ವಿಜಯಪುರ:ಮಳೆಗಾಲದ ಮುಂಜಾಗ್ರತಾ ಕ್ರಮವಾಗಿ ವಿಜಯಪುರ ಜಿಲ್ಲೆಯ ರಸ್ತೆ ಹಾಗೂ ಒಳಚರಂಡಿ ವ್ಯವಸ್ಥೆಯನ್ನು ತುರ್ತಾಗಿ ದುರಸ್ತಿ ಮಾಡುವ ಕುರಿತು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣವು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿತು.
ಈಗ ಬೇಸಿಗೆ ಕಾಲ ಮುಗಿದು ಮಳೆಗಾಲ ಆರಂಭವಾಗುತ್ತಿರುವ ಹಿನ್ನೆಲೆ, ವಿಜಯಪುರ ಜಿಲ್ಲೆಯ ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಪ್ರತಿವರ್ಷವೂ ರಸ್ತೆಗಳಲ್ಲಿ ನೀರು ನಿಲ್ಲುವುದು, ಒಳಚರಂಡಿ ನೀರು ಮೇಲಕ್ಕೆ ಹರಿದು ದುರ್ವಾಸನೆ ಉಂಟಾಗುವುದು ಹಾಗೂ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು ನಿರ್ಮಾಣವಾಗುವುದು ಸಾಮಾನ್ಯ ಸಮಸ್ಯೆಯಾಗುತ್ತಿದೆ. ಇದರಿಂದ ಸಾರ್ವಜನಿಕರಿಗೆ, ವಾಹನ ಸವಾರರಿಗೆ ಹಾಗೂ ಪಾದಚಾರಿಗಳಿಗೆ ತೀವ್ರ ತೊಂದರೆ ಉಂಟಾಗುತ್ತಿದೆ.
ಹಲವಾರು ಕಡೆಗಳಲ್ಲಿ ಒಳಚರಂಡಿ ವ್ಯವಸ್ಥೆ ಸಮರ್ಪಕವಾಗಿಲ್ಲದೆ ಮಳೆ ನೀರು ಸರಿಯಾಗಿ ಹರಿಯದೆ ರಸ್ತೆ ಮೇಲೆಯೇ ನಿಂತು ಸಂಚಾರಕ್ಕೆ ಅಡಚಣೆ ಉಂಟುಮಾಡುತ್ತಿದೆ. ಕೆಲವು ಪ್ರದೇಶಗಳಲ್ಲಿ ಡ್ರೈನೇಜ್ ಪೈಪ್ ಗಳು ಹಾಗೂ ಚರಂಡಿಗಳು ಹಾನಿಗೊಳಗಾಗಿರುವುದರಿಂದ ಮಳೆಗಾಲದಲ್ಲಿ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದೆ. ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಯೂ ಹೆಚ್ಚಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಆದುದರಿಂದ, ಮಳೆಗಾಲದ ಮುಂಜಾಗ್ರತಾ ಕ್ರಮವಾಗಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ವಿಜಯಪುರ ಜಿಲ್ಲೆ ವತಿಯಿಂದ ಈ ಮೂಲಕ ಹಲವು ಬೇಡಿಕೆಗಳ ವಿನಂತಿಸಿಕೊಂಡಿದೆ.
1. ವಿಜಯಪುರ ಜಿಲ್ಲೆಯ ಪ್ರಮುಖ ರಸ್ತೆಗಳಲ್ಲಿ ಇರುವ ಗುಂಡಿಗಳನ್ನು ತಕ್ಷಣ ಮುಚ್ಚುವ ಕ್ರಮ ಕೈಗೊಳ್ಳಬೇಕು.
2. ಅತಂತ್ರ ಹಾಗೂ ಹಾಳಾಗಿರುವ ಒಳಚರಂಡಿ ಮತ್ತು ಡ್ರೈನೇಜ್ ವ್ಯವಸ್ಥೆಯನ್ನು ಪರಿಶೀಲಿಸಿ ತುರ್ತಾಗಿ ದುರಸ್ತಿ ಮಾಡಬೇಕು.
3. ಮಳೆ ನೀರು ಸರಾಗವಾಗಿ ಹರಿಯುವಂತೆ ಚರಂಡಿಗಳ ಸ್ವಚ್ಛತೆ ಮತ್ತು ನಿರ್ವಹಣೆಯನ್ನು ನಿಯಮಿತವಾಗಿ ಕೈಗೊಳ್ಳಬೇಕು.
4. ಸಾರ್ವಜನಿಕರಿಗೆ ದುರ್ವಾಸನೆ, ನೀರು ನಿಲ್ಲುವಿಕೆ ಹಾಗೂ ಸಂಚಾರ ತೊಂದರೆ ಆಗದಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಬೇಕು.
5. ಮಳೆಗಾಲದಲ್ಲಿ ಜನರಿಗೆ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ಮುಂಚಿತವಾಗಿಯೇ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು.
6. ವಾರ್ಡ ನಂ.02 ಮತ್ತು 12 & 16 ಹಾಗೂ 17, 19, ಮತ್ತು 34, ಇನ್ನು ಹಲವಾರು ವಾರ್ಡಗಳಲ್ಲಿ ರಸ್ತೆ ಮತ್ತು ಡ್ರೈನೇಜ್ ಕಾಮಗಾರಿ ಪೂರ್ಣಗೊಳಿಸಬೇಕಾಗಿ ವಿನಂತಿಸಿದೆ.
ಸಾರ್ವಜನಿಕ ಹಿತದೃಷ್ಟಿಯಿಂದ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ಕ್ರಮ ಕೈಗೊಳ್ಳುವಂತೆ ವಿನಮ್ರವಾಗಿ ಕೋರುತ್ತೇವೆ.ಎಂದು ಜಿಲ್ಲಾ ಅಧ್ಯಕ್ಷ ಲಿಂಗರಾಜ್ ಬಿದರಕುಂದಿ, ಪ್ರಧಾನ ಕಾರ್ಯದರ್ಶಿ ಬಾವಾಸಾಬ್ ಹತ್ತರಕಾಳ್,ಮತ್ತು ಇತರ ಪದಾಧಿಕಾರಿಗಳು ಭಾಗವಹಿಸಿದ್ದರು.

