ದಾವಣಗೆರೆ: ನಗರದ ಜೈನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಇಂಜಿನಿಯರಿAಗ್ ವಿಭಾಗದ ವತಿಯಿಂದ ಭಾರತ ರತ್ನ ಸರ್ ಎಂ. ವಿಶ್ವೇಶ್ವರಯ್ಯ ಅವರ ಜನ್ಮದಿನದ ಅಂಗವಾಗಿ ದಿನಾಂಕ ೧೬/೦೯/೨೦೨೬ ರಂದು ಇಂಜಿನಿಯರ್ಸ್ ಡೇ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಡಾ. ನಾಗನಗೌಡ, ಮಾಜಿ ನಿರ್ದೇಶಕರು, ಎನ್ಟಿಸಿಎಸ್ಟಿ/ಕೆಪಿಸಿಎಲ್, ಚಾರ್ಟರ್ಡ್ ಎಂಜಿನಿಯರ್ ಹಾಗೂ ವಕೀಲರು ಮಾತನಾಡಿ, ದೇಶದ ಅಭಿವೃದ್ಧಿಯಲ್ಲಿ ಇಂಜಿನಿಯರ್ಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದರು. ಸರ್ ಎಂ. ವಿಶ್ವೇಶ್ವರಯ್ಯ ಅವರ ಜನ್ಮದಿನವನ್ನೇ ಇಂಜಿನಿಯರ್ಸ್ ಡೇ ಆಗಿ ಆಚರಿಸುವುದಕ್ಕೆ ಅವರ ತಾಂತ್ರಿಕ ಜ್ಞಾನ ಮಾತ್ರವಲ್ಲದೆ, ಜವಾಬ್ದಾರಿ, ಪ್ರಾಮಾಣಿಕತೆ, ಕರ್ತವ್ಯನಿಷ್ಠೆ ಹಾಗೂ ಸಮಾಜದ ಬಗ್ಗೆ ಹೊಂದಿದ್ದ ಬದ್ಧತೆಯೇ ಪ್ರಮುಖ ಕಾರಣವಾಗಿದೆ ಎಂದರು.
ಮಹಾತ್ಮ ಗಾಂಧೀಜಿಯವರ ಚಿಂತನೆಗಳನ್ನು ಉಲ್ಲೇಖಿಸಿದ ಅವರು, ಯಾವುದೇ ಯೋಜನೆ ಅಥವಾ ನೀತಿಯನ್ನು ರೂಪಿಸುವಾಗ ಸಾಮಾನ್ಯ ಜನರ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಕಾರ್ಯನಿರ್ವಹಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಇಂಜಿನಿಯರ್ಗಳು ಕೇವಲ ತಾಂತ್ರಿಕ ಜ್ಞಾನ ಹೊಂದಿರುವವರಾಗಿರದೆ, ಸಮಾಜದ ಅಗತ್ಯಗಳನ್ನು ಅರ್ಥಮಾಡಿಕೊಂಡು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ಪ್ರಾಂಶುಪಾಲರಾದ ಡಾ. ಗಣೇಶ್ ಡಿ.ಬಿ. ಮಾತನಾಡಿ, ಸರ್ ಎಂ. ವಿಶ್ವೇಶ್ವರಯ್ಯ ಅವರ ಜೀವನ ಮತ್ತು ಸಾಧನೆಗಳು ಪ್ರತಿಯೊಬ್ಬ ಇಂಜಿನಿಯರಿAಗ್ ವಿದ್ಯಾರ್ಥಿಗೂ ಪ್ರೇರಣೆಯಾಗಬೇಕು ಎಂದರು. ಅವರ ಸರಳತೆ, ಶಿಸ್ತು, ಸಮಯಪಾಲನೆ ಹಾಗೂ ನವೀನವಾಗಿ ಯೋಚಿಸುವ ಗುಣಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಸರ್ ಎಂ. ವಿಶ್ವೇಶ್ವರಯ್ಯ ಅವರ ಜನ್ಮಸ್ಥಳ ಮುದ್ದೇನಹಳ್ಳಿಗೆ ವಿದ್ಯಾರ್ಥಿಗಳು ಭೇಟಿ ನೀಡಿ ಅವರ ಜೀವನ ಮತ್ತು ಸಾಧನೆಗಳ ಕುರಿತು ತಿಳಿದುಕೊಳ್ಳಬೇಕು. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯಕ್ಕೆ ಅವರ ಹೆಸರನ್ನೇ ಇಡಲಾಗಿದ್ದು, ಆ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಾಗಿ ಅವರ ಕೊಡುಗೆಗಳನ್ನು ತಿಳಿದುಕೊಳ್ಳುವುದು ನಮ್ಮ ಕರ್ತವ್ಯ ಎಂದರು. ಕೃಷ್ಣರಾಜ ಸಾಗರ ಅಣೆಕಟ್ಟು ಸೇರಿದಂತೆ ಹಲವು ಪ್ರಮುಖ ಯೋಜನೆಗಳಲ್ಲಿ ಅವರ ಇಂಜಿನಿಯರಿAಗ್ ದೃಷ್ಟಿಕೋನ ಮತ್ತು ದೂರದೃಷ್ಟಿ ಕಾಣಬಹುದು. ಆ ಕಾಲದಲ್ಲಿ ಇಂದಿನAತೆ ಇಂಟರ್ನೆಟ್, ಆಧುನಿಕ ಕಂಪ್ಯೂಟರ್ ತಂತ್ರಜ್ಞಾನ ಅಥವಾ ಕೃತಕ ಬುದ್ಧಿಮತ್ತೆಯಂತಹ ಸೌಲಭ್ಯಗಳು ಇರಲಿಲ್ಲ. ಆದರೂ ತಮ್ಮ ಜ್ಞಾನ, ಅನುಭವ ಮತ್ತು ಹೊಸತನದ ಚಿಂತನೆಯ ಮೂಲಕ ಅವರು ದೊಡ್ಡ ಮಟ್ಟದ ಯೋಜನೆಗಳನ್ನು ಯಶಸ್ವಿಯಾಗಿ ರೂಪಿಸಿದರು ಎಂದು ಹೇಳಿದರು. ವಿಶ್ವೇಶ್ವರಯ್ಯ ಅವರು ಭಾರತದಲ್ಲಷ್ಟೇ ಅಲ್ಲದೆ ವಿದೇಶಗಳಲ್ಲಿಯೂ ತಮ್ಮ ತಾಂತ್ರಿಕ ಜ್ಞಾನ ಮತ್ತು ಸೇವೆಯಿಂದ ಗುರುತಿಸಿಕೊಂಡಿದ್ದರು. ಅವರ ಜೀವನವು ಒಬ್ಬ ವ್ಯಕ್ತಿಯ ದೃಢ ಸಂಕಲ್ಪದಿAದ ದೊಡ್ಡ ಬದಲಾವಣೆ ಸಾಧ್ಯ ಎಂಬುದಕ್ಕೆ ಉತ್ತಮ ಉದಾಹರಣೆಯಾಗಿದೆ. ಆದ್ದರಿಂದ ಇಂದಿನ ಯುವ ಇಂಜಿನಿಯರ್ಗಳು ಅವರ ಜೀವನದಿಂದ ಪ್ರೇರಣೆ ಪಡೆದು ಹೊಸ ಆವಿಷ್ಕಾರಗಳತ್ತ ಹೆಜ್ಜೆ ಇಡಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಡೀನ್ ಅಕಾಡೆಮಿಕ್ಸ್ ಡಾ. ಕೆ.ಬಿ. ಪ್ರಕಾಶ್, ಸಿವಿಲ್ ಇಂಜಿನಿಯರಿAಗ್ ವಿಭಾಗದ ಮುಖ್ಯಸ್ಥ ಡಾ. ರಾಹುಲ್ ಪಾಟೀಲ್, ಸಂಯೋಜಕರಾದ ದರ್ಶನ್ ಕೆ ಆರ್, ವಿವಿಧ ವಿಭಾಗಗಳ ಮುಖ್ಯಸ್ಥರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳಿಗೆ ಸರ್ ಎಂ. ವಿಶ್ವೇಶ್ವರಯ್ಯ ಅವರ ಜೀವನ, ಶಿಸ್ತು, ತಾಂತ್ರಿಕ ಸಾಧನೆಗಳು ಮತ್ತು ದೇಶದ ಅಭಿವೃದ್ಧಿಗೆ ಅವರು ನೀಡಿದ ಕೊಡುಗೆಗಳ ಕುರಿತು ಅರಿವು ಮೂಡಿಸಲಾಯಿತು.

