Homeರಾಜ್ಯಜಿಲ್ಲೆಯ ಐವರು ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್

ಜಿಲ್ಲೆಯ ಐವರು ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್


ದಾವಣಗೆರೆ: ರಾಜ್ಯ ಸರ್ಕಾರದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವ ಯೋಜನೆಯಡಿ ದಾವಣಗೆರೆ ಜಿಲ್ಲೆಯ ಐವರು ಪತ್ರಕರ್ತರು ಆಯ್ಕೆಯಾಗಿದ್ದು, ಅವರಿಗೆ ಉಚಿತ ಬಸ್ ಪಾಸ್ ವಿತರಿಸಲಾಗಿದೆ.
ಜಗಳೂರು ತಾಲೂಕಿನ ನಾಲ್ವರು ಹಾಗೂ ಹೊನ್ನಾಳಿ ತಾಲೂಕಿನ ಒಬ್ಬ ಗ್ರಾಮೀಣ ಪತ್ರಕರ್ತರು ಯೋಜನೆಯ ಸೌಲಭ್ಯ ಪಡೆದಿದ್ದಾರೆ. ಜಗಳೂರು ತಾಲೂಕಿನ ಕೆ.ಎಂ. ಜಗದೀಶ್, ಚಿದಾನಂದಪ್ಪ, ರವಿಕುಮಾರ್, ಚೇತನ್ ಕುಮಾರ್ ಹಾಗೂ ಹೊನ್ನಾಳಿ ತಾಲೂಕಿನ ಯು.ಬಿ. ಜಯಪ್ಪ ಅವರಿಗೆ ಉಚಿತ ಬಸ್ ಪಾಸ್ ವಿತರಿಸಲಾಯಿತು.
ದಾವಣಗೆರೆಯಲ್ಲಿ ನಡೆದಿದ್ದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 38ನೇ ರಾಜ್ಯ ಮಟ್ಟದ ಸಮ್ಮೇಳನದಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವ ಯೋಜನೆಯನ್ನು ಘೋಷಿಸಿದ್ದರು.
ಗ್ರಾಮೀಣ ಪ್ರದೇಶಗಳಲ್ಲಿನ ಸಮಸ್ಯೆಗಳನ್ನು ಸರ್ಕಾರ ಹಾಗೂ ಸಾರ್ವಜನಿಕರ ಗಮನಕ್ಕೆ ತರುವ ಮೂಲಕ ಪರಿಹಾರಕ್ಕೆ ಕಾರಣವಾಗುವ ನಿಟ್ಟಿನಲ್ಲಿ ಪತ್ರಕರ್ತರು ಕಾರ್ಯನಿರ್ವಹಿಸುತ್ತಿದ್ದಾರೆ. ಗ್ರಾಮೀಣ ಪತ್ರಕರ್ತರಿಗೆ ಸಾರಿಗೆ ಸೌಲಭ್ಯ ಕಲ್ಪಿಸುವ ಮೂಲಕ ಅವರ ವೃತ್ತಿ ಚಟುವಟಿಕೆಗಳಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಯೋಜನೆ ಜಾರಿಗೊಳಿಸಲಾಗಿತ್ತು.
ಬಸ್ ಪಾಸ್ ವಿತರಣೆ ಮಾಡುವ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಕೆ. ಚಂದ್ರಣ್ಣ, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಬದರೀನಾಥ್, ಖಜಾಂಚಿ ಜೆ.ಎಸ್. ವೀರೇಶ್, ಪತ್ರಕರ್ತರಾದ ಮಧು ಕುಂದುವಾಡ ಹಾಗೂ ರಾಮ್ ಪ್ರಸಾದ್ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

ಜಾಹೀರಾತು

spot_img

Most Popular

Recent Comments