Saturday, December 21, 2024
Homeಸಾರ್ವಜನಿಕ ಧ್ವನಿಚುನಾಯಿತ ಸರ್ಕಾರಗಳನ್ನು ಅಸ್ಥಿರಗೊಳಿಸಲು ಬಿಜೆಪಿ ಹುನ್ನಾರಕ್ಕೆ.ರಾಜ್ಯಪಾಲರ ದುರ್ಬಳಕೆ ಖಂಡಿಸಿ ಸಿಪಿಐ ರಾಷ್ಟ್ರಪತಿಗೆ ಮನವಿ ಸಲ್ಲಿಗೆ

ಚುನಾಯಿತ ಸರ್ಕಾರಗಳನ್ನು ಅಸ್ಥಿರಗೊಳಿಸಲು ಬಿಜೆಪಿ ಹುನ್ನಾರಕ್ಕೆ.ರಾಜ್ಯಪಾಲರ ದುರ್ಬಳಕೆ ಖಂಡಿಸಿ ಸಿಪಿಐ ರಾಷ್ಟ್ರಪತಿಗೆ ಮನವಿ ಸಲ್ಲಿಗೆ

ದಾವಣಗೆರೆ:, ಕರ್ನಾಟಕ ರಾಜ್ಯದ ಇತ್ತೀಚಿನ ರಾಜಕೀಯ ಬೆಳವಣಿಗೆ ಗಮನಿಸಿದರೆ ಜನತಂತ್ರ ವ್ಯವಸ್ಥೆಯಲ್ಲಿ ಜನರಿಂದ ಬಹುಮತದಿಂದ ಆಯ್ಕೆಯಾದ ಸರ್ಕಾರವನ್ನು ಕೇಂದ್ರ ಸರ್ಕಾರದಿಂದ ನೇಮಕವಾದ ರಾಜ್ಯ ಪಾಲರನ್ನು ಬಳಸಿಕೊಂಡು ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನ ಮಾಡುತ್ತಿರುವ ಬಿಜೆಪಿ ಪಕ್ಷದ ಕುಟೀಲ ನೀತಿ ಬಹಿರಂಗವಾಗುತ್ತಿದೆ.

ರಾಜ್ಯದಲ್ಲಿ ನಡೆದಿದೆ ಎನ್ನಲಾದ ಮುಡಾ ಬದಲಿ ನಿವೇಶನ ಹಂಚಿಕೆ ಪ್ರಕರಣವಾಗಲಿ ವಾಲ್ಮೀಕಿ ಅಭಿವೃದ್ದಿ ನಿಗಮದ ಭ್ರಷ್ಟಾಚಾರ ಪ್ರಕರಣವಾಗಲಿ ಇವುಗಳ ಬಗ್ಗೆ ನಿಷ್ಪಕ್ಷಪಾತ ತನಿಖೆಗೆ ಭಾರತ ಕಮ್ಯುನಿಸ್ಟ್ ಪಕ್ಷದ ದಾವಣಗೆರೆ ಜಿಲ್ಲಾ ಮಂಡಳಿ ಆಗ್ರಹಿಸುತ್ತದೆ.
ಆದರೆ ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಷನ್‌ ಗೆ ಅನುಮತಿ ನೀಡುವ ಸಂದರ್ಭದಲ್ಲಿ ರಾಜ್ಯಪಾಲರ ಕಚೇರಿ ರಾಜಕೀಯ ಒತ್ತಡಕ್ಕೆ ಮಣಿದು ತೀರ್ಮಾನ ಕೈಗೊಂಡಿರುವುದು ಮೇಲ್ನೋಟಕ್ಕೆ ಸ್ಪಷ್ಟವಾಗಿ ಕಂಡುಬರುತ್ತಿದೆ. ರಾಜ್ಯಪಾಲರ ಕಚೇರಿಗೆ ಲೋಕಾಯುಕ್ತ ಸಂಸ್ಥೆ ಇತರೆ ಪ್ರಕರಣದಲ್ಲಿ ತನಿಖೆಗೆ ಅನುಮತಿ ಕೇಳಿ ವರ್ಷಗಳೇ ಕಳೆದರೂ ಅವುಗಳ ಬಗ್ಗೆ ಯಾವುದೇ ತೀರ್ಮಾನ ಮಾಡದ ರಾಜ್ಯಪಾಲರು, ಮುಡಾ ಪ್ರಕರಣದಲ್ಲಿ ತೆಗೆದು ಕೊಂಡ ತೀರ್ಮಾನ ಪೂರ್ಣ ರಾಜಕೀಯ ಪ್ರೇರಿತ ಎಂಬುದಕ್ಕೆ ಸಾಕ್ಷಿಯಾಗಿದೆ.
ಈಗಾಗಲೇ ದೇಶಾದ್ಯಂತ ಹಲವು ರಾಜ್ಯಗಳಲ್ಲಿ ಅಂದರೆ ತಮಿಳುನಾಡು, ಕೇರಳ, ಪಾಂಡಿಚೇರಿ, ಪಶ್ಚಿಮ ಬಂಗಾಳ, ರಾಜಸ್ಥಾನ ಮುಂತಾದ ರಾಜ್ಯಗಳಲ್ಲಿ ರಾಜ್ಯಪಾಲರು ಮತ್ತು ಚುನಾಯಿತ ಸರ್ಕಾರಗಳ ನಡುವೆ ಸಂಘರ್ಷ ನಡೆದಿರುವುದು ಬಯಲಾಗಿದೆ. ಚುನಾಯಿತ ಸರ್ಕಾರಗಳನ್ನು ಅಸ್ಥಿರಗೊಳಿಸಲು ಬಿಜೆಪಿ.ರಾಜ್ಯಪಾಲರನ್ನು ಬಳಸಿಕೊಳ್ಳುವ ಹಾದಿ ಹಿಡಿದಿರುವುದು ದೇಶದ ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿದೆ.
ಈ ಹಿನ್ನಲೆಯಲ್ಲಿ ರಾಜ್ಯಪಾಲ ಹುದ್ದೆ ರದ್ದತಿಗೆ ಇದು ಸಕಾಲವಾಗಿದೆ. ಸಂವಿಧಾನಬದ್ದ ಒಕ್ಕೂಟ ವ್ಯವಸ್ಥೆಯನ್ನು ಉಳಿಸಲು ರಾಜ್ಯದ ಸ್ವಾಯತ್ತ ಅಧಿಕಾರದಲ್ಲಿ ರಾಜ್ಯಪಾಲರ ಹಸ್ತಕ್ಷೇಪ ನಿಲ್ಲಿಸಲು, ಬಿಜೆಪಿ ಮತ್ತು ಆರ್.ಎಸ್.ಎಸ್. ಚಿಂತನೆಯನ್ನು ರಾಜ್ಯಪಾಲರ ಮೂಲಕ ಹಾರಿಗೊಳಿಸುವ ಹುನ್ನಾರ ತಪ್ಪಿಸಲು ರಾಜ್ಯವಾಲರ ಹುದ್ದೆ ರದ್ದತಿಗೆ ಇದು ಸಕಾಲವಾಗಿದೆ.
ಆದುದರಿಂದ ಭಾರತ ಕಮ್ಯುನಿಸ್ಟ್ ಪಕ್ಷ ರಾಜ್ಯಪಾಲ ಹುದ್ದೆ ರದ್ದತಿಗೆ ಆಗ್ರಹಿಸುತ್ತದೆ. ಈ ಬಗ್ಗೆ ಈಗಾಗಲೇ ರಾಷ್ಟ್ರವ್ಯಾಪಿ ಚಳುವಳಿ ಆರಂಭಿಸಿರುವ ಭಾರತ ಕಮ್ಯುನಿಸ್ಟ್ ಪಕ್ಷದ ಕರೆಯ ಮೇರೆಗೆ ದಿನಾಂಕ 29-8-2024ರಂದು ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸುವ ಮೂಲಕ ರಾಜ್ಯಪಾಲ ಹುದ್ದೆ ರದ್ದು ಮಾಡಿ, ಒಕ್ಕೂಟ ವ್ಯವಸ್ಥೆ ಉಳಿಸಿ ಎಂಬ ಘೋಷಣೆ ಅಡಿಯಲ್ಲಿ ಭಾರತ ಕಮ್ಯುನಿಸ್ಟ್ ಪಕ್ಷದ ದಾವಣಗೆರೆ ಜಿಲ್ಲಾ ಮಂಡಳಿ ವತಿಯಿಂದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮುಖಾಂತರ ಸನ್ಮಾನ್ಯ ರಾಷ್ಟ್ರಪತಿಯವರಿಗೆ ಭಾರತ ಕಮ್ಯೂನಿಸ್ಟ್‌ ಪಕ್ಷ ದಾವಣಗೆರೆ ಜಿಲ್ಲಾ ಮಂಡಳಿಯಿಂದ ಮನವಿ ಸಲ್ಲಿಸಲಾಯಿತು.

RELATED ARTICLES

LEAVE A REPLY

Please enter your comment!
Please enter your name here

- Advertisment -

ಜಾಹೀರಾತು

spot_img

Most Popular

Recent Comments