ದಾವಣಗೆರೆ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2024-25ನೇ ಸಾಲಿನ ಗುರುತಿನ ಚೀಟಿ ವಿತರಣಾ ಸಮಾರಂಭವನ್ನು ದಿನಾಂಕ 25-7-2024ರ ಗುರುವಾರ ಬೆಳಿಗ್ಗೆ 10-30ಕ್ಕೆ ಮಹಾನಗರಪಾಲಿಕೆ ಆವರಣದಲ್ಲಿರುವ ಸಂಘದ ಕಛೇರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಸಂಘದ ಅಧ್ಯಕ್ಷರಾದ ಶ್ರೀ ಇ.ಎಂ.ಮಂಜುನಾಥ್ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ದಾವಣಗೆರೆ ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ಶ್ರೀ ಹುಲ್ಲುಮನಿ ತಿಮ್ಮಣ್ಣ, ಖ್ಯಾತ ಲೆಕ್ಕಪರಿಶೋಧಕರಾದ ಶ್ರೀ ಅಥಣಿ ವೀರಣ್ಣ, ಖ್ಯಾತ ಹೋಟೆಲ್ ಉದ್ಯಮಿಗಳಾದ ಶ್ರೀ ಅಣಬೇರು ರಾಜಣ್ಣ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ರಾಜ್ಯ ಸಮಿತಿ ಸದಸ್ಯರಾದ ಶ್ರೀ ಕೆ.ಚಂದ್ರಣ್ಣ, ರಾಷ್ಟ್ರೀಯ ಮಂಡಳಿ ಸದಸ್ಯರಾದ ಶ್ರೀ ಎಸ್.ಕೆ.ಒಡೆಯರ್ ಉಪಸ್ಥಿತರಿರುತ್ತಾರೆ.
ಸಂಘದ ಸರ್ವ ಸದಸ್ಯರು ಸರಿಯಾದ ಸಮಯಕ್ಕೆ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವುದರ ಮೂಲಕ ತಮ್ಮ ಸದಸ್ಯತ್ವದ ಗುರುತಿನ ಚೀಟಿ ಪಡೆಯಲು ಕೋರಿದೆ. ಎಲ್ಲಾ ತಾಲ್ಲೂಕುಗಳ ಅಧ್ಯಕ್ಷರು/ಕಾರ್ಯದರ್ಶಿ ಕಾರ್ಯಕ್ರಮಕ್ಕೆ ಆಗಮಿಸಿ ತಮ್ಮ ತಾಲ್ಲೂಕಿನ ಗುರುತಿನ ಚೀಟಿ ಪಡೆಯಲು ಜಿಲ್ಲಾ ಪ್ರಧಾನಕಾರ್ಯದರ್ಶಿ ಎ.ಫಕೃದ್ದೀನ್ ಕೋರಿದ್ದಾರೆ.