Wednesday, August 20, 2025
Homeದೇಶಬಿಮ್ಸ್ ಬಳಿಯ ಮಹಾತ್ಮಗಾಂಧೀಜಿ ಪ್ರತಿಮೆಗೆ ಸಚಿವ ರಹೀಂ ಖಾನ್ ಅವರಿಂದ ಗೌರವ ನಮನ

ಬಿಮ್ಸ್ ಬಳಿಯ ಮಹಾತ್ಮಗಾಂಧೀಜಿ ಪ್ರತಿಮೆಗೆ ಸಚಿವ ರಹೀಂ ಖಾನ್ ಅವರಿಂದ ಗೌರವ ನಮನ

ಬಳ್ಳಾರಿ,ಜ.26:76,ನೇ ಗಣರಾಜ್ಯೋತ್ಸವದ ದಿನದ ಅಂಗವಾಗಿ ಬಳ್ಳಾರಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆವರಣದಲ್ಲಿರುವ ರಾಷ್ಟçಪಿತ ಮಹಾತ್ಮ ಗಾಂಧೀಜಿ ಅವರ ಪ್ರತಿಮೆಗೆ ಪೌರಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಅವರು ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯುಲು, ಪಾಲಿಕೆಯ ಉಪಮೇಯರ್ ಡಿ.ಸುಕುಂ, ಬಳ್ಳಾರಿ ವಲಯ ಪೊಲೀಸ್ ಮಹಾನೀರಿಕ್ಷಕರಾದ ಬಿ.ಎಸ್.ಲೋಕೇಶ್ ಕುಮಾರ್, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್, ಸಹಾಯಕ ಆಯುಕ್ತ ಪ್ರಮೋದ್.ಪಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಮಹಾನಗರ ಪಾಲಿಕೆ ಸದಸ್ಯರು ಹಾಗೂ ಇತರರು ಇದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

ಜಾಹೀರಾತು

spot_img

Most Popular

Recent Comments