Saturday, December 21, 2024
Homeಸಂಸ್ಕೃತಿವಿವಿಧ ಜಯಂತಿಗಳ ಪೂರ್ವಭಾವಿಸಭೆ. ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಕ್ರಮಕೈಗೊಳ್ಳಲು ಅಪರ್ ಜಿಲ್ಲಾ ಅಧಿಕಾರಿ ಡಾ.ಕೆ.ಆರ್.ದುರುಗೇಶ್ ಸೂಚನೆ

ವಿವಿಧ ಜಯಂತಿಗಳ ಪೂರ್ವಭಾವಿಸಭೆ. ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಕ್ರಮಕೈಗೊಳ್ಳಲು ಅಪರ್ ಜಿಲ್ಲಾ ಅಧಿಕಾರಿ ಡಾ.ಕೆ.ಆರ್.ದುರುಗೇಶ್ ಸೂಚನೆ


ರಾಯಚೂರು,ಜೂ.25,:- ನಾಡಪ್ರಭು ಕೆಂಪೆಗೌಡ ಜಯಂತಿ ಹಾಗೂ ಡಾ. ಫ.ಗು ಹಳಕಟ್ಟಿ ಜನ್ಮ ದಿನದ ನಿಮಿತ್ಯ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಕ್ರಮಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿಗಳಾದ ಡಾ.ಕೆ.ಆರ್.ದುರುಗೇಶ್ ಅವರು ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಅವರು ಜೂ.25ರ ಮಂಗಳವಾರ ದಂದು ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡ ಹಾಗೂ ಡಾ.ಫ.ಗು.ಹಳಕಟ್ಟಿ ಜನ್ಮ ದಿನದ ನಿಮಿತ್ಯ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು.

ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಇದೇ ಜೂನ್ 27ರಂದು ಹಾಗೂ ಫ.ಗು. ಹಳಕಟ್ಟಿ ಅವರ ಜನ್ಮ ದಿನವಾದ ಜುಲೈ 2ರಂದು ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಎಂದು ಆಚರಿಸಲಾಗುತ್ತಿದ್ದು, ವೇದಿಕೆ ಕಾರ್ಯಕ್ರಮಕ್ಕೆ ಶಿಷ್ಟಾಚಾರದಂತೆ ಜನಪ್ರತಿನಿದಿಗಳು ಹಾಗೂ ಗಣ್ಯ ಮಾನ್ಯರನ್ನು ಆಮಂತ್ರಣ ಪತ್ರಿಕೆಗಳನ್ನು ನೀಡಿ ಆಹ್ವಾನಿಸಲಾಗುವುದು. ನುರಿತ ಉಪನ್ಯಾಸಕರಿಂದ ಉಪನ್ಯಾಸ ಮತ್ತು ಸಂಗೀತ ಕಲಾ ತಂಡಗಳಿAದ ಸಂಗೀತ ಗಾಯನ ಕಾರ್ಯಕ್ರಮ ಹಾಗೂ ಶಾಲಾ ಮತ್ತು ಕಾಲೇಜ್ ವಿದ್ಯಾರ್ಥಿಗಳಿಗೆ ಪ್ರಬಂಧ, ರಂಗೋಲಿ, ಚರ್ಚಾ ಸ್ಪರ್ಧಾಗಳನ್ನು ಏರ್ಪಡಿಸಲು ಅಗತ್ಯ ಕ್ರಮವಹಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಕೆಂಪೇಗೌಡರ ಜಯಂತಿಯ ವೇದಿಕೆ ಕಾರ್ಯಕ್ರಮದಲ್ಲಿ ಉಪನ್ಯಾಸಕಿ ಪ್ರೇಮಲತಾ ಹಾಗೂ ಫ.ಗು. ಹಳಕಟ್ಟಿ ಅವರ ಜನ್ಮ ದಿನವಾದ ಜುಲೈ 2 ರಂದು ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆಯ ವೇದಿಕೆ ಕಾರ್ಯಕ್ರಮದಲ್ಲಿ ಸಾಹಿತಿ ವೀರಹನುಮಾನ್ ಅವರು ಉಪನ್ಯಾಸ ನೀಡಲಿದ್ದು, ಇದಕ್ಕಾಗಿ ಅಗತ್ಯ ಕ್ರಮವಹಿಸುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಈ ವೇಳೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿಯಾದ ಮಂಗಳ ನಾಯಕ ಅವರು ಮಾತನಾಡಿ, ಎಲ್ಲ ಸಮುದಾಯ ಭಾಂದವರು, ವಚನ ಸಾಹಿತ್ಯ ಪ್ರೀಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮಾಜಕ್ಕೆ ಕೊಡುಗೆ ನೀಡಿದ ಮಹನೀಯರ ಜನ್ಮ ದಿನಾರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಯಶಸ್ವೀಗೊಳಿಸಬೇಕು ಎಂದರು.
ಇದೇ ರಾಯಚೂರು ನಗರಸಭೆಯ ಸಮುದಾಯ ಸಂಘಟನಾಧಿಕಾರಿ ಕೃಷ್ಣ, ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ದೈಹಿಕ ಶಿಕ್ಷಣ ಪರೀವಿಕ್ಷರಾದ ಪರುಶುರಾಮ, ಪದವಿ ಪೂರ್ವ ಶಿಕ್ಷಣ ಇಲಾಖೆ ಅಧಿಕಾರಿ ರೆಡ್ಡಿ ಪ್ರೇಮಲತಾ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವೆಂಕಟೇಶ್, ಸಾಹಿತಿಗಳಾದ ವೀರಹನುಮಾನ್, ಅಂಜಿನೇಯ, ರೇಖಾ ಬಡಿಗೇರೆ, ಸೃತಿ ಸಾಹಿತ್ಯ ಸಂಸ್ಥೆಯ ಅಧ್ಯಕ್ಷ ಮುರಿರ್ಳಿಧರ ಕುಲಕರ್ಣಿ, ಹಿರಿಯ ಚಿತ್ರ ಕಲಾವಿದರಾದ ಸೇರಿದಂತೆ ಇತರರು ಸಭೆಯಲ್ಲಿ ಇದ್ದರು.


RELATED ARTICLES

LEAVE A REPLY

Please enter your comment!
Please enter your name here

- Advertisment -

ಜಾಹೀರಾತು

spot_img

Most Popular

Recent Comments