Saturday, December 21, 2024
Homeನಿಧನಡಾ.ಎಂ.ಜಿ.ಈಶ್ವರಪ್ಪ‌ ನಿಧನಕ್ಕೆ ಕಸಾಪ ಅಧ್ಯಕ್ಷ ಬಿ.ವಾಮದೇವಪ್ಪ ಕಂಬನಿ….

ಡಾ.ಎಂ.ಜಿ.ಈಶ್ವರಪ್ಪ‌ ನಿಧನಕ್ಕೆ ಕಸಾಪ ಅಧ್ಯಕ್ಷ ಬಿ.ವಾಮದೇವಪ್ಪ ಕಂಬನಿ….

ಜಾನಪದ, ಶಿಕ್ಷಣ, ರಂಗಭೂಮಿ, ಸಾಹಿತ್ಯ, ಸಾಂಸ್ಕೃತಿಕ ಹೀಗೆ ಹಲವು ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ್ದ ಡಾ.ಎಂ.ಜಿ.ಈಶ್ವರಪ್ಪ ಅವರ ನಿಧನಕ್ಕೆ ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ವಾಮದೇವಪ್ಪ ಕಂಬನಿ ಮಿಡಿದಿದ್ದಾರೆ.

ಅವಿಭಜಿತ ಚಿತ್ರದುರ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಸಾಹಿತ್ಯ ಲೋಕಕ್ಕೆ ಗಣನೀಯ ಸೇವೆ ಸಲ್ಲಿಸಿದ್ದರು ಹಾಗೂ 2013 ರಲ್ಲಿ ಹರಿಹರದಲ್ಲಿ ನಡೆದಿದ್ದ 6 ನೇ ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದರು. ಅವರ ನಿಧನವು ಸಾಹಿತ್ಯ ಲೋಕಕ್ಕೆ ಹಾಗೂ ಸಾಂಸ್ಕೃತಿಕ ಲೋಕಕ್ಕೆ ಆಘಾತವಾಗಿದೆ. ಕನ್ನಡ ಸಾಹಿತ್ಯ ಪರಿಷತ್ತಿಗೆ ಸದಾ ಮಾರ್ಗದರ್ಶಕರಾಗಿದ್ದ ಈಶ್ವರಪ್ಪ ಅವರ ಅಗಲುವಿಕೆ ಸಾಹಿತ್ಯ ಪರಿಷತ್ತಿಗೆ ತುಂಬಲಾರದ ನಷ್ಟವಾಗಿದೆ ಎಂದು ವಾಮದೇವಪ್ಪ ದುಃಖವನ್ನು ವ್ಯಕ್ತಪಡಿಸಿದರು.

ಶ್ರದ್ಧಾಂಜಲಿ ಸಭೆ:
ದಿನಾಂಕ 02.06.2024 ರ ಭಾನುವಾರ ಸಂಜೆ 5 ಘಂಟೆಗೆ ದಾವಣಗೆರೆಯ ವಿದ್ಯಾನಗರ ಮುಖ್ಯ ರಸ್ತೆಯಲ್ಲಿರುವ ಕುವೆಂಪು ಕನ್ನಡ ಭವನದಲ್ಲಿ ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಅಗಲಿದ ಡಾ.ಎಂ.ಜಿ.ಈಶ್ವರಪ್ಪ ಅವರ ಗೌರವಾರ್ಥ ಶ್ರದ್ಧಾಂಜಲಿ ಸಭೆಯನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾ ಕಸಾಪ ಗೌರವ ಕೋಶಾಧ್ಯಕ್ಷ ಕೆ.ರಾಘವೇಂದ್ರ ನಾಯರಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

ಜಾಹೀರಾತು

spot_img

Most Popular

Recent Comments