ವಿಜಯಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಹಾಗೂ ಬಿಜೆಪಿ ವಿರುದ್ಧ ಬಂಡಾಯದ ಬಾವುಟ ಹಾರಿಸಲು ಸಜ್ಜಾಗಿದ್ದ ಡಾ. ಬಾಬು ರಾಜೇಂದ್ರ ನಾಯಕ್ ಅವರು ಅನಿರೀಕ್ಷಿತ ಬೆಳವಣಿಗೆಯಲ್ಲಿ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದಾರೆ. ಇದರಿಂದಾಗಿ ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ್ತಷ್ಟು ಬಲ ಬಂದಂತಾಗಿದೆ.
ಬಂಜಾರಾ ಸಮಾಜದ ಬಗ್ಗೆ ಹಗುರವಾಗಿ ಮಾತಾಡಿದ್ದ ಸಂಸದ ಹಾಗೂ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ವರ್ತನೆಯನ್ನು ಖಂಡಿಸಿದ ಡಾ. ನಾಯಕ್ ಅವರು ಬಂಜಾರಾ ಸಮುದಾಯವು ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಅವರನ್ನು ಬೆಂಬಲಿಸಲಿದೆ ಎಂದು ಹೇಳಿದರು.