Sunday, July 19, 2026
Homeಸಾರ್ವಜನಿಕ ಧ್ವನಿಉದ್ಯೋಗ ಖಾತ್ರಿ ಕಾರ್ಮಿಕರಿಗೆ ಬಾಕಿ ಉಳಿಸಿಕೊಂಡಿರುವ ಕೂಲಿ ಪಾವತಿಸುವಂತೆ ಲೋಕಸಭಾ ಸದಸ್ಯರಿಗೆ ಮನವಿ.

ಉದ್ಯೋಗ ಖಾತ್ರಿ ಕಾರ್ಮಿಕರಿಗೆ ಬಾಕಿ ಉಳಿಸಿಕೊಂಡಿರುವ ಕೂಲಿ ಪಾವತಿಸುವಂತೆ ಲೋಕಸಭಾ ಸದಸ್ಯರಿಗೆ ಮನವಿ.

ದಾವಣಗೆರೆ – ವಿವಿಧ ಗ್ರಾಮ ಪಂಚಾಯಿತಿಗಳು ಉದ್ಯೋಗ ಖಾತರಿ ಕಾರ್ಮಿಕರಿಗೆ ಬಾಕಿ ಉಳಿಸಿಕೊಂಡಿರುವ ಕೂಲಿ ಹಣವನ್ನು ಕೂಡಲೇ ಬಿಡುಗಡೆ ಮಾಡುವಂತೆ ಒತ್ತಾಯಿಸಿ ದಾವಣಗೆರೆ ಸಂಸತ್ ಸದಸ್ಯರಾದ ಶ್ರೀಮತಿ ಪ್ರಭಾ ಮಲ್ಲಿಕಾರ್ಜುನ್ ರವರಿಗೆ ಎಐಟಿಯುಸಿ ಸಂಯೋಜಿತ ದಾವಣಗೆರೆ ಜಿಲ್ಲಾ ಉದ್ಯೋಗ ಖಾತರಿ ಕಾರ್ಮಿಕರ ಸಂಘದ ವತಿಯಿಂದ ಮನವಿ ಸಲ್ಲಿಸಲಾಯಿತು.
ತಾಲೂಕಿನ ದಿಂಡದಹಳ್ಳಿ ಗ್ರಾಮಕ್ಕೆ ಕಾರ್ಯಕ್ರಮ ಒಂದರಲ್ಲಿ ಭಾಗವಹಿಸಲು ಆಗಮಿಸಿದ್ದ ಸಂಸತ್ ಸದಸ್ಯರಿಗೆ ಮನವಿ ಸಲ್ಲಿಸಿ, ಉದ್ಯೋಗ ಖಾತರಿ ಕಾರ್ಮಿಕರಿಗೆ ಕೆಲಸ ಕೊಡಬೇಕು, ಕೆಲಸ ಕೊಡದಿದ್ದರೆ ನಿರುದ್ಯೋಗ ಭತ್ಯೆ ಕೊಡಬೇಕು, ಕೆಲಸದ ಸ್ಥಳದಲ್ಲಿ ಕಾರ್ಮಿಕರಿಗೆ ನಿಯಮಾನುಸಾರ ವಿವಿಧ ಸವಲತ್ತುಗಳನ್ನು ಒದಗಿಸಬೇಕು ಮತ್ತು ಜಿಲ್ಲೆಯಾದ್ಯಂತ ಉದ್ಯೋಗ ಖಾತರಿಗೆ ಸಂಬಂಧಿಸಿದ ಕೂಸಿನ ಮನೆಗಳಲ್ಲಿ ಕೆಲಸ ಮಾಡುತ್ತಿರುವ ಕೇರ್ ಟೇಕರ್ ಗಳಿಗೆ ಹಲವು ತಿಂಗಳುಗಳಿಂದ ಬಾಕಿ ಉಳಿಸಿಕೊಂಡಿರುವ ಕೂಲಿ ಹಣವನ್ನು ಬಿಡುಗಡೆ ಮಾಡುವಂತೆ ಸಂಸತ್ ಸದಸ್ಯರು ಸಂಬಂಧಿಸಿದವರಿಗೆ ಆದೇಶ ಮಾಡಬೇಕೆಂದು ಸಂಘಟಕರು ಒತ್ತಾಯಿಸಿದರು.
ಮನವಿ ಸಲ್ಲಿಸಿದ ಸಂದರ್ಭದಲ್ಲಿ ಜಿಲ್ಲಾ ಉದ್ಯೋಗ ಖಾತರಿ ಕಾರ್ಮಿಕರ ಸಂಘದ ಪ್ರಧಾನ ಕಾರ್ಯದರ್ಶಿ ಕಾಂ ನರೇಗಾ ರಂಗನಾಥ್ ಸೇರಿದಂತೆ ಇತರರು ಭಾಗವಹಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

ಜಾಹೀರಾತು

spot_img

Most Popular

Recent Comments