ವಿಜಯಪುರ: ವಿಜಯಪುರ ಜಿಲ್ಲೆಯ ಧರಣಿ ನಡೆಯುತ್ತಿದ್ದ ಸ್ಥಳಕ್ಕೆ ವಿಜಯಪುರ ಜಿಲ್ಲಾಧಿಕಾರಿಗಳು ಆಗಮಿಸಿ, ರೈತರ ಅಹವಾಲು ಹಾಗೂ ಬೇಡಿಕೆಗಳನ್ನು ಆಲಿಸಿದರು. ಬರದಿಂದ ಹಾನಿಗೊಳಗಾದ ರೈತರಿಗೆ ಪ್ರತಿ ಎಕರೆಗೆ ₹50,000 ಪರಿಹಾರ, ರೈತರ ಸಂಪೂರ್ಣ ಸಾಲಮನ್ನಾ, ಬೆಳೆ ವಿಮೆ ತಕ್ಷಣ ಬಿಡುಗಡೆ, ಜಾನುವಾರುಗಳಿಗೆ ಮೇವು ಮತ್ತು ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ರೈತರ ಬದುಕಿಗೆ ಅಗತ್ಯವಾದ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ರೈತರಿಂದ ಮನವಿ ಸಲ್ಲಿಸಲಾಯಿತು.
ಬರದ ತೀವ್ರತೆಯನ್ನು ಪರಿಗಣಿಸಿ ಅರ್ಹ ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಿ, ರೈತರಿಗೆ ಸರ್ಕಾರದ ನೆರವು ತಲುಪಿಸುವಂತೆ ಒತ್ತಾಯಿಸಲಾಯಿತು. ರೈತರ ಸಂಕಷ್ಟವನ್ನು ಕೇವಲ ಅಂಕಿ-ಅಂಶಗಳಾಗಿ ನೋಡದೆ, ಅವರ ಹೊಲದ ವಾಸ್ತವ ಸ್ಥಿತಿಯನ್ನು ಅರ್ಥಮಾಡಿಕೊಂಡು ತ್ವರಿತ ಪರಿಹಾರ ನೀಡಬೇಕಾಗಿದೆ.

