ದಾವಣಗೆರೆ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ದಾವಣಗೆರೆ ಜಿಲ್ಲಾ ಸಮಿತಿಯ 38ನೇ ರಾಜ್ಯ ಸಮ್ಮೇಳನದ ಯಶಸ್ಸಿನ ಬೆನ್ನಲ್ಲೇ, ಸಂಘದ ಕಚೇರಿಗಾಗಿ ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದಿಂದ ರಿಯಾಯಿತಿ ದರದಲ್ಲಿ ನಿವೇಶನ ಮಂಜೂರಾತಿಗೆ ಮನವಿ ಸಲ್ಲಿಸಲಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ ಸಹಕಾರದಿಂದ ನಿವೇಶನ ಮಂಜೂರಾಗಿ, ನೋಂದಣಿಯೂ ಪೂರ್ಣಗೊಂಡಿದೆ.ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ ಅವರ ಸಮ್ಮುಖದಲ್ಲಿ, ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಸಂಘದ ಜಿಲ್ಲಾ ಸಮಿತಿಗೆ ನಿವೇಶನದ ಸ್ವಾಧೀನ ಪತ್ರವನ್ನು ವಿತರಿಸಿದರು. ಈ ಸಂದರ್ಭದಲ್ಲಿ ಪ್ರಾಧಿಕಾರದ ಆಯುಕ್ತರು ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ಸಂಘದ ಜಿಲ್ಲಾ ಅಧ್ಯಕ್ಷ ಇ.ಎಮ್. ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಎ. ಫಕೃದ್ದೀನ್, ಕೋಶಾಧ್ಯಕ್ಷ ಎನ್.ವಿ. ಬದ್ರಿನಾಥ್, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಕೆ. ಚಂದ್ರಣ್ಣ, ರಾಷ್ಟ್ರೀಯ ಮಂಡಳಿ ಸದಸ್ಯ ಎಸ್.ಕೆ. ಒಡೆಯರ್, ಜಿಲ್ಲಾ ಉಪಾಧ್ಯಕ್ಷ ಆರ್.ಎಸ್. ತಿಪ್ಪೇಸ್ವಾಮಿ, ನಿರ್ದೇಶಕರಾದ ಕೃಷ್ಣೋಜಿರಾವ್, ಸಿ. ವೇದಮೂರ್ತಿ, ಶಿವಕುಮಾರ್ ಮತ್ತಿತರರು ಭಾಗವಹಿಸಿ, ಸಚಿವರು, ಪ್ರಾಧಿಕಾರದ ಅಧ್ಯಕ್ಷರು ಮತ್ತು ಆಯುಕ್ತರಿಗೆ ಅಭಿನಂದನೆ ಸಲ್ಲಿಸಿದರು.ಈ ಕಾರ್ಯಕ್ರಮವು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ದಾವಣಗೆರೆ ಜಿಲ್ಲಾ ಸಮಿತಿಗೆ ಮಹತ್ವದ ಸಾಧನೆಯಾಗಿದೆ.