ದಾವಣಗೆರೆ:ಮಾ.ಸ.ಬ ಕಲಾ ಮತ್ತು ಕಾಲೇಜಿನಲ್ಲಿ ಹಳೆಯ ವಿದ್ಯಾರ್ಥಿಗಳ ಸಂಘದ ಸಹಯೋಗದಲ್ಲಿ ಬಿ.ಎ ವಿದ್ಯಾರ್ಥಿಗಳಿಗಾಗಿ ಕಂಪ್ಯೂಟರ್ ತರಬೇತಿ ಕಾರ್ಯಗಾರವನ್ನು ಆಯೋಜಿಸಲಾಗಿತ್ತು. ថ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ದಾವಣಗೆರೆ مره ಲಿಂಗರಾಜುರವರು ತರಬೇತುದಾರರಾದ ಕಂಪ್ಯೂಟರ್ನ ಕಾರ್ಯಕ್ರಮವನ್ನು ಉದ್ದೇಶಿಸಿ ಕಂಪ್ಯೂಟರ ಬಳಕೆಯ ಮೂಲಭೂತ ಜ್ಞಾನ, ಡಿಜಿಟಲ್ ತಂತ್ರಜ್ಞಾನ, ಆನ್ಲೈನ ಸಂಪನ್ಮೂಲಗಳ ಪರಿಣಾಮಕಾರಿ ಬಳಕೆ ಹಾಗೂ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಮತ್ತು ವೃತ್ತಿಪರ ಬದುಕಿನಲ್ಲಿ ಕಂಪ್ಯೂಟರ್ ಕೌಶಲ್ಯಗಳನ್ನು ಹೇಗೆ ಬಳಸಿಕೊಳ್ಳಬೇಕು ಎಂದು ಪ್ರಾಯೋಗಿಕವಾಗಿ ಮಾಹಿತಿ ನೀಡಿದರು. ಕಾರ್ಯಕ್ರಮವನ್ನು ಉದ್ಘಾಟಿಸಿದ ಇಂಧೂಧರ ನಿಶಾನಿಮಠ ರವರು ವಿದ್ಯಾರ್ಥಿಗಳಲ್ಲಿ ಕಂಪ್ಯೂಟರ ಬಳಕೆಯ ಕುರಿತು ಅರಿವು ಮೂಡಿಸುವುದರ ಜೊತೆಗೆ ಡಿಜಿಟಲ್ ಕೌಶಲ್ಯಗಳನ್ನು ಕಲಿಯುವುದು ಈ ದಿನಮಾನಗಳಲ್ಲಿ ಅವಶ್ಯಕ. ಮತೋರ್ವ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಬಸವರಾಜು ಅವರು ಮಾತನಾಡುತ್ತಾ ಇಂದಿನ ಸ್ವರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಪಠ್ಯಪುಸ್ತಕ ಜ್ಞಾನಕ್ಕೆ ಸಿಮೀತವಾಗದೆ ಪ್ರಸ್ತುತ ತಂತ್ರಜ್ಞಾನವನ್ನು ಕಲಿಕೆಯ ಸಾಧನವಾಗಿ ಬಳಸಿಕೊಳ್ಳಬೇಕು. ಇಂದಿನ ಎಲ್ಲಾ ಉದ್ಯೋಗ ಕ್ಷೇತ್ರದಲ್ಲಿ ಕಂಪ್ಯೂಟರ್ ಕೌಶಲ್ಯಗಳಿಗೆ ಮಹತ್ವವಿದೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಟಿ.ಆರ್ ರಂಗಸ್ವಾಮಿರವರು ವಿದ್ಯಾರ್ಥಿಗಳನ್ನು ಕುರಿತು ಮಾತಾನಾಡುತ್ತಾ ಪದವಿ ಶಿಕ್ಷಣದ ಜೊತೆಗೆ ಕಂಪ್ಯೂಟರ್ ಜ್ಞಾನ, ಇಂಟರ್ ನೆಟ್ ಬಳಕೆ, ಡಿಜಿಟಲ್ ಸಂವಹನ, ಡೆಟಾ ನಿರ್ವಹಣೆ ಮತ್ತು ಆನ್ಲೈನ್ ಅರ್ಜಿ ಪ್ರಕ್ರಿಯೆಯ ಕೌಶಲ್ಯಗಳನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾರ್ಯಕ್ರಮದಲ್ಲಿ ಹಳೆಯ ವಿದ್ಯಾರ್ಥಿ ಸಂಘದ ಸಂಯೋಜಕರಾದ ಡಾ.ಪ್ರವೀಣ್ ಕುಮಾರ್.ಓ ಸ್ವಾಗತಿಸಿದರು. ಡಾ.ರಾಘವೇಂದ್ರ ವಂದಿಸಿದರು. ನಯನ ಕಾರ್ಯಕ್ರಮವನ್ನು ನಿರೂಪಿಸಿದರು. ಕಾರ್ಯಕ್ರಮದಲ್ಲಿ ಸುಜಾತ್.ಎಂ.ಹೆಚ್. ಸೂರ್ಯಪ್ರಸಾದ್, ದನಂಜಯ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

