Tuesday, March 24, 2026
Homeರಾಜಕೀಯಕಾಂಗ್ರೆಸ್ ಅಭ್ಯರ್ಥಿಯನ್ನ ಮತ್ತು ಉಸ್ತುವಾರಿ ಸಚಿವರನ್ನ ನಿಂದಿಸಿದ ಬಿಜೆಪಿಗರ ವಿರುದ್ಧ ದೂರು

ಕಾಂಗ್ರೆಸ್ ಅಭ್ಯರ್ಥಿಯನ್ನ ಮತ್ತು ಉಸ್ತುವಾರಿ ಸಚಿವರನ್ನ ನಿಂದಿಸಿದ ಬಿಜೆಪಿಗರ ವಿರುದ್ಧ ದೂರು


ದಾವಣಗೆರೆ:ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಜಿಲ್ಲಾ ಸಚಿವರನ್ನು ನಿಂದಿಸಿರುವ ಬಿಜೆಪಿ ಸಾಮಾಜಿಕ ಜಾಲತಾಣ ಮತ್ತು ಮುಖಂಡರು ಹಾಗೂ ಪದಾಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಿ ಚುನಾವಣಾಧಿಕಾರಿಗಳಿಗೆ ದೂರು ಕಾಂಗ್ರೆಸ್ ಕಾರ್ಯಕರ್ತ ಶ್ರೀ ಕಾಂತ್ ಬಗರೆ ದೂರು ನೀಡಿದ್ದಾರೆ. ಬಿ.ಜೆ.ಪಿ. ಪಕ್ಷದ ಸಾಮಾಜಿಕ ಜಾಲತಾಣ ಮತ್ತು ಮುಖಂಡರು, ಪದಾಧಿಕಾರಿಗಳು ಸಾಮಾಜಿಕ ಜಾಲತಾಣಗಳಲ್ಲಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಶಾಮನೂರು ಮಲ್ಲಿಕಾರ್ಜುನ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್ ಅವರ ವಿರುದ್ಧ ಅಪಪ್ರಚಾರ ಮಾಡಿ, ಅವಹೇಳನಕಾರಿಯಾಗಿ ಸುಳ್ಳು ಸುದ್ದಿಯನ್ನು ಹರಡಿ, ನಿಂದನೆ ಮಾಡಿರುವ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಆಗ್ರಹಿಸಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳಿಗೆ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಸಮಿತಿಯ ಜಿಲ್ಲಾ ಅಧ್ಯಕ್ಷರಾದ ಶ್ರೀಕಾಂತ ಬಗರೆ ಅವರು ದೂರು ನೀಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

ಜಾಹೀರಾತು

spot_img

Most Popular

Recent Comments