Saturday, December 21, 2024
Homeರಾಜ್ಯದಾವಣಗೆರೆ ಜಿಲ್ಲೆಯಲ್ಲಿ ಎರಡು ಶಿಕ್ಷಕರ ಕ್ಷೇತ್ರ, ಒಂದು ಪದವೀಧರ ಕ್ಷೇತ್ರ ಮೇ 9 ರಿಂದ ನಾಮಪತ್ರ...

ದಾವಣಗೆರೆ ಜಿಲ್ಲೆಯಲ್ಲಿ ಎರಡು ಶಿಕ್ಷಕರ ಕ್ಷೇತ್ರ, ಒಂದು ಪದವೀಧರ ಕ್ಷೇತ್ರ ಮೇ 9 ರಿಂದ ನಾಮಪತ್ರ ಸಲ್ಲಿಕೆ ಆರಂಭ


ದಾವಣಗೆರೆ.ಮೇ.8; ಚುನಾವಣಾ ಆಯೋಗವು ವಿಧಾನ ಪರಿಷತ್ತಿನ ದ್ವೈವಾರ್ಷಿಕ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸಿದ್ದು ದಾವಣಗೆರೆ ಜಿಲ್ಲೆ ಎರಡು ಶಿಕ್ಷಕರ ಕ್ಷೇತ್ರ ಹಾಗೂ ಒಂದು ಪದವೀಧರರ ಕ್ಷೇತ್ರದ ವ್ಯಾಪ್ತಿಯನ್ನು ಹೊಂದಿದ್ದು ಮೇ 9 ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದ್ದಾರೆ.
ಜೂನ್ 21 ಕ್ಕೆ ವಿಧಾನ ಪರಿಷತ್ತಿನ 3 ಪದವೀಧರರ ಹಾಗೂ 3 ಶಿಕ್ಷಕರ ಕ್ಷೇತ್ರದ ಸ್ಥಾನಗಳ ಅವಧಿ ಮುಕ್ತಾಯವಾಗುವುದರಿಂದ ದ್ವೈವಾರ್ಷಿಕ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸಲಾಗಿದೆ. ಮೇ 9 ರಂದು ಅಧಿಸೂಚನೆ ಪ್ರಕಟವಾಗಲಿದ್ದು ಮೇ 16 ರ ವರೆಗೆ ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಮೇ 17 ರಂದು ನಾಮಪತ್ರಗಳ ಪರಿಶೀಲನೆ, ಮೇ 20 ರಂದು ನಾಮಪತ್ರಗಳ ವಾಪಸ್ ಪಡೆಯಲು ಕೊನೆಯ ದಿನವಾಗಿರುತ್ತದೆ. ಜೂನ್ 3 ರಂದು ಬೆಳಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಮತ ಎಣಿಕೆಯು ಜೂನ್ 6 ರಂದು ನಡೆಯಲಿದ್ದು ಜೂನ್ 12 ರವರೆಗೆ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ವಿಧಾನ ಪರಿಷತ್ ಚುನಾವಣಾ ವೇಳಾಪಟ್ಟಿ ಪ್ರಕಟವಾಗಿರುವುದರಿಂದ ನೀತಿಸಂಹಿತೆ ಜಾರಿಯಲ್ಲಿರುತ್ತದೆ.
ದಾವಣಗೆರೆ ಜಿಲ್ಲೆಯಲ್ಲಿ ಒಟ್ಟು 3 ವಿಧಾನ ಪರಿಷತ್ ಸದಸ್ಯರ ಆಯ್ಕೆಗೆ ಚುನಾವಣೆ; ಕರ್ನಾಟಕ ನೈರುತ್ಯ ಪದವೀಧರರ ಕ್ಷೇತ್ರಕ್ಕೆ ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳು ಹಾಗೂ ದಾವಣಗೆರೆ ಜಿಲ್ಲೆಯ ಚನ್ನಗಿರಿ, ಹೊನ್ನಾಳಿ, ನ್ಯಾಮತಿ ತಾಲ್ಲೂಕುಗಳು ಸೇರಲಿವೆ.
ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದ ವ್ಯಾಪ್ತಿ; ಚಿತ್ರದುರ್ಗ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳು ಹಾಗೂ ದಾವಣಗೆರೆ ಜಿಲ್ಲೆಯ ದಾವಣಗೆರೆ, ಹರಿಹರ, ಜಗಳೂರು ತಾಲ್ಲೂಕುಗಳು ಸೇರಲಿವೆ. ಕರ್ನಾಟಕ ನೈರುತ್ಯ ಶಿಕ್ಷಕರ ಕ್ಷೇತ್ರದ ವ್ಯಾಪ್ತಿ; ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳು ಹಾಗೂ ದಾವಣಗೆರೆ ಜಿಲ್ಲೆಯ ಚನ್ನಗಿರಿ, ಹೊನ್ನಾಳಿ, ನ್ಯಾಮತಿ ತಾಲ್ಲೂಕುಗಳು ಈ ಕ್ಷೇತ್ರದಲ್ಲಿ ಬರಲಿವೆ. ಆಯಾ ವಿಭಾಗದ ಪ್ರಾದೇಶಿಕ ಆಯುಕ್ತರು ಚುನಾವಣಾಧಿಕಾರಿಗಳಾಗಿದ್ದು ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಬೆಂಗಳೂರು ಹಾಗೂ ನೈರುತ್ಯ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರಕ್ಕೆ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರು ಚುನಾವಣಾಧಿಕಾರಿಗಳಾಗಿರುತ್ತಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

ಜಾಹೀರಾತು

spot_img

Most Popular

Recent Comments