ಇತ್ತೀಚಿಗೆ ನವದೆಹಲಿಯ ರಿಯಾಲಿಟಿ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸಂಸ್ಥೆಯು ಬೆಂಗಳೂರಿನಲ್ಲಿ ರವೀಂದ್ರ ಕಲಾ ಕ್ಷೇತ್ರದಲ್ಲಿ ವಿವಿಧ ಕ್ಷೇತ್ರದಲ್ಲಿ ವಿಶ್ವ ದಾಖಲೆ ಮಾಡಿದ ಸಾಧಕರುಗಳಿಗೆ ಪ್ರಶಸ್ತಿ ಪ್ರಧಾನ ಸಮಾರಂಭ ದಲ್ಲಿ ಖ್ಯಾತ ಮನೋವೈದ್ಯಕೀಯ ಸಾಮಾಜಿಕ ಕಾರ್ಯಕರ್ತರಾದ ಶ್ರೀಯುತ ಸಂತೋಷ್ ಕುಮಾರ್ ಅವರು ಮನೋವೈದ್ಯಕೀಯ ಕ್ಷೇತ್ರದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದಾವಣಗೆರೆ ಜಿಲ್ಲೆಯಲ್ಲಿ ಕಳೆದ 9 ವರ್ಷಗಳಿಂದಲೂ ಕೂಡ ಸಮುದಾಯದಲ್ಲಿ ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಕಾರ್ಯಕ್ರಮ, ತರಬೇತಿ ಕಾರ್ಯಕ್ರಮ, ಸೇರಿದಂತೆ ಸುಮಾರು ಐದು ಸಾವಿರಕ್ಕೂ ಹೆಚ್ಚು ಮನೋರೋಗಿಗಳಿಗೆ ಚಿಕಿತ್ಸೆ ಕೊಡಿಸುವುದಲ್ಲದೆ ಅವರಿಗೆ ಮನೋವೈದ್ಯಕೀಯ ಶಿಕ್ಷಣ, ಆಪ್ತ ಸಮಾಲೋಚನೆ, ಮನೆ ಬೇಟಿ ಕಾರ್ಯಕ್ರಮ, ಮಾಸಾಶನ, ಬೀದಿ ಬದಿಯ ಮಾನಸಿಕ ಅಸ್ವಸ್ಥ ರನ್ನು ಪುನರ್ವಸತಿ ಕೇಂದ್ರಕ್ಕೆ ಸೇರಿಸುವುದು ಮತ್ತು ಕೋವಿಡ್ ಸಮಯದಲ್ಲಿ 2,000 ಮನೋರೋಗಿಗಳಿಗೆ ಉಚಿತವಾಗಿ ಫುಟ್ ಕಿಟ್ ಗಳ ವಿತರಣೆ ಮಾಡಿರುವುದಲ್ಲದೆ ಮತ್ತು ಕಳೆದ 13 ವರ್ಷಗಳಿಂದಲೂ ಕೂಡ ಸಾಮಾಜಿಕ ಕ್ಷೇತ್ರದಲ್ಲಿ ವಿದ್ಯಾರ್ಥಿಗಳ ಪರ ಹೋರಾಟ, ದಿನ ದಲಿತರಿಗೆ, ಅಂಗವಿಕಲರಿಗೆ, ವಯೋ ವೃದ್ಧರಿಗೆ, ಸಹಾಯ ಹಸ್ತವನ್ನು ಕೂಡ ಇಂದಿಗೂ ತೋರುತ್ತ ಬಂದಿರುತ್ತಾರೆ ಭಾರತೀಯ ಕಲಾ ಸಾಂಸ್ಕೃತಿಕ ಅಕಾಡೆಮಿಯ ಮೂಲಕ ವ್ಯವಸ್ಥಾಪಕ ಅಧ್ಯಕ್ಷರಾಗಿ ಸುಮಾರು 2000ಕ್ಕೂ ಹೆಚ್ಚು ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿಯನ್ನು ನೀಡಿ ಗೌರವಿಸುವುದು,ಹಾಗೂ ಕರ್ನಾಟಕ ರಾಜ್ಯ ಪ್ರಪೋಫೆಶನಲ್ ಸೋಶಿಯಲ್ ವರ್ಕರ್ಸ್ ವೆಲ್ಫೇರ್ ಅಸೋಸಿಯೇಷನ್ ರಿ. ಬೆಂಗಳೂರಿನ ಸಂಸ್ಥಾಪಕ ರಾಜ್ಯಾಧ್ಯಕ್ಷರಾಗಿ ವೃತ್ತಿಪರ ಸಾಮಾಜಿಕ ಕಾರ್ಯಕರ್ತರ ಒಳಿತಿಗಾಗಿ ರಾಜ್ಯಾದ್ಯಂತ ವೃತ್ತಿಪರ ಸಾಮಾಜಿಕ ಕಾರ್ಯಕರ್ತರ ಹಕ್ಕುಗಳ ಬಗ್ಗೆ ಹೋರಾಟವನ್ನು ಮಾಡುತ್ತಿದ್ದಾರೆ.ಜೊತೆಗೆ ದಾವಣಗೆರೆ ಜಿಲ್ಲಾಡಳಿತದ ವತಿಯಿಂದ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಸೇರಿದಂತೆ 15 ರಾಷ್ಟ್ರ ಪ್ರಶಸ್ತಿ 17 ರಾಜ್ಯ ಪ್ರಶಸ್ತಿಯನ್ನು ಅನೇಕ ಸಂಘ ಸಂಸ್ಥೆಗಳು ಇವರ ಸಾಮಾಜಿಕ ಸೇವೆಯನ್ನು ಪರಿಗಣಿಸಿ ಗೌರವಿಸಲಾಗಿದೆ.ಎಲ್ಲಾ ಸೇವೆಯನ್ನು ಪರಿಗಣಿಸಿ ಕರ್ನಾಟಕದ ಸಾಧಕರಾದ ಖ್ಯಾತ ಮನೋವೈದ್ಯಕೀಯ ಸಾಮಾಜಿಕ ಕಾರ್ಯಕರ್ತರಾದ ಸಂತೋಷ್ ಕುಮಾರ್ ಎಂ ರವರಿಗೆ ನವದೆಹಲಿಯ ರಿಯಾಲಿಟಿ ಬುಕ್ ಆಫ್ ವರ್ಡ್ ರೆಕಾರ್ಡ್ 2025 ಸಾಲಿನಲ್ಲಿ ದಾವಣಗೆರೆ ಜಿಲ್ಲೆಯ ಶ್ರೀ ಸಂತೋಷ್ ಕುಮಾರ್ ಎಂ ರವರು ಮನೋವೈದ್ಯಕೀಯ ಕ್ಷೇತ್ರದಲ್ಲಿ ವಿಶ್ವ ದಾಖಲೆ ಮಾಡುವುದರ ಮೂಲಕ ಕರ್ನಾಟಕಕ್ಕೆ ಕೀರ್ತಿ ತಂದಿದ್ದಾರೆ ಈ ಪ್ರಶಸ್ತಿಯನ್ನು ವಿಶ್ರಾಂತ ನಿವೃತ್ತ ನ್ಯಾಯಾಮೂರ್ತಿ ಜಸ್ಟಿಸ್ ಸಂತೋಷ್ ಹೆಗಡೆ ಅವರ ಅಮೃತ ಹಸ್ತದಿಂದ ಪ್ರಧಾನ ಮಾಡಲಾಯಿತು ಮತ್ತು ಈ ಸಂದರ್ಭದಲ್ಲಿ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ರಿಯಾಲಿಟಿ ಬುಕ್ಸ್ ಆಫ್ ವರ್ಲ್ಡ್ ರೆಕಾರ್ಡ್ ಸಂಸ್ಥೆಯ ಅಧ್ಯಕ್ಷರಾದ ಡಾ. ಎ. ಪಿ ಶ್ರೀನಾಥ್ ಮತ್ತು ಚಲನಚಿತ್ರ ನಟರು, ನಿರ್ದೇಶಕ ಮತ್ತು ಆತ್ಮ ಶ್ರೀ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಗುಣವಂತ ಮಂಜುನಾಥ್ ಇತರರು ಹಾಜರಿದ್ದರು