Monday, December 23, 2024
Homeರಾಜಕೀಯನರೆಂದ್ರ ಮೋದಿಯವರ ಬಿಜೆಪಿ ಸರ್ಕಾರ ಕೇವಲ ನನ್ನ ಮೇಲಷ್ಟೇ ಅಲ್ಲ, ಇಡೀ ದೇಶದ ವಿರೋಧಪಕ್ಷಗಳ ಮೇಲೆ...

ನರೆಂದ್ರ ಮೋದಿಯವರ ಬಿಜೆಪಿ ಸರ್ಕಾರ ಕೇವಲ ನನ್ನ ಮೇಲಷ್ಟೇ ಅಲ್ಲ, ಇಡೀ ದೇಶದ ವಿರೋಧಪಕ್ಷಗಳ ಮೇಲೆ ಸೇಡಿನ ರಾಜಕೀಯ ಮಾಡುತ್ತಿದೆ

ಬೆಂಗಳೂರು:ಮುಡಾ ಪ್ರಕರಣ ಸಂಬಂಧ ಉಚ್ಛ ನ್ಯಾಯಾಲಯವು ನೀಡಿರುವ ಆದೇಶದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರಿಕಾಗೋಷ್ಠಿ ನಡೆಸಿ, ಮಾತನಾಡಿದರು.

ನಾನು ತಪ್ಪು ಮಾಡಿಲ್ಲ. 17ಎ ರಡಿ ತನಿಖೆ ಮಾಡಲು ಆದೇಶ ನೀಡಿದ ಮಾತ್ರಕ್ಕೆ ನಾನು ತಪ್ಪು ಮಾಡಿದ್ದೇನೆ ಎಂದಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಹೇಳಿದರು.

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿಎನ್‌ಎಸ್‌ಎಸ್ 218ರ ಹಾಗೂ ಪಿಸಿ ಕಾಯ್ದೆ 19ರಂತೆ ತನಿಖೆಗೆ ಅನುಮತಿ ನೀಡುವುದನ್ನು ತಿರಸ್ಕರಿಸಿ, ಪಿಸಿ ಕಾಯ್ದೆಯ 17ಎ ಪ್ರಕಾರ ತನಿಖೆಗೆ ಉಚ್ಛನ್ಯಾಯಾಲಯ ಆದೇಶ ನೀಡಿದೆ. ಈ ತೀರ್ಪಿನ ಮೇಲೆ ಮುಂದಿನ ಕಾನೂನು ಹೋರಾಟದ ಬಗ್ಗೆ ಕಾನೂನು ತಜ್ಞರೊಂದಿಗೆ ಚರ್ಚೆ ಮಾಡಿ, ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದರು.

ನಾನು ತಪ್ಪು ಮಾಡಿಲ್ಲ. 17ಎ ರಡಿ ತನಿಖೆ ಮಾಡಲು ಆದೇಶ ನೀಡಿದ ಮಾತ್ರಕ್ಕೆ ನಾನು ತಪ್ಪು ಮಾಡಿದ್ದೇನೆ ಎಂದಲ್ಲ. ಇಡೀ ದೇಶದಲ್ಲಿ ವಿಪಕ್ಷಗಳ ಸರ್ಕಾರದ ಮೇಲೆ ಭಾರತೀಯ ಜನತಾ ಪಕ್ಷ ಸರ್ಕಾರ ಪಿತೂರಿ ಮಾಡಿದಂತೆ ಕರ್ನಾಟಕದಲ್ಲಿಯೂ ನನ್ನ ಹಾಗೂ ನಮ್ಮ ಸರ್ಕಾರದ ವಿರುದ್ಧ ಪಿತೂರಿ ಮಾಡಲಾಗಿದೆ.
ಮುಂದಿನ ದಿನಗಳಲ್ಲಿ ಖಂಡಿತಾ ನನಗೆ ಜಯ ಸಿಗಲಿದೆ ಎಂದು ವಿಶ್ವಸ ವ್ಯಕ್ತಪಡಿಸಿದರು.
ಬಿಜೆಪಿಯವರನ್ನು ನಾವು ರಾಜಕೀಯವಾಗಿ ಎದುರಿಸುತ್ತೇವೆ. ಬಿ.ಜೆ.ಪಿ. ಯವರು ಹೇಳಿದ ಮಾತ್ರಕ್ಕೆ ನಾನು ರಾಜೀನಾಮೆ ಏಕೆ ಕೊಡಬೇಕು? ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಮೇಲೆ ಎಫ್.ಐ.ಆರ್ ಆಗಿದ್ದು, ಅವರು ಜಾಮೀನಿನ ಮೇಲೆ ಇದ್ದಾರೆ. ಅವರು ರಾಜೀನಾಮೆ ಕೊಟ್ಟಿದ್ದಾರೆಯೇ?ದು ಪ್ರಶ್ನಿಸಿದರು. ಇದು ಅವರಿಗೆ ಅನ್ವಯವಾಗುವುದಿಲ್ಲವೇ? ತನಿಖೆ ಹಂತದಲ್ಲಿಯೇ ರಾಜೀನಾಮೆ ಕೊಡಬೇಕು ಎನ್ನುವ ಬಿಜೆಪಿ ವಾದಕ್ಕೆ ಕುಮಾರಸ್ವಾಮಿ ಅವರ ಪ್ರತಿಕ್ರಿಯೆ ಏನೆಂದು ಕೇಳಿ.
ನಮ್ಮ ಸರ್ಕಾರವನ್ನು ಅಭದ್ರಗೊಳಿಸಲು ಹಾಗೂ ನನ್ನ ರಾಜಕೀಯ ಜೀವನಕ್ಕೆ ಮಸಿ ಬಳಿಯಲು ಬಿಜೆಪಿ – ಜೆಡಿಎಸ್ ನಡೆಸುತ್ತಿರುವ ಪ್ರಯತ್ನಕ್ಕೆ ಭವಿಷ್ಯದಲ್ಲಿ ಸೋಲು ಖಚಿತ. ಭಾರತೀಯ ಜನತಾ ಪಕ್ಷ ಹಾಗೂ ಜನತಾದಳ ಜಾತ್ಯತೀತ ಪಕ್ಷಗಳ ನಾಯಕರ ಸಂಚು, ರಾಜಭವನ ದುರುಪಯೋಗ – ದುರ್ಬಳಕೆಗೆ ನಾನು ಹೆದರುವುದಿಲ್ಲ. ರಾಜ್ಯದ ಜನ, ಪಕ್ಷದ ಹೈಕಮಾಂಡ್, ಶಾಸಕರು, ಸಚಿವರು, ಕಾರ್ಯಕರ್ತರು ನನ್ನೊಂದಿಗಿದ್ದಾರೆ. ಕಾನೂನು ಹೋರಾಟಕ್ಕೆ ಹೈಕಮಾಂಡ್ ಸಹಕಾರ ನೀಡಲಿದೆ. ನರೆಂದ್ರ ಮೋದಿಯವರ ಬಿಜೆಪಿ ಸರ್ಕಾರ ಕೇವಲ ನನ್ನ ಮೇಲಷ್ಟೇ ಅಲ್ಲ, ಇಡೀ ದೇಶದ ವಿರೋಧಪಕ್ಷಗಳ ಮೇಲೆ ಸೇಡಿನ ರಾಜಕೀಯ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸುದ್ದಿ ಗೋಷ್ಠಿಯಲ್ಲಿ ಹೇಳಿದರು.ಈ ವೇಳೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಹೆಚ್.ಕೆ.ಪಾಟೀಲ್,ಪ್ರಕಾಶ್ ರಾಠೋಡ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

ಜಾಹೀರಾತು

spot_img

Most Popular

Recent Comments