*ದಾವಣಗೆರೆಯ ಶಾಮನೂರಿನಲ್ಲಿರುವ ಪ್ರತಿಷ್ಠಿತ ಶಾಲೆಯಾದ ಜೈನ್ ವಿದ್ಯಾಲಯ ಸಿಬಿಎಸ್ಇ ಶಾಲೆಯಲ್ಲಿ ಇಂದು ಶಾಲಾ ಆವರಣದಲ್ಲಿ ವಿಶ್ವ ಹಾಲು ದಿನವನ್ನು ಅತ್ಯಂತ ಉತ್ಸಾಹ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಈ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳಿಗೆ ಹಾಲಿನ ಮಹತ್ವ, ಅದರ ಪೌಷ್ಟಿಕಾಂಶಗಳು ಹಾಗೂ ಆರೋಗ್ಯಕರ ಬೆಳವಣಿಗೆಯಲ್ಲಿ ಹಾಲಿನ ಪಾತ್ರದ ಬಗ್ಗೆ ತಿಳಿಸಲಾಯಿತು. ಶಿಕ್ಷಕರು ಮಕ್ಕಳಿಗೆ ಪ್ರತಿದಿನ ಹಾಲು ಸೇವಿಸುವುದರಿಂದ ದೇಹದ ಬೆಳವಣಿಗೆ, ಎಲುಬುಗಳ ಬಲವರ್ಧನೆ ಮತ್ತು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಹಾಯವಾಗುತ್ತದೆ ಎಂಬುದನ್ನು ತಿಳಿಸಿದರು.
ಕಾರ್ಯಕ್ರಮದ ಸಂದರ್ಭದಲ್ಲಿ ಆರೋಗ್ಯಕರ ಆಹಾರ ಪದ್ಧತಿಗಳ ಕುರಿತು ಜಾಗೃತಿ ಮೂಡಿಸಲಾಯಿತು. ಮಕ್ಕಳು ಉತ್ಸಾಹದಿಂದ ಭಾಗವಹಿಸಿ, ಹಾಲಿನ ಮಹತ್ವವನ್ನು ಅರಿತುಕೊಂಡರು. ಈ ಆಚರಣೆ ವಿದ್ಯಾರ್ಥಿಗಳಿಗೆ ಶಿಕ್ಷಣಾತ್ಮಕವಾಗಿಯೂ, ಮನರಂಜನಾತ್ಮಕವಾಗಿಯೂ ಹಾಗೂ ನೆನಪಿನಲ್ಲಿರುವಂತದ್ದಾಗಿಯೂ ಪರಿಣಮಿಸಿತು. ಶಾಲೆಯ ಮುಖ್ಯೋಪಾಧ್ಯಾಯರು, ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಸಹಕಾರದಿಂದ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.

