Monday, December 23, 2024
Homeರಾಜಕೀಯಶಾಸಕ ಕೆ.ಎಸ್.ಬಸವಂತಪ್ಪ ಹರಲಿಪುರ ಭೇಟಿ ನಿರ್ಮಾಣ ಹಂತದಲ್ಲಿರುವ ಪ್ರಾಥಮಿಕ ಆರೋಗ್ಯ ಉಪಕೇಂದ್ರ ಕಟ್ಟಡ ಕಾಮಗಾರಿ ಪರಿಶೀಲನೆ

ಶಾಸಕ ಕೆ.ಎಸ್.ಬಸವಂತಪ್ಪ ಹರಲಿಪುರ ಭೇಟಿ ನಿರ್ಮಾಣ ಹಂತದಲ್ಲಿರುವ ಪ್ರಾಥಮಿಕ ಆರೋಗ್ಯ ಉಪಕೇಂದ್ರ ಕಟ್ಟಡ ಕಾಮಗಾರಿ ಪರಿಶೀಲನೆ

ದಾವಣಗೆರೆ: ಪ್ರಾಥಮಿಕ ಆರೋಗ್ಯ ಉಪಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಿ ಈ ಭಾಗದ ಜನರಿಗೆ ಆರೋಗ್ಯ ಸೇವೆ ಒದಗಿಸಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಶಾಸಕ ಕೆ.ಎಸ್.ಬಸವಂತಪ್ಪ ಸೂಚನೆ ನೀಡಿದರು.
ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ಚನ್ನಗಿರಿ ತಾಲೂಕಿನ ಹರಲಿಪುರ ಗ್ರಾಮಕ್ಕೆ ಮಂಗಳವಾರ ಭೇಟಿ ನೀಡಿ, ೧೮.೫೦ ಲಕ್ಷ ರೂ. ವೆಚ್ಚದ ನಿರ್ಮಾಣ ಹಂತದಲ್ಲಿರುವ ಪ್ರಾಥಮಿಕ ಆರೋಗ್ಯ ಉಪಕೇಂದ್ರ ಕಟ್ಟಡ ಕಾಮಗಾರಿ ಪರಿಶೀಲನೆ ನೀಡಿದರು.
ಕಳೆದ ಮೂರು ವರ್ಷಗಳಿಂದ ನಿರ್ಮಿತಿ ಕೇಂದ್ರದಿಂದ ಪ್ರಾಥಮಿಕ ಆರೋಗ್ಯ ಉಪಕೇಂದ್ರದ ಕಟ್ಟಡ ನಿರ್ಮಾಣ ಕಾಮಗಾರಿ ನಿರ್ವಹಿಸಲಾಗುತ್ತಿದೆ. ಕಟ್ಟಡ ಬಹುತೇಕ ಪೂರ್ಣಗೊಂಡಿದ್ದು, ಅಲ್ಲಲ್ಲಿ ಕಳಪೆ ಕಾಮಗಾರಿ ಮಾಡಿರುವುದು ಕಂಡು ಬಂದಿದೆ. ಕೂಡಲೇ ಅಧಿಕಾರಿಗಳು ಗುಣಮಟ್ಟದ ಕಾಮಗಾರಿ ನಡೆಸಿ ಕಟ್ಟಡ ಕಾಮಗಾರಿ ಪೂರ್ಣಗೊಳಿಸಬೇಕೆಂದು ನಿರ್ಮಿತಿ ಕೇಂದ್ರದ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಪ್ರಾಥಮಿಕ ಆರೋಗ್ಯ ಉಪಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿ ಕಳೆದ ಮೂರು ವರ್ಷಗಳಿಂದ ನೆನಗುದಿಗೆ ಬಿದ್ದ ಕಾರಣ ಈ ಭಾಗದ ಜನರಿಗೆ ಸಾಕಷ್ಟು ತೊಂದರೆ ಆಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಪ್ರಾಥಮಿಕ ಆರೋಗ್ಯ ಉಪಕೇಂದ್ರ ಕಟ್ಟಡ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಲೋಕಾರ್ಪಣೆ ಮಾಡಲು ಅಧಿಕಾರಿಗಳು ಸಿದ್ಧತೆ ಮಾಡಿಕೊಳ್ಳಬೇಕೆಂದು ಸೂಚನೆ ನೀಡಿದರು.
ಅಂಗನವಾಡಿ ಕೇಂದ್ರಕ್ಕೆ ಭೇಟಿ: ಗ್ರಾಮದಲ್ಲಿರುವ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಶಾಸಕ ಕೆ.ಎಸ್.ಬಸವಂತಪ್ಪ, ಅಂಗನವಾಡಿ ಕೇಂದ್ರ ಹಳೆಯ ಕಟ್ಟಡವಾಗಿದ್ದು, ಶಾಸಕರ ನಿಧಿಯಡಿ ಅನುದಾನ ಬಿಡುಗಡೆ ಮಾಡಿ ಹೊಸ ಅಂಗನವಾಡಿ ಕೇಂದ್ರದ ಕಟ್ಟಡ ನಿರ್ಮಿಸುವುದಾಗಿ ಭರವಸೆ ನೀಡಿದರು.
ಗ್ರಾಮದಲ್ಲಿ ದೊಡ್ಡ ಚರಂಡಿ ವ್ಯವಸ್ಥೆ ಇಲ್ಲದೆ ಮಳೆ ಧಾರಾಕಾರವಾಗಿ ಸುರಿದ ಸಂದರ್ಭದಲ್ಲಿ ಇಡೀ ಗ್ರಾಮದ ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತ ಆಗುತ್ತದೆ. ದೊಡ್ಡ ಚರಂಡಿ ನಿರ್ಮಾಣ ಮಾಡಿದರೆ ನೀರು ಸರಾಗವಾಗಿ ಹರಿಯುತ್ತದೆ ಎಂದು ಗ್ರಾಮಸ್ಥರ ಬಹಳ ದಿನಗಳಿಂದ ಒತ್ತಾಯ ಇದೆ. ಈ ನಿಟ್ಟಿನಲ್ಲಿ ೫೦ ಲಕ್ಷ ರೂ. ಅನುದಾನ ಬಿಡುಗಡೆ ಮಾಡಿಸಿ ದೊಡ್ಡ ಚರಂಡಿ ನಿರ್ಮಾಣ ಮಾಡಿಸುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಹೀಮಾಕ್ಷಿ ರವಿ, ತಾಪಂ ಮಾಜಿ ಸದಸ್ಯ ಸತೀಶ್ ಪಟೇಲ್, ಬಸವಾಪಟ್ಟಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ.ನಾಗರಾಜ್, ಗ್ರಾಮದ ಮುಖಂಡ ಶಿವಮೂರ್ತಿ, ನರ್ಸ್ ದ್ರಾಕ್ಷಣಮ್ಮ, ಶ್ರೀದೇವಿ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.


RELATED ARTICLES

LEAVE A REPLY

Please enter your comment!
Please enter your name here

- Advertisment -

ಜಾಹೀರಾತು

spot_img

Most Popular

Recent Comments