ದಾವಣಗೆರೆ ಜಿಲ್ಲಾ ಪೊಲೀಸ್ ಹಾಗೂ ಲೈಪ್ ಲೈನ್ ರಕ್ತ ಕೇಂದ್ರ ಹಾಗೂ ಕರ್ನಾಟಕ ಹಿಮೊಫಿಲಿಯಾ ಸೊಸೈಟಿ ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ಇಂದು ಜಿಲ್ಲಾ ಪೊಲೀಸ್ ಸಮುದಾಯ ಭವನ, ಡಿಎಆರ್ ಆವರಣದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಸ್ವಯಂ ಪ್ರೇರಿತ ರಕ್ತದಾನ ಶಿಬಿರಕ್ಕೆ ಡಾ. ಬಿ ಆರ್ ರವಿಕಾಂತೇಗೌಡ ಐ ಪಿ ಎಸ್ , ಮಾನ್ಯ ಐಜಿಪಿ ಪೂರ್ವ ವಲಯ ದಾವಣಗೆರೆ ರವರು ಚಾಲನೆ ನೀಡಿದದರು. ಈ ಸಂಧರ್ಭದಲ್ಲಿ ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಉಮಾ ಪ್ರಶಾಂತ್ ಐಪಿಎಸ್ ರವರು ಹಾಗೂ ಶ್ರೀ ಸ್ಯಾಮ್ ವರ್ಗೀಸ್ ಐಪಿಎಸ್ ರವರು ಸ್ವಯಂ ಪ್ರೇರಿತ ರಕ್ತದಾನ ಮಾಡುವ ಮೂಲಕ ಪೊಲೀಸ್ ಅಧೀಕಾರಿ ಸಿಬ್ಬಂದಿಗಳಿಗೆ ಸ್ವಯಂ ಪ್ರೇರಿತ ರಕ್ತ ದಾನ ಮಾಡಲು ಪ್ರೇರಣೆಯಾದರು.
ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ ನೂರಕ್ಕೂ ಹೆಚ್ಚು ಜಿಲ್ಲೆಯ ಪೊಲೀಸ್ ಅಧಿಕಾರಿ ಸಿಬ್ಬಂದಿಗಳು ಹಾಗೂ ಪೊಲೀಸ್ ಸ್ವಯಂ ಸೇವಕರು, ಜಿಲ್ಲಾ ಪೊಲೀಸ್ ಕಚೇರಿಯ ಸಿಬ್ಬಂದಿಗಳು ಭಾಗವಹಿಸಿ ಸ್ವಯಂ ಪ್ರೇರಿತ ರಕ್ತದಾನ ಮಾಡಿದರು.