ಗಾಣಿಗ ಸಮಾಜದ ಪ್ರಭಾವಿ ನಾಯಕರಾಗಿರುವ ಅವರು, ಆರ್ಥಿಕ ಮತ್ತು ಶೈಕ್ಷಣಿಕ ಸಂಸ್ಥೆಗಳನ್ನು ಹುಟ್ಟುಹಾಕಿ ಅವುಗಳನ್ನು ಪ್ರಗತಿಪಥದಲ್ಲಿ ಮುನ್ನಡೆಸುತ್ತಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಪ್ರೊ.ರಾಜು ಆಲಗೂರ ಅವರು ವಿಜಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ. ಅವರ ನೇತೃತ್ವದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಎಂಟು ಕ್ಷೇತ್ರಗಳ ಪೈಕಿ ಆರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆಂಬುದು ಗಮನಾರ್ಹ…
ಗೆಳೆಯ ಮಲ್ಲಿಕಾರ್ಜುನ ಲೋಣಿ ಅವರಿಗೆ ಅಭಿನಂದನೆಗಳು… ಅವರ ಮುಂದಾಳತ್ವದಲ್ಲಿ ಲೋಕಸಭಾ ಚುನಾವಣೆ ಗೆಲ್ಲುವಂತಾಗಲಿ…(ಅನಿಲ್ ಹೊಸಮನಿ)