ದಾವಣಗೆರೆ,ಅಕ್ಟೋಬರ್.19:ಜಿಲ್ಲಾಡಳಿತದಿಂದ ನವೆಂಬರ್ 1 ರಂದು ನಡೆಯುವ 69 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಿದ್ದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ರಾಷ್ಟ್ರಧ್ವಜಾರೋಹಣ ನೆರವೇರಿಸುವರು ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.
ಅವರು ಗುರುವಾರ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ರಾಜ್ಯೋತ್ಸವ ಆಚರಣೆ ಪೂರ್ವಭಾವಿ ಸಿದ್ದತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕರ್ನಾಟಕ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಣೆ ಮಾಡಲಾಗುತ್ತಿದ್ದು ಹೈಸ್ಕೂಲ್ ಮೈದಾನದಿಂದ ವಿವಿಧ ಆಕರ್ಷಕ ಕಲಾತಂಡಗಳೊಂದಿಗೆ ಭುವನೇಶ್ವರಿ ದೇವಿ ಭಾವಚಿತ್ರದೊಂದಿಗೆ ಮೆರವಣಿಗೆ ಸಾಗಲಿದ್ದು ಜಿಲ್ಲಾ ಕ್ರೀಡಾಂಗಣಕ್ಕೆ ಆಗಮಿಸಲಿದೆ. ಮೆರವಣಿಗೆಯಲ್ಲಿ ಅಧಿಕಾರಿಗಳು, ಸಿಬ್ಬಂದಿಗಳು ಮತ್ತು ಕನ್ನಡಪರ ಸಂಘಟನೆಗಳ ಸಂಘ, ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಬೇಕು ಎಂದರು.
ರಾಜ್ಯೋತ್ಸವ ಅಂದರೆ ನವೆಂಬರ್ ತಿಂಗಳಿಗೆ ಮಾತ್ರ ಕನ್ನಡ ಬಳಕೆ ಸೀಮಿತವಾಗದೇ ಆಡಳಿತದಲ್ಲಿ ಕನ್ನಡ, ನಿತ್ಯ ಬಳಕೆಯಲ್ಲಿ ಕನ್ನಡ, ಕಡತದಲ್ಲಿ ಕನ್ನಡ ಬಳಕೆ ಮಾಡುವ ಮೂಲಕ ವರ್ಷಪೂರ್ತಿ ರಾಜ್ಯೋತ್ಸವ ಆಚರಣೆ ಮಾಡಲಾಗುತ್ತದೆ. ಈಗಾಗಲೇ ಆಡಳಿತದಲ್ಲಿ ಕನ್ನಡ ಬಳಕೆಗೆ ಸೂಚನೆ ನೀಡಲಾಗಿದ್ದು ಎಲ್ಲಾ ಇಲಾಖೆಯಲ್ಲಿಯು ಕನ್ನಡ ಬಳಕೆ ಕಡ್ಡಾಯ ಮಾಡಲಾಗಿದೆ. ಮತ್ತು ಕೆಲವು ಖಾಸಗಿ ಹೆದ್ದಾರಿ ಫಲಕಗಳಲ್ಲಿ ಇಂಗ್ಲೀಷ್ ಬಳಕೆ ಮಾಡಲಾಗುತ್ತಿದೆ ಮತ್ತು ಶಾಲೆಗಳಲ್ಲಿ ಮಕ್ಕಳು ಇಂಗ್ಲೀಷ್‍ನಲ್ಲಿಯೇ ಮಾತನಾಡಬೇಕೆಂದು ಕಡ್ಡಾಯಗೊಳಿಸಿರುವ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಮೂಲಕ ಅಂತಹ ಶಾಲೆಗಳಿಗೆ ನೊಟೀಸ್ ನೀಡಲಾಗುತ್ತದೆ ಎಂದರು.
ಸಾಂಸ್ಕøತಿ ಕಾರ್ಯಕ್ರಮ; ರಾಜ್ಯೋತ್ಸವ ಅಂಗವಾಗಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ನಾಡು, ನುಡಿಯ ಕುರಿತಂತೆ ಗುಣಮಟ್ಟದ ನೃತ್ಯ ಕಾರ್ಯಕ್ರಮ ಏರ್ಪಾಡು ಮಾಡಲಾಗುತ್ತದೆ. ಮತ್ತು ಸಂಜೆಯ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಗ್ಲಾಸ್‍ಹೌಸ್‍ನಲ್ಲಿ ಏರ್ಪಡಿಸಲಾಗುತ್ತದೆ. ಈ ಕಾರ್ಯಕ್ರಮಗಳನ್ನು ತುಂಬಾ ಅಚ್ಚುಕಟ್ಟಾಗಿ ಏರ್ಪಡಿಸಲು ಸೂಚನೆ ನೀಡಿದರು.
ಸಿದ್ದತೆಗೆ ಸೂಚನೆ; ರಾಜ್ಯೋತ್ಸವ ಆಚರಣೆಗೆ ಅಗತ್ಯವಿರುವ ಸಿದ್ದತೆ ಕೈಗೊಳ್ಳಲು ವಿವಿಧ ಉಪಸಮಿತಿಗಳನ್ನು ರಚಿಸಲಾಗಿದ್ದು ಆಯಾ ಇಲಾಖೆ ಅಧಿಕಾರಿಗಳು ಸಿದ್ದತೆ ಕೈಗೊಳ್ಳಲು ಸೂಚನೆ ನೀಡಿ ಎಲ್ಲಾ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಕಾರ್ಯಕ್ರಮದಲ್ಲಿರಬೇಕೆಂದು ಸೂಚನೆ ನೀಡಿದರು.
ಈ ವೇಳೆ ವಿವಿಧ ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದು ರಾಜ್ಯೋತ್ಸವ ಆಚರಣೆಗೆ ಸಂಬಂಧಿಸಿದಂತೆ ತಮ್ಮ ಸಲಹೆಗಳನ್ನು ನೀಡಿದರು.
ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕೃಷ್ಣನಾಯ್ಕ್, ಪಾಲಿಕೆ ಆಯುಕ್ತೆ ರೇಣುಕಾ, ಕ.ಸಾ.ಪ ಅಧ್ಯಕ್ಷರಾದ ವಾಮದೇವಪ್ಪ, ಕನ್ನಡ ಅಭಿವೃದ್ದಿ ಪ್ರಾಧಿಕಾರದ ಸದಸ್ಯರಾದ ಡಾ; ರಾಮಚಂದ್ರಪ್ಪ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.