ಚಿತ್ರದುರ್ಗ:ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಸಂಘಟಿತ ಕಾರ್ಮಿಕ ವಿಭಾಗದ ಅಧ್ಯಕ್ಷರು ಮತ್ತು ಪೌರ ಸೇವಾ ನೌಕರರ ಸಂಘದ ಮಾಜಿ ಅಧ್ಯಕ್ಷರು ಹಾಗೂ ಆದಿ ಜಾಂಬವ ಸಮುದಾಯದ ನಾಯಕರಾದ ಶ್ರೀ ಜಿ.ಎಸ್.ಮಂಜುನಾಥ್ ಇವರನ್ನು ಆದಿ ಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ಕರ್ನಾಟಕ ಸರ್ಕಾರ ನಾಮ ನಿರ್ದೇಶನ ಮಾಡಿದೆ.
ಇಂದು (24.6.2024) ಬೆಂಗಳೂರಿನ ಯೂನಿಟಿ ಬಿಲ್ಡಿಂಗ್ ನಲ್ಲಿರುವ ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮದ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದ ನೂತನ ಅಧ್ಯಕ್ಷರಾದ ಜಿ.ಎಸ್.ಮಂಜುನಾಥ್ ಅವರಿಗೆ ಮಾಜಿ ಸಚಿವರಾದ ಹೆಚ್.ಆಂಜನೇಯ ಅವರು ಶುಭ ಕೋರಿದರು.
ಈ ಸಂದರ್ಭದಲ್ಲಿ ಮಾಜಿ ಸಂಸದರಾದ ಬಿ.ಎನ್.ಚಂದ್ರಪ್ಪ , ಕಂಠೀರವ ಸ್ಟುಡಿಯೋ ಅಧ್ಯಕ್ಷರಾದ ಮಹಮ್ಮದ್ ಪಾಷಾ,ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಬಿ.ಟಿ.ಮಂಜುನಾಥ್, ಯುವ ಕಾಂಗ್ರೆಸ್ ಮುಖಂಡರಾದ ರವಿವರ್ಮ,ಬೈನರಿ ಅಪರಲ್ ಪಾರ್ಕ್’ನ ಚೇರ್ಮನ್ ಕೆ.ಶ್ರೀನಿವಾಸ್ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.