ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ದಿನಾಂಕ 30.03.2026 ರ ಸೋಮವಾರ ಬೆಳಿಗ್ಗೆ 11 ಘಂಟೆಗೆ ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿ ಭಾರತ ಸರಕಾರದಿಂದ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಖ್ಯಾತ ಹಿಮೋಫಿಲಿಯ ತಜ್ಞ ಡಾ.ಸುರೇಶ್ ಹನಗವಾಡಿ,

ದಾವಣಗೆರೆ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಗೌರವಕ್ಕೆ ಪಾತ್ರರಾದ ಶಿಕ್ಷಣ ತಜ್ಞ ಪ್ರೊ.ಸಿ.ಹೆಚ್.ಮುರಿಗೇಂದ್ರಪ್ಪ

ಹಾಗೂ ಗ್ಲೋಬಲ್ ಅಚೀವರ್ಸ್ ಅವಾರ್ಡ್‌ಗೆ ಭಾಜನರಾದ ಹಿರಿಯ ಕನ್ನಡ ಪರಿಚಾರಕ ಬಿ.ವಾಮದೇವಪ್ಪ ತೊಗಲೇರಿ

ಅವರಿಗೆ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.
ಮಾರ್ಚ್ 30 ರ ಸೋಮವಾರ ನಡೆಯಲಿರುವ ಅಭಿನಂದನಾ ಸಮಾರಂಭದ ದಿವ್ಯ ಸಾನಿಧ್ಯವನ್ನು ದಾವಣಗೆರೆಯ ಶ್ರೀ ವಿರಕ್ತ ಮಠದ ಚರಮೂರ್ತಿ ಶ ಡಾ.ಬಸವಪ್ರಭು ಸ್ವಾಮೀಜಿ ವಹಿಸುವರು. ಸಮಾರಂಭದ ಉದ್ಘಾಟನೆಯನ್ನು ದಾವಣಗೆರೆ ವಿಶ್ವವಿದ್ಯಾಲಯದ ಉಪ ಕುಲಸಚಿವರಾದ ಪ್ರೊ.ಬಿ.ಡಿ.ಕುಂಬಾರ ಅವರು ನೆರವೇರಿಸುವರು. ಸಾಧಕರ ಕುರಿತು ಅಭಿನಂದನಾ ನುಡಿಗಳನ್ನು ನಾಡಿನ ಹೆಸರಾಂತ ಸಾಹಿತಿ ಎನ್.ಟಿ.ಎರ್ರಿಸ್ವಾಮಿಯವರು ನುಡಿಯುವರು. ಸಮಾರಂಭದಲ್ಲಿ ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿಗಳಾದ ಬಿ.ದಿಳ್ಯಪ್ಪ, ರೇವಣಸಿದ್ದಪ್ಪ ಅಂಗಡಿ, ಗೌರವ ಕೋಶಾಧ್ಯಕ್ಷ ಕೆ.ರಾಘವೇಂದ್ರ ನಾಯರಿ, ತಾಲೂಕು ಕಸಾಪ ಅಧ್ಯಕ್ಷೆ ಸುಮತಿ ಜಯಪ್ಪ ಉಪಸ್ಥಿತರಿರುವರು. ಕದಳಿ ಮಹಿಳಾ ವೇದಿಕೆ ಮತ್ತು ವಿನೂತನ ಮಹಿಳಾ ಸಮಾಜದ ಸದಸ್ಯೆಯರು ನಾಡ ಗೀತೆಯನ್ನು ಪ್ರಸ್ತುತಪಡಿಸಲಿದ್ದಾರೆ. ಬೆಳಕು ಜಾನಪದ ಕಲಾ ತಂಡದ ಸಿ.ಕೆ.ರುದ್ರಾಕ್ಷಿ ಬಾಯಿ ಮತ್ತು ತಂಡದಿಂದ ಸಂಗೀತ ಕಾರ್ಯಕ್ರಮ ಇರಲಿದೆ.
ಸದರಿ ಸಮಾರಂಭಕ್ಕೆ ಕನ್ನಡಾಭಿಮಾನಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕಾಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪ್ರಕಟಣೆಯಲ್ಲಿ ತಿಳಿಸಿದೆ.

