Saturday, January 11, 2025
Homeಸಂಸ್ಕೃತಿ‘ಮಕರ ಸಂಕ್ರಾಂತಿ’ ಹಬ್ಬವು ತಿಥಿವಾಚಕವಾಗಿರದೇ ಅಯನ-ವಾಚಕವಾಗಿದೆ:ವಿದ್ವಾನ್ ಶ್ರೀ ಬೂದೀಸ್ವಾಮಿ ಹಿರೇಮಠ

‘ಮಕರ ಸಂಕ್ರಾಂತಿ’ ಹಬ್ಬವು ತಿಥಿವಾಚಕವಾಗಿರದೇ ಅಯನ-ವಾಚಕವಾಗಿದೆ:ವಿದ್ವಾನ್ ಶ್ರೀ ಬೂದೀಸ್ವಾಮಿ ಹಿರೇಮಠ

‘ಮಕರ ಸಂಕ್ರಾಂತಿ’ ಹಬ್ಬವು ತಿಥಿವಾಚಕವಾಗಿರದೇ ಅಯನ-ವಾಚಕವಾಗಿದೆ. ಈ ದಿನ ಸೂರ್ಯನ ನಿರಯನ ಮಕರ ರಾಶಿಯಲ್ಲಿ ಸಂಕ್ರಮಣವಾಗುತ್ತದೆ. ಇದರೊಂದಿಗೆ ಸಂಕ್ರಾಂತಿಯನ್ನು ದೇವತೆ ಎಂದು ನಂಬಲಾಗಿದೆ. ಸಂಕ್ರಾಂತಿಯು ಸಂಕರಾಸುರನೆಂಬ ದೈತ್ಯನನ್ನು ವಧಿಸಿದ್ದಳು ಎಂಬ ಕಥೆಯೂ ಇದೆ. ಸೂರ್ಯನ ಭ್ರಮಣದಿಂದಾಗುವ ಕಾಲ ವ್ಯತ್ಯಾಸವನ್ನು ಸರಿಪಡಿಸಲು ಪ್ರತಿ 80 ವರ್ಷಕ್ಕೊಮ್ಮೆ ಸಂಕ್ರಾಂತಿಯನ್ನು ಒಂದು ದಿನ ಮುಂದೂಡಲಾಗುತ್ತದೆ. 2025 ರಲ್ಲಿ ಮಕರ ಸಂಕ್ರಾಂತಿಯು 14 ಜನವರಿ 2025, ಮಂಗಳವಾರದಂದು ಆಚರಿಸಲಾಗುವುದು. ಸಂಕ್ರಾಂತಿಯಂದು ಒಬ್ಬರಿಗೊಬ್ಬರು ಎಳ್ಳು-ಬೆಲ್ಲ (ಎಳ್ಳು ಬೆಲ್ಲದ ಜೊತೆ ಕಬ್ಬು, ಕೊಬ್ಬರಿ, ಕಡಲೆಬೀಜ, ಹುರಿಗಡಲೆ ಕೂಡ) ಹಂಚುತ್ತಾರೆ. ಇದು ಪ್ರೀತಿ ಮತ್ತು ಸೌಹಾರ್ದತೆ ಹೆಚ್ಚಿಸುವ ಹಬ್ಬವಾಗಿದೆ.

ಕರ್ಕಸಂಕ್ರಾಂತಿಯಿಂದ ಮಕರ ಸಂಕ್ರಾಂತಿಯ ವರೆಗಿನ ಕಾಲವನ್ನು ‘ದಕ್ಷಿಣಾಯನ’ ಎನ್ನುತ್ತಾರೆ. ದಕ್ಷಿಣಾಯನ ಕಾಲದಲ್ಲಿ ಮೃತನಾದ ವ್ಯಕ್ತಿಯು, ಉತ್ತರಾಯಣದಲ್ಲಿ ಮೃತನಾದ ವ್ಯಕ್ತಿಗಿಂತ ದಕ್ಷಿಣಲೋಕಕ್ಕೆ (ಯಮಲೋಕಕ್ಕೆ) ಹೋಗುವ ಸಾಧ್ಯತೆ ಹೆಚ್ಚಿರುತ್ತದೆ.

ಸಾಧನೆಯ ದೃಷ್ಟಿಯಿಂದ ಮಕರ ಸಂಕ್ರಾಂತಿಯ ಮಹತ್ವ
ಈ ದಿನ ಸೂರ್ಯೋದಯದಿಂದ ಸೂರ್ಯಾಸ್ತದ ವರೆಗಿನ ವಾತಾವರಣವು ಅಧಿಕ ಚೈತನ್ಯಮಯವಾಗಿರುವುದರಿಂದ ಸಾಧನೆಯನ್ನು ಮಾಡುವವರಿಗೆ ಈ ಸಮಯ ಚೈತನ್ಯದ ಲಾಭವಾಗುತ್ತದೆ.

ಮಕರ ಸಂಕ್ರಾಂತಿಯ ಪುಣ್ಯಕಾಲದಲ್ಲಿ ಇವನ್ನು ಮಾಡಿ !
ದಾನ ಮಾಡುವಂತಹ ವಸ್ತುಗಳು : ‘ಹೊಸಪಾತ್ರೆ, ವಸ್ತ್ರ, ಅನ್ನ, ಎಳ್ಳು, ಎಳ್ಳುಪಾತ್ರೆ, ಬೆಲ್ಲ, ಆಕಳು, ಕುದುರೆ, ಚಿನ್ನ ಅಥವಾ ಭೂಮಿಯನ್ನು ಯಥಾಶಕ್ತಿ ದಾನ ಮಾಡಬೇಕು. ಈ ದಿನ ಮುತ್ತೈದೆಯರು ದಾನ ಮಾಡುತ್ತಾರೆ. ಮುತ್ತೈದೆಯರು ಕೆಲವು ಪದಾರ್ಥಗಳನ್ನು ಕುಮಾರಿಯರಿಂದ ದೋಚುತ್ತಾರೆ (ಅಪಹರಿಸುತ್ತಾರೆ) ಮತ್ತು ಅವರಿಗೆ ಎಳ್ಳುಬೆಲ್ಲ ಕೊಡುತ್ತಾರೆ.’

ಮಕರ ಸಂಕ್ರಾಂತಿಯಂದು ಬಾಗಿನ ನೀಡುವುದು
ಬಾಗಿನ ನೀಡುವುದು
‘ಬಾಗಿನ ನೀಡುವುದೆಂದರೆ’ ಇನ್ನೊಂದು ಜೀವದಲ್ಲಿರುವ ದೇವತ್ವಕ್ಕೆ ತನು, ಮನ ಮತ್ತು ಧನದಿಂದ ಶರಣಾಗುವುದು. ಸಂಕ್ರಾಂತಿಯ ಕಾಲವು ಸಾಧನೆಗೆ ಪೂರಕವಾಗಿರುವುದರಿಂದ ಈ ಕಾಲದಲ್ಲಿ ನೀಡಿದ ಬಾಗಿನದಿಂದ ದೇವತೆಯ ಕೃಪೆಯಾಗಿ ಜೀವಕ್ಕೆ ಇಚ್ಛಿತ ಫಲಪ್ರಾಪ್ತಿಯಾಗುತ್ತದೆ.

ಬಾಗಿನವೆಂದು ಯಾವ ವಸ್ತುಗಳನ್ನು ಕೊಡಬೇಕು ? : ಇತ್ತೀಚೆಗೆ ಸಾಬೂನು ಇಡುವ ಡಬ್ಬಿ, ಸ್ಟೀಲ್ ಪಾತ್ರೆ, ಪ್ಲಾಸ್ಟಿಕ್‌ನ ವಸ್ತುಗಳಂತಹ ವಸ್ತುಗಳನ್ನು ಬಾಗಿನವೆಂದು ಕೊಡುವ ಅಯೋಗ್ಯ ಪದ್ಧತಿಯು ರೂಢಿಯಲ್ಲಿದೆ. ಈ ವಸ್ತುಗಳ ಬದಲಿಗೆ ಸೌಭಾಗ್ಯದ ವಸ್ತುಗಳು, ಊದುಬತ್ತಿ, ಉಟಣೆ, ಧಾರ್ಮಿಕಗ್ರಂಥ, ಪುರಾಣಗ್ರಂಥ, ದೇವತೆಗಳ ಚಿತ್ರ, ಅಧ್ಯಾತ್ಮದ ಬಗೆಗಿನ ಧ್ವನಿಚಿತ್ರಮುದ್ರಿಕೆ ಮುಂತಾದ ಸಾಧನೆಗೆ ಪೂರಕ ಹಾಗೂ ಮಾರ್ಗದರ್ಶಕವಾಗಿರುವ ವಸ್ತುಗಳನ್ನು ಕೊಡಬೇಕು.(

(ವಿದ್ವಾನ್ ಶ್ರೀ ಬೂದೀಸ್ವಾಮಿ ಹಿರೇಮಠ
ಸಂಸ್ಥಾಪಕ ಅಧ್ಯಕ್ಷರು ಶ್ರೀ ದೈವಸಂಸ್ಕೃತಿ ಪ್ರತಿಷ್ಠಾನ ರೀಹೊದಿಗರೆ)

RELATED ARTICLES

LEAVE A REPLY

Please enter your comment!
Please enter your name here

- Advertisment -

ಜಾಹೀರಾತು

spot_img

Most Popular

Recent Comments