ವಿಜಯಪುರ:ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ವಿಜಯಪುರ ಜಿಲ್ಲಾ ನೂತನ ಪದಾಧಿಕಾರಿಗಳ ಪದ ಗ್ರಹಣ ಸಮಾರಂಭವು ನಗರದ ಬೆಂಗಳೂರು ರೆಸ್ಟೋರೆಂಟ್ ಹಾಲ್ ನಲ್ಲಿ ನಡೆಯಿತು.
ಈ ಸಮಾರಂಭದಲ್ಲಿ ವಿಜಯಪುರ ಜಿಲ್ಲೆಯ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಕಾರ್ಯಕರ್ತರ ಸಮಕ್ಷಮದಲ್ಲಿ ರಾಜ್ಯ ಸಮಿತಿ ಅಧ್ಯಕ್ಷರಾದ ಶ್ರೀ ಪಿ.ಕೃಷ್ಣೆಗೌಡ.ಇವರು ನೂತನ ಜಿಲ್ಲಾ ಅಧ್ಯಕ್ಷರನ್ನಾಗಿ ಈ ಹಿಂದೆ ಜಿಲ್ಲಾ ಪ್ರಧಾನಕಾರ್ಯದರ್ಶಿಯಾಗಿ ಸೇವೆಸಲ್ಲಿದ ಶ್ರೀ ಲಿಂಗರಾಜ್ ಬಿದರಕುಂದಿ ಯವರನ್ನು ಆಯ್ಕೆಮಾಡಿ ಘೋಷಿಸಿದರು.ಇವರೊಂದಿಗೆ ರಾಜ್ಯಸಮಿತಿಯ ಸತೀಶ್ ಎಮ್.ಹಾಗೂ ಬೆಂಗಳೂರು ನಗರ ಘಟಕದ ಅಧ್ಯಕ್ಷರು,ಉಪಾಧ್ಯಕ್ಷರು ಸಾತ್ ನೀಡಿದರು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಉಪಾಧ್ಯಕ್ಷ ಪ್ರಭು ಮಂಕಣಿ,ಬಾಪುಗಾಡ ಪಾಟೀಲ್, ಪ್ರಧಾನ ಕಾರ್ಯದರ್ಶಿ ಬಾವಾಸಾಬ್ ಹತ್ತರಕಾಳ್,ಸಂಕೇಶ್ ಪಟ್ನದ್, ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷೆ ಜಯಶ್ರೀ ಸವಕಾರ್ ಮತ್ತು ಜಿಲ್ಲೆಯ ಎಲ್ಲಾ ಪದಾಧಿಕಾರಿಗಳು ಮತ್ತು ಎಲ್ಲ ತಾಲೂಕಿನ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಜಿಲ್ಲಾ ನೂತನ ಅಧ್ಯಕ್ಷರಾಗಿ ಲಿಂಗರಾಜ್ ಬಿದರಕದಿ ಪದ ಗ್ರಹಣ.
RELATED ARTICLES