ದಾವಣಗೆರೆ:ಕಾರ್ಮಿಕ ವರ್ಗದ ಹಿತವನ್ನು ಕಡೆಗಣಿಸಲಾದ ಬಜೆಟ್ ಇದು. ಅಂಗನವಾಡಿ, ಬಿಸಿಯೂಟ ಮತ್ತು ಆಶಾ ಕಾರ್ಯಕರ್ತೆಯರ ಹೋರಾಟ, ಬೇಡಿಕೆಗೆ ಮನ್ನಣೆ ನೀಡದೇ ಗೌರವಧನದಲ್ಲಿ ಕೇವಲ ಒಂದು ಸಾವಿರ ರೂಪಾಯಿಗಳ ಏರಿಕೆ ಮಾಡಲಾಗಿದೆ. ಇದು ಕಾರ್ಮಿಕವರ್ಗದ ಆಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ ನಮ್ಮ ಹೋರಾಟವನ್ನು ಎಐಟಿಯುಸಿ ಸಂಘಟನೆಯ ನೇತೃತ್ವದಲ್ಲಿ ಮುಂದುವರೆಸುತ್ತೇವೆ. ದಾವಣಗೆರೆಯಲ್ಲಿ ವಿಶ್ವ ಕನ್ನಡ ಸಮ್ಮೇಳನವನ್ನು ನಡೆಸಬೇಕೆಂಬ ಒತ್ತಾಯಕ್ಕೂ ಸರಕಾರವು ಮನ್ನಣೆ ನೀಡಿಲ್ಲ. ಈ ಬಗ್ಗೆಯೂ ಹೋರಾಟ ಮುಂದುವರೆಯಲಿದೆ. ಇನ್ನುಳಿದಂತೆ ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸವನ್ನು ಪ್ರೋತ್ಸಾಹಿಸಲು ವಸತಿ ಶಾಲೆಗಳ ಆರಂಭ, ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆಯಡಿ 5 ಲಕ್ಷ ರೂಪಾಯಿಗಳ ಮಿತಿ ಪೂರ್ಣಗೊಂಡಲ್ಲಿ ಹೃದ್ರೋಗ, ಕ್ಯಾನ್ಸರ್ ಚಿಕಿತ್ಸೆಗೆ ಹೆಚ್ಚುವರಿಯಾಗಿ 5 ಲಕ್ಷ ರೂಪಾಯಿ ನೀಡುವ ಯೋಜನೆ, 2500 ಪತ್ರಕರ್ತರಿಗೆ ಮಾಧ್ಯಮ ಸಂಜೀವಿನಿ ಯೋಜನೆ ಕಲ್ಪಿಸಿರುವುದು ಸ್ವಾಗತಾರ್ಹವಾಗಿದೆ.
ಕಾರ್ಮಿಕ ವರ್ಗಕ್ಕೆ ಸಮಾಧಾನ ತರದ ಬಜೆಟ್:ಕಾರ್ಮಿಕ ಮುಖಂಡ ಕೆ.ರಾಘವೇಂದ್ರ ನಾಯರಿ
RELATED ARTICLES