Saturday, December 21, 2024
Homeಸಾಧನೆಅಂಬೇಡ್ಕರ್ ಅವರ ವಿಚಾರಧಾರೆಗಳು ಇಂದಿಗೂ ಪ್ರಸ್ತುತ:ಡಿ.ಎಸ್.ರಾಮಕೃಷ್ಣ

ಅಂಬೇಡ್ಕರ್ ಅವರ ವಿಚಾರಧಾರೆಗಳು ಇಂದಿಗೂ ಪ್ರಸ್ತುತ:ಡಿ.ಎಸ್.ರಾಮಕೃಷ್ಣ

ದಾವಣಗೆರೆ: ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಭಾರತದ ಹೆಮ್ಮೆಯ ಪುತ್ರ. ನಮ್ಮ ರಾಷ್ಟ್ರ ಕಂಡ ಶ್ರೇಷ್ಠ ನಾಯಕರಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಕೂಡಾ ಪ್ರಮುಖರು. ಅಂಬೇಡ್ಕರ್ ಅವರ ವಿಚಾರಧಾರೆಗಳು ಇಂದಿಗೂ ಪ್ರಸ್ತುತ ಎಂದು ಭಾರತೀಯ ಜೀವ ವಿಮಾ ನಿಗಮದ ಶಾಖೆಯ ಶಾಖಾಧಿಕಾರಿ ಡಿ.ಎಸ್.ರಾಮಕೃಷ್ಣ ಹೇಳಿದರು.
ನಗರದ ಭಾರತೀಯ ಜೀವ ವಿಮಾ ನಿಗಮ ಶಾಖೆ-೨ ಕಚೇರಿಯಲ್ಲಿ ಭಾನುವಾರ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ಅಂಬೇಡ್ಕರ್ ಅವರು ಸಾಮಾಜಿಕವಾಗಿ ಮೂಡಿಸಿದ ಸಂಚಲನಗಳು ಅಷ್ಟು ಹಿರಿದಾಗಿದ್ದವು. ಇವರ ತತ್ವ ಆದರ್ಶಗಳು ಸುಂದರ ಸಮಾಜವನ್ನು ನಿರ್ಮಿಸುವಂತಿವೆ. ಅದೂ ಅಲ್ಲದೆ, ಪ್ರತಿಯೊಬ್ಬ ಭಾರತೀಯರ ಪಾಲಿನ ಪವಿತ್ರ ಗ್ರಂಥವಾದ ಸಂವಿಧಾನದ ಹಿಂದಿನ ದೊಡ್ಡ ಶಕ್ತಿ ಬಾಬಾ ಸಾಹೇಬ್ ಅಂಬೇಡ್ಕರ್ ಎಂದು ಬಣ್ಣಿಸಿದರು.
ಸಹಾಯಕ ಶಾಖಾಧಿಕಾರಿ ನಜೀರ್ ಅಹ್ಮದ್ ಮಾತನಾಡಿ, ೧೮೯೧ರ ಏಪ್ರಿಲ್ ೧೪ರಂದು ಮಧ್ಯಪ್ರದೇಶದ ಮಾಹೋ ಎಂಬಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜನಿಸಿದ್ದರು. ಬಾಲ್ಯದಲ್ಲಿ ಸಾಕಷ್ಟು ಕಷ್ಟಗಳನ್ನು ಕಂಡಿದ್ದ ಅಂಬೇಡ್ಕರ್ ಅವರು ತಮ್ಮ ಛಲ ಸಾಧನೆಯ ಮೂಲಕ ಭವ್ಯ ಭಾರತದ ಕನಸು ಕಾಣುತ್ತಾ ಬೆಳೆದು ನಮ್ಮ ದೇಶದ ಪ್ರಮುಖ ನಾಯಕರಲ್ಲಿ ಒಬ್ಬರಾಗಿ ರೂಪುಗೊಂಡರು. ಅಂಬೇಡ್ಕರ್ ಅವರ ಸಾಧನೆ, ದೇಶಕ್ಕೆ ಕೊಟ್ಟ ಕೊಡುಗೆಯನ್ನು ಸ್ಮರಿಸಲು ಏಪ್ರಿಲ್ ೧೪ರಂದು ಪ್ರತಿವರ್ಷ ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಗುತ್ತದೆ ಎಂದು ತಿಳಿಸಿದರು.
ಆಡಳಿತಾಧಿಕಾರಿ ರಮೇಶ್ ಮಾತನಾಡಿ, ಡಾ. ಅಂಬೇಡ್ಕರ್ ಅವರ ಬೋಧನೆಗಳು, ಆದರ್ಶಗಳು ಸದಾ ನಮ್ಮ ಬದುಕಿಗೆ ದಾರಿ ದೀಪವಾಗಿವೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆಶಯದಂತೆ ಬದುಕೋಣ ಎಂದರು.
ಸಹಾಯಕ ಆಡಳಿತಾಧಿಕಾರಿ ಪಿ.ರವಿಕುಮಾರ್ ಮಾತನಾಡಿ, ಈ ವಿಶೇಷ ದಿನದಂದು ಡಾ. ಅಂಬೇಡ್ಕರ್ ಅವರು ಪ್ರತಿಪಾದಿಸಿದ ಪ್ರಜಾಪ್ರಭುತ್ವ, ಸಾಮಾಜಿಕ ನ್ಯಾಯ ಮತ್ತು ಸ್ವಾತಂತ್ರ‍್ಯದ ಮೌಲ್ಯಗಳನ್ನು ಎತ್ತಿಹಿಡಿಯುತ್ತೇವೆ ಎಂಬ ಭರವಸೆಯನ್ನು ನಾವು ನೀಡೋಣ ಎಂದರು.
ಅಭಿವೃದ್ಧಿ ಅಧಿಕಾರಿ ಆರ್.ರವಿ ಮಾತನಾಡಿ, ನಮಗೆ ಸಮಾನತೆಯ ಹಾದಿಯನ್ನು ತೋರಿಸಿದ ಮತ್ತು ಸಹೋದರತ್ವದ ಗುರಿಯತ್ತ ನಮ್ಮನ್ನು ಮುನ್ನಡೆಸಿದ ಮಹಾನ್ ಶಕ್ತಿ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಪ್ರತಿಯೊಬ್ಬರೂ ಸ್ಮರಿಸುವುದು ಅವಶ್ಯಕವಾಗಿದೆ ಎಂದರು.
ಭಾರತಕ್ಕೆ ಸಂವಿಧಾನ ನೀಡಲು ಶ್ರಮಿಸಿದ ಮತ್ತು ನಮಗೆ ದಾರಿ ದೀಪವಾದ ಮಹಾನಾಯಕ ಡಾ.ಬಿ.ಆರ್. ಅಂಬೇಡ್ಕರ್ ಅವರಿಗೆ ಪ್ರತಿಯೊಬ್ಬರೂ ಗೌರವ ಸಲ್ಲಿಸಬೇಕು. ಅವರು ವಿಶ್ವದಾದ್ಯಂತ ಲಕ್ಷಾಂತರ ಜನರಿಗೆ ಸ್ಫೂರ್ತಿ ನೀಡುತ್ತಿರುವ ಮಹಾನಾಯಕ. ಅವರ ಆದರ್ಶಗಳು ನಮಗೆ ದಾರಿದೀಪವಾಗಿವೆ ಎಂದರು.
ಅಭಿವೃದ್ಧಿ ಅಧಿಕಾರಿ ಡಿ.ನರೇಂದ್ರಕುಮಾರ್ ಮಾತನಾಡಿ, ಬಾಬಾ ಸಾಹೇಬ್ ಅಂಬೇಡ್ಕರ್ ಅವರ ವಿಚಾರಗಳು ಸದಾ ಕಾಲ ನಮಗೆಲ್ಲರಿಗೂ ಸ್ಫೂರ್ತಿಯಾಗಲಿ ಎಂದರು. ಈ ಸಂದರ್ಭದಲ್ಲಿ ಅಭಿವೃದ್ಧಿ ಅಧಿಕಾರಿಗಳು, ಕಚೇರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

ಜಾಹೀರಾತು

spot_img

Most Popular

Recent Comments